ಬಾಲಿವುಡ್ ನಟ ಸಲ್ಮಾನ್ ಖಾನ್ ಅವರು NEET ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಹಿನ್ನೆಲೆಯಲ್ಲಿ ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳಿಗೆ ಮನವಿ ಮಾಡಿದ್ದಾರೆ. ವಿದ್ಯಾರ್ಥಿಗಳು ಆತಂಕಪಡಬಾರದು, ಪ್ರಧಾನಮಂತ್ರಿ ನರೇಂದ್ರ ಮೋದಿ ಅಭಯ ನೀಡಿದ್ದಾರೆ ಎಂದು ಅವರು ತಿಳಿಸಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿರುವ ಸಲ್ಮಾನ್ ಖಾನ್, “ವಿದ್ಯಾರ್ಥಿಗಳೇ, ಯೋಚಿಸಬೇಡಿ. ಪ್ರಧಾನಿ ಮೋದಿ ಅಭಯ ನೀಡಿದ್ದಾರೆ. ಆರೋಪಿಗಳಿಗೆ ತಕ್ಕ ಶಿಕ್ಷೆ ಆಗುತ್ತದೆ” ಎಂದು ಬರೆದಿದ್ದಾರೆ. ಜೊತೆಗೆ, ಪ್ರತಿಭಟನೆ ನಡೆಸುತ್ತಿರುವ ವಿದ್ಯಾರ್ಥಿಗಳು ತಮ್ಮ ಮನೆಗಳಿಗೆ ಮರಳುವಂತೆ ಮನವಿ ಮಾಡಿದ್ದಾರೆ.
ನೀಟ್ ಪೇಪರ್ ಲೀಕ್ ಪ್ರಕರಣದ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆಗಳು ಮುಂದುವರಿಯುತ್ತಿರುವ ಸಂದರ್ಭದಲ್ಲಿ ಸಲ್ಮಾನ್ ಖಾನ್ ಅವರ ಈ ಮನವಿ ಗಮನ ಸೆಳೆದಿದೆ. ಆರೋಪಿಗಳಿಗೆ ಕಠಿಣ ಶಿಕ್ಷೆ ವಿಧಿಸಲಾಗುತ್ತದೆ ಎಂಬ ವಿಶ್ವಾಸ ವ್ಯಕ್ತಪಡಿಸಿರುವ ಅವರು, ವಿದ್ಯಾರ್ಥಿಗಳು ಶಾಂತಿಯುತವಾಗಿ ಮನೆಗಳಿಗೆ ಮರಳುವಂತೆ ಕೇಳಿಕೊಂಡಿದ್ದಾರೆ.









