ಕಾಂಗ್ರೆಸ್ ಪರಂಪರೆಯಂತೆ ಅಗಲಿದ ನಾಯಕರ ಕುಟುಂಬಕ್ಕೆ ಟಿಕೆಟ್: ಎರಡೂ ಕ್ಷೇತ್ರಗಳಲ್ಲಿ ನಮ್ಮದೇ ಜಯ’ – ಸಿಎಂ, ಡಿಸಿಎಂ ಪ್ರಚಾರ

mirrortvkannada.com
Date : 24 March 2026, 6:46 pm Posted By : MIRROR TV KANNADA

ಕಾಂಗ್ರೆಸ್ ಪರಂಪರೆಯಂತೆ ಅಗಲಿದ ನಾಯಕರ ಕುಟುಂಬಕ್ಕೆ ಟಿಕೆಟ್: ಎರಡೂ ಕ್ಷೇತ್ರಗಳಲ್ಲಿ ನಮ್ಮದೇ ಜಯ’ – ಸಿಎಂ, ಡಿಸಿಎಂ ಪ್ರಚಾರ

ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯ ಪ್ರಚಾರ ಕಣ ರಂಗೇರಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭರ್ಜರಿ ಮತಯಾಚನೆ ನಡೆಸಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಉಭಯ ನಾಯಕರು, "ಕಾಂಗ್ರೆಸ್ ಪಕ್ಷದ ಹಿಂದಿನ ಪರಂಪರೆಯಂತೆ, ನಮ್ಮನ್ನಗಲಿದ ನಾಯಕರ ಸೇವೆ ಮತ್ತು ತ್ಯಾಗವನ್ನು ಸ್ಮರಿಸಿ ಅವರ ಕುಟುಂಬಸ್ಥರಿಗೆ ಈ ಬಾರಿ ಟಿಕೆಟ್ ನೀಡಲಾಗಿದೆ. ನಮ್ಮ ಜನಪರ ಆಡಳಿತ ಹಾಗೂ ಪಕ್ಷದ ಅಭ್ಯರ್ಥಿಗಳ ಮೇಲಿನ ನಂಬಿಕೆಯಿಂದಾಗಿ ಉಪಚುನಾವಣೆ ನಡೆಯುತ್ತಿರುವ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ನಿಶ್ಚಿತ ಜಯ ಸಿಗಲಿದೆ" ಎಂದು ತೀವ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚುನಾವಣಾ ಪ್ರಚಾರದ ವೇಳೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ಪ್ರತಿಪಕ್ಷವು ತನ್ನ ಆಡಳಿತಾವಧಿಯಲ್ಲಿ ಯಾವುದೇ ಅರ್ಥಪೂರ್ಣ ಅಭಿವೃದ್ಧಿ ಕಾರ್ಯಗಳನ್ನು ಮಾಡುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು. ಅಭಿವೃದ್ಧಿ ಮರೆತಿರುವ ಬಿಜೆಪಿ ಕೇವಲ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಾ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ಅವರು ಆರೋಪಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಪ್ರತಿಯೊಂದು ಬಡ ಕುಟುಂಬಕ್ಕೂ ತಲುಪುತ್ತಿದ್ದು, ಇವುಗಳ ಲಾಭವನ್ನು ಬಿಜೆಪಿಯ ಬೆಂಬಲಿಗರು ಹಾಗೂ ಕಾರ್ಯಕರ್ತರು ಕೂಡ ಪಡೆಯುತ್ತಿದ್ದಾರೆ. ಹೀಗಾಗಿ, ಪ್ರಜ್ಞಾವಂತ ಮತದಾರರು ಕೇವಲ ಅಭಿವೃದ್ಧಿಯನ್ನು ಆಧಾರವಾಗಿಟ್ಟುಕೊಂಡು ಕಾಂಗ್ರೆಸ್ ಬೆಂಬಲಕ್ಕೆ ನಿಲ್ಲಲಿದ್ದಾರೆ ಎಂದರು.
ಸ್ಥಳೀಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಬಾಗಲಕೋಟೆ ಭಾಗದಲ್ಲಿ ಪ್ರಸ್ತಾವಿತ ವೈದ್ಯಕೀಯ ಕಾಲೇಜು ನಿರ್ಮಾಣ ಸೇರಿದಂತೆ ಅನೇಕ ಪ್ರಮುಖ ಯೋಜನೆಗಳು ಹಿರಿಯ ನಾಯಕ ಹೆಚ್. ವೈ. ಮೇಟಿ ಅವರ ಸತತ ಪ್ರಯತ್ನಗಳಿಂದಲೇ ಆರಂಭಗೊಂಡವು ಎಂದು ಸ್ಮರಿಸಿದರು. ಇದೇ ವೇಳೆ, ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಭಾರಿ ಅಂತರದಿಂದ ಗೆಲ್ಲಿಸುವ ಉದ್ದೇಶದಿಂದ ಸಿದ್ದರಾಮಯ್ಯ ಅವರು ಬಾಗಲಕೋಟೆಯಲ್ಲಿ ಸತತ ನಾಲ್ಕು ದಿನಗಳ ಕಾಲ ವಾಸ್ತವ್ಯ ಹೂಡಿ, ಹಳ್ಳಿಗಳು ಹಾಗೂ ವಾರ್ಡ್‌ಗಳ ಮಟ್ಟದಲ್ಲಿ ವ್ಯಾಪಕ ಪ್ರಚಾರ ನಡೆಸುವುದಾಗಿ ಘೋಷಿಸಿದ್ದಾರೆ.

