‘ರಾಮಾಯಣ’ ಟ್ರೇಲರ್‌ನಲ್ಲಿ ರಾವಣನಾಗಿ ಯಶ್ ಅಬ್ಬರ, ಅಭಿಮಾನಿಗಳಿಂದ ಭರ್ಜರಿ ಮೆಚ್ಚುಗೆ

mirrortvkannada.com
Date : 30 July 2026, 1:30 pm Posted By : MIRROR TV KANNADA

‘ರಾಮಾಯಣ’ ಟ್ರೇಲರ್‌ನಲ್ಲಿ ರಾವಣನಾಗಿ ಯಶ್ ಅಬ್ಬರ, ಅಭಿಮಾನಿಗಳಿಂದ ಭರ್ಜರಿ ಮೆಚ್ಚುಗೆ

ಬಹುನಿರೀಕ್ಷಿತ ರಾಮಾಯಣ ಚಿತ್ರದ ಟ್ರೇಲರ್ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಿದ್ದು, