14 ವರ್ಷದಲ್ಲಿ ₹1 ಕೋಟಿ ತೆರಿಗೆ ಪಾವತಿ: ಉದ್ಯೋಗ ಕಳೆದುಕೊಂಡ ವೃತ್ತಿಪರನ ಅಸಮಾಧಾನ ವೈರಲ್

ಇಂದಿನ ಕಾರ್ಪೋರೇಟ್ ಜಗತ್ತಿನಲ್ಲಿ ಉದ್ಯೋಗ ಭದ್ರತೆ ದಿನೇ ದಿನೇ ಕಡಿಮೆಯಾಗುತ್ತಿದೆ. ಲೇಆಫ್ ಹೆಸರಿನಲ್ಲಿ ಕಂಪನಿಗಳು ಉದ್ಯೋಗಿಗಳನ್ನು ಕೆಲಸದಿಂದ ತೆಗೆಯುವುದು ಸಾಮಾನ್ಯವಾಗುತ್ತಿರುವ ಈ ಸಂದರ್ಭದಲ್ಲಿ, ವರ್ಷಗಳ ಕಾಲ ಪ್ರಾಮಾಣಿಕವಾಗಿ ಆದಾಯ ತೆರಿಗೆ ಪಾವತಿಸಿದರೂ ಕಷ್ಟದ ಸಮಯದಲ್ಲಿ ಸರ್ಕಾರದಿಂದ ನೆರವು ಸಿಗುವುದಿಲ್ಲ ಎಂಬ ವಿಚಾರ ಮತ್ತೊಮ್ಮೆ ಚರ್ಚೆಗೆ ಬಂದಿದೆ.

ಭಾರತೀಯ ವೃತ್ತಿಪರರೊಬ್ಬರು ತಮ್ಮ 14 ವರ್ಷಗಳ ವೃತ್ತಿಜೀವನದಲ್ಲಿ ₹1 ಕೋಟಿಗೂ ಹೆಚ್ಚು ಆದಾಯ ತೆರಿಗೆ ಪಾವತಿಸಿದ್ದಾಗಿ ತಿಳಿಸಿದ್ದಾರೆ. ಆದರೆ ಇತ್ತೀಚೆಗೆ ಉದ್ಯೋಗ ಕಳೆದುಕೊಂಡಿರುವ ಅವರು, ಸರ್ಕಾರದಿಂದ ಯಾವುದೇ ಆರ್ಥಿಕ ಬೆಂಬಲ ಅಥವಾ ನಿರುದ್ಯೋಗ ಭತ್ಯೆ ದೊರಕದಿರುವುದಕ್ಕೆ ಎಕ್ಸ್ ಖಾತೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಈ ಪೋಸ್ಟ್ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ಅನೇಕರು ಉದ್ಯೋಗ ಕಳೆದುಕೊಂಡವರಿಗೆ ಸರ್ಕಾರದಿಂದ ಕನಿಷ್ಠ ಆರ್ಥಿಕ ಭದ್ರತೆ ಒದಗಿಸುವ ವ್ಯವಸ್ಥೆ ಇರಬೇಕೆಂದು ಅಭಿಪ್ರಾಯಪಟ್ಟಿದ್ದಾರೆ. ಮತ್ತೊಂದೆಡೆ, ಕೆಲವರು ತೆರಿಗೆ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳ ಕುರಿತು ಸಮಗ್ರ ಚರ್ಚೆ ಅಗತ್ಯವಿದೆ ಎಂದು ಹೇಳಿದ್ದಾರೆ.

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్