⬇ DOWNLOAD
×

ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯ ಪ್ರಚಾರ ಕಣ ರಂಗೇರಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭರ್ಜರಿ ಮತಯಾಚನೆ ನಡೆಸಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಉಭಯ ನಾಯಕರು, “ಕಾಂಗ್ರೆಸ್ ಪಕ್ಷದ ಹಿಂದಿನ ಪರಂಪರೆಯಂತೆ, ನಮ್ಮನ್ನಗಲಿದ ನಾಯಕರ ಸೇವೆ ಮತ್ತು ತ್ಯಾಗವನ್ನು ಸ್ಮರಿಸಿ ಅವರ ಕುಟುಂಬಸ್ಥರಿಗೆ ಈ ಬಾರಿ ಟಿಕೆಟ್ ನೀಡಲಾಗಿದೆ. ನಮ್ಮ ಜನಪರ ಆಡಳಿತ ಹಾಗೂ ಪಕ್ಷದ ಅಭ್ಯರ್ಥಿಗಳ ಮೇಲಿನ ನಂಬಿಕೆಯಿಂದಾಗಿ ಉಪಚುನಾವಣೆ ನಡೆಯುತ್ತಿರುವ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ನಿಶ್ಚಿತ ಜಯ ಸಿಗಲಿದೆ” ಎಂದು ತೀವ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಚುನಾವಣಾ ಪ್ರಚಾರದ ವೇಳೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ಪ್ರತಿಪಕ್ಷವು ತನ್ನ ಆಡಳಿತಾವಧಿಯಲ್ಲಿ ಯಾವುದೇ ಅರ್ಥಪೂರ್ಣ ಅಭಿವೃದ್ಧಿ ಕಾರ್ಯಗಳನ್ನು ಮಾಡುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು. ಅಭಿವೃದ್ಧಿ ಮರೆತಿರುವ ಬಿಜೆಪಿ ಕೇವಲ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಾ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ಅವರು ಆರೋಪಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಪ್ರತಿಯೊಂದು ಬಡ ಕುಟುಂಬಕ್ಕೂ ತಲುಪುತ್ತಿದ್ದು, ಇವುಗಳ ಲಾಭವನ್ನು ಬಿಜೆಪಿಯ ಬೆಂಬಲಿಗರು ಹಾಗೂ ಕಾರ್ಯಕರ್ತರು ಕೂಡ ಪಡೆಯುತ್ತಿದ್ದಾರೆ. ಹೀಗಾಗಿ, ಪ್ರಜ್ಞಾವಂತ ಮತದಾರರು ಕೇವಲ ಅಭಿವೃದ್ಧಿಯನ್ನು ಆಧಾರವಾಗಿಟ್ಟುಕೊಂಡು ಕಾಂಗ್ರೆಸ್ ಬೆಂಬಲಕ್ಕೆ ನಿಲ್ಲಲಿದ್ದಾರೆ ಎಂದರು.

