ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ಹಾವಳಿ: ಪಾದಯಾತ್ರೆ, ದ್ವಿಚಕ್ರ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿಷೇಧ

mirrortvkannada.com
Date : 13 July 2026, 10:26 pm Posted By : MIRROR TV KANNADA

ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ಹಾವಳಿ: ಪಾದಯಾತ್ರೆ, ದ್ವಿಚಕ್ರ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿಷೇಧ

ಚಾಮರಾಜನಗರ ಜಿಲ್ಲೆಯ ಪ್ರಸಿದ್ಧ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದಲ್ಲಿ ಚಿರತೆ ಹಾವಳಿ ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಭಕ್ತರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಜಿಲ್ಲಾಡಳಿತ ಮಹತ್ವದ ಕ್ರಮ ಕೈಗೊಂಡಿದೆ. ಇಂದಿನಿಂದ ಜನವರಿ 24ರ ಮಧ್ಯರಾತ್ರಿವರೆಗೆ ಕಾಲ್ನಡಿಗೆಯಲ್ಲಿ ಹಾಗೂ ದ್ವಿಚಕ್ರ ವಾಹನಗಳಲ್ಲಿ ಬೆಟ್ಟಕ್ಕೆ ತೆರಳುವುದನ್ನು ತಾತ್ಕಾಲಿಕವಾಗಿ ನಿಷೇಧಿಸಿ ಅಪರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ಹನೂರು ತಾಲೂಕಿನ ತಾಳುಬೆಟ್ಟ ಪ್ರದೇಶದಲ್ಲಿ ಬುಧವಾರ ಪಾದಯಾತ್ರೆಯಲ್ಲಿ ತೆರಳುತ್ತಿದ್ದ ಭಕ್ತನ ಮೇಲೆ ಚಿರತೆ ದಾಳಿ ನಡೆಸಿದ್ದು, ಈ ದುರ್ಘಟನೆಯಲ್ಲಿ ಯುವಕನೊಬ್ಬ ಮೃತಪಟ್ಟಿದ್ದಾನೆ. ಘಟನೆಯ ಬಳಿಕ ಅರಣ್ಯ ಇಲಾಖೆ ಚಿರತೆಯನ್ನು ಸೆರೆಹಿಡಿಯಲು ವ್ಯಾಪಕ ಕಾರ್ಯಾಚರಣೆ ಆರಂಭಿಸಿದೆ.

ಅರಣ್ಯ ಇಲಾಖೆಯ ಕಾರ್ಯಾಚರಣೆಗೆ ಯಾವುದೇ ಅಡ್ಡಿಯಾಗದಂತೆ ಹಾಗೂ ಭಕ್ತರ ಜೀವಕ್ಕೆ ಅಪಾಯವಾಗದಂತೆ ಮುನ್ನೆಚ್ಚರಿಕಾ ಕ್ರಮವಾಗಿ ಈ ನಿರ್ಬಂಧ ಜಾರಿಗೊಳಿಸಲಾಗಿದೆ. ಇಂದು ಸಂಜೆ 6 ಗಂಟೆಯಿಂದಲೇ ಆದೇಶ ಜಾರಿಗೆ ಬಂದಿದ್ದು, ಭಕ್ತರು ಆಡಳಿತದ ಸೂಚನೆಗಳನ್ನು ಪಾಲಿಸುವಂತೆ ಅಧಿಕಾರಿಗಳು ಮನವಿ ಮಾಡಿದ್ದಾರೆ.

⬇ DOWNLOAD
×

Editor Reporter

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్