ದಳಪತಿ ವಿಜಯ್ ಅವರ ‘ಜನ ನಾಯಗನ್’ ಟೀಸರ್‌ಗೆ ಭಾರಿ ಮೆಚ್ಚುಗೆ

ತಮಿಳುನಾಡಿನ ಮುಖ್ಯಮಂತ್ರಿ ಆಗಿ ಅಧಿಕಾರ ವಹಿಸಿಕೊಂಡ ಬಳಿಕ ದಳಪತಿ ವಿಜಯ್ ಅಭಿನಯದ ಬಹುನಿರೀಕ್ಷಿತ ‘ಜನ ನಾಯಗನ್’ ಸಿನಿಮಾ ಜುಲೈ 23ರಂದು ವಿಶ್ವದಾದ್ಯಂತ ತೆರೆ ಕಾಣಲು ಸಿದ್ಧವಾಗಿದೆ. ಬಿಡುಗಡೆಗೂ ಮುನ್ನ ಬಿಡುಗಡೆಯಾದ ಟೀಸರ್ ತಮಿಳುನಾಡಿನಷ್ಟೇ ಅಲ್ಲದೆ ಕರ್ನಾಟಕ ಸೇರಿದಂತೆ ದೇಶದಾದ್ಯಂತ ಭಾರಿ ಸದ್ದು ಮಾಡುತ್ತಿದೆ.

ಚಿತ್ರದ 18 ಸೆಕೆಂಡ್‌ಗಳ ಟೀಸರ್ ಅನ್ನು ಕೆವಿನ್ ಪ್ರೊಡಕ್ಷನ್ ತನ್ನ ಅಧಿಕೃತ ಇನ್‌ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಂಡಿದೆ. ಟೀಸರ್ ಬಿಡುಗಡೆಯಾದ ಕ್ಷಣದಿಂದಲೇ ಸಾಮಾಜಿಕ ಜಾಲತಾಣಗಳಲ್ಲಿ ದೊಡ್ಡ ಮಟ್ಟದ ಚರ್ಚೆಗೆ ಗ್ರಾಸವಾಗಿದ್ದು, ಅಭಿಮಾನಿಗಳಲ್ಲಿ ಚಿತ್ರದ ಮೇಲಿನ ನಿರೀಕ್ಷೆಯನ್ನು ಮತ್ತಷ್ಟು ಹೆಚ್ಚಿಸಿದೆ.

ಟೀಸರ್‌ನಲ್ಲಿ ದಳಪತಿ ವಿಜಯ್ ಅವರ ಮಾಸ್ ಲುಕ್ ಹಾಗೂ ಪ್ರಭಾವಿ ಪ್ರಸ್ತುತಿ ಅಭಿಮಾನಿಗಳ ಗಮನ ಸೆಳೆದಿದೆ. ವಿಡಿಯೊಗೆ ಅಭಿಮಾನಿಗಳಿಂದ ಮೆಚ್ಚುಗೆಗಳ ಸುರಿಮಳೆ ಹರಿದುಬರುತ್ತಿದ್ದು, ‘ಜನ ನಾಯಗನ್’ ಸಿನಿಮಾ ಬಾಕ್ಸ್ ಆಫೀಸ್‌ನಲ್ಲಿ ಹೊಸ ದಾಖಲೆಗಳನ್ನು ನಿರ್ಮಿಸಲಿದೆ ಎಂಬ ವಿಶ್ವಾಸ ವ್ಯಕ್ತವಾಗುತ್ತಿದೆ.

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్