ಸ್ಥಳೀಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಬಾಗಲಕೋಟೆ ಭಾಗದಲ್ಲಿ ಪ್ರಸ್ತಾವಿತ ವೈದ್ಯಕೀಯ ಕಾಲೇಜು ನಿರ್ಮಾಣ ಸೇರಿದಂತೆ ಅನೇಕ ಪ್ರಮುಖ ಯೋಜನೆಗಳು ಹಿರಿಯ ನಾಯಕ ಹೆಚ್. ವೈ. ಮೇಟಿ ಅವರ ಸತತ ಪ್ರಯತ್ನಗಳಿಂದಲೇ ಆರಂಭಗೊಂಡವು ಎಂದು ಸ್ಮರಿಸಿದರು. ಇದೇ ವೇಳೆ, ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಭಾರಿ ಅಂತರದಿಂದ ಗೆಲ್ಲಿಸುವ ಉದ್ದೇಶದಿಂದ ಸಿದ್ದರಾಮಯ್ಯ ಅವರು ಬಾಗಲಕೋಟೆಯಲ್ಲಿ ಸತತ ನಾಲ್ಕು ದಿನಗಳ ಕಾಲ ವಾಸ್ತವ್ಯ ಹೂಡಿ, ಹಳ್ಳಿಗಳು ಹಾಗೂ ವಾರ್ಡ್‌ಗಳ ಮಟ್ಟದಲ್ಲಿ ವ್ಯಾಪಕ ಪ್ರಚಾರ ನಡೆಸುವುದಾಗಿ ಘೋಷಿಸಿದ್ದಾರೆ.

Editor Reporter
mirrortvkannada.com

ಕಾಂಗ್ರೆಸ್ ಪರಂಪರೆಯಂತೆ ಅಗಲಿದ ನಾಯಕರ ಕುಟುಂಬಕ್ಕೆ ಟಿಕೆಟ್: ಎರಡೂ ಕ್ಷೇತ್ರಗಳಲ್ಲಿ ನಮ್ಮದೇ ಜಯ’ – ಸಿಎಂ, ಡಿಸಿಎಂ ಪ್ರಚಾರ

ರಾಜ್ಯದಲ್ಲಿ ನಡೆಯುತ್ತಿರುವ ಉಪಚುನಾವಣೆಯ ಪ್ರಚಾರ ಕಣ ರಂಗೇರಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಭರ್ಜರಿ ಮತಯಾಚನೆ ನಡೆಸಿದ್ದಾರೆ. ಪ್ರಚಾರದ ವೇಳೆ ಮಾತನಾಡಿದ ಉಭಯ ನಾಯಕರು, "ಕಾಂಗ್ರೆಸ್ ಪಕ್ಷದ ಹಿಂದಿನ ಪರಂಪರೆಯಂತೆ, ನಮ್ಮನ್ನಗಲಿದ ನಾಯಕರ ಸೇವೆ ಮತ್ತು ತ್ಯಾಗವನ್ನು ಸ್ಮರಿಸಿ ಅವರ ಕುಟುಂಬಸ್ಥರಿಗೆ ಈ ಬಾರಿ ಟಿಕೆಟ್ ನೀಡಲಾಗಿದೆ. ನಮ್ಮ ಜನಪರ ಆಡಳಿತ ಹಾಗೂ ಪಕ್ಷದ ಅಭ್ಯರ್ಥಿಗಳ ಮೇಲಿನ ನಂಬಿಕೆಯಿಂದಾಗಿ ಉಪಚುನಾವಣೆ ನಡೆಯುತ್ತಿರುವ ಎರಡೂ ಕ್ಷೇತ್ರಗಳಲ್ಲಿ ಕಾಂಗ್ರೆಸ್‌ಗೆ ನಿಶ್ಚಿತ ಜಯ ಸಿಗಲಿದೆ" ಎಂದು ತೀವ್ರ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಚುನಾವಣಾ ಪ್ರಚಾರದ ವೇಳೆ ಬಿಜೆಪಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಸಿಎಂ ಸಿದ್ದರಾಮಯ್ಯ, ಪ್ರತಿಪಕ್ಷವು ತನ್ನ ಆಡಳಿತಾವಧಿಯಲ್ಲಿ ಯಾವುದೇ ಅರ್ಥಪೂರ್ಣ ಅಭಿವೃದ್ಧಿ ಕಾರ್ಯಗಳನ್ನು ಮಾಡುವಲ್ಲಿ ವಿಫಲವಾಗಿದೆ ಎಂದು ಟೀಕಿಸಿದರು. ಅಭಿವೃದ್ಧಿ ಮರೆತಿರುವ ಬಿಜೆಪಿ ಕೇವಲ ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡುತ್ತಾ ಜನರ ದಿಕ್ಕು ತಪ್ಪಿಸುತ್ತಿದೆ ಎಂದು ಅವರು ಆರೋಪಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಪ್ರತಿಯೊಂದು ಬಡ ಕುಟುಂಬಕ್ಕೂ ತಲುಪುತ್ತಿದ್ದು, ಇವುಗಳ ಲಾಭವನ್ನು ಬಿಜೆಪಿಯ ಬೆಂಬಲಿಗರು ಹಾಗೂ ಕಾರ್ಯಕರ್ತರು ಕೂಡ ಪಡೆಯುತ್ತಿದ್ದಾರೆ. ಹೀಗಾಗಿ, ಪ್ರಜ್ಞಾವಂತ ಮತದಾರರು ಕೇವಲ ಅಭಿವೃದ್ಧಿಯನ್ನು ಆಧಾರವಾಗಿಟ್ಟುಕೊಂಡು ಕಾಂಗ್ರೆಸ್ ಬೆಂಬಲಕ್ಕೆ ನಿಲ್ಲಲಿದ್ದಾರೆ ಎಂದರು.
ಸ್ಥಳೀಯ ಅಭಿವೃದ್ಧಿ ಕಾರ್ಯಗಳ ಬಗ್ಗೆ ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು, ಬಾಗಲಕೋಟೆ ಭಾಗದಲ್ಲಿ ಪ್ರಸ್ತಾವಿತ ವೈದ್ಯಕೀಯ ಕಾಲೇಜು ನಿರ್ಮಾಣ ಸೇರಿದಂತೆ ಅನೇಕ ಪ್ರಮುಖ ಯೋಜನೆಗಳು ಹಿರಿಯ ನಾಯಕ ಹೆಚ್. ವೈ. ಮೇಟಿ ಅವರ ಸತತ ಪ್ರಯತ್ನಗಳಿಂದಲೇ ಆರಂಭಗೊಂಡವು ಎಂದು ಸ್ಮರಿಸಿದರು. ಇದೇ ವೇಳೆ, ಉಪಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳನ್ನು ಭಾರಿ ಅಂತರದಿಂದ ಗೆಲ್ಲಿಸುವ ಉದ್ದೇಶದಿಂದ ಸಿದ್ದರಾಮಯ್ಯ ಅವರು ಬಾಗಲಕೋಟೆಯಲ್ಲಿ ಸತತ ನಾಲ್ಕು ದಿನಗಳ ಕಾಲ ವಾಸ್ತವ್ಯ ಹೂಡಿ, ಹಳ್ಳಿಗಳು ಹಾಗೂ ವಾರ್ಡ್‌ಗಳ ಮಟ್ಟದಲ್ಲಿ ವ್ಯಾಪಕ ಪ್ರಚಾರ ನಡೆಸುವುದಾಗಿ ಘೋಷಿಸಿದ್ದಾರೆ.

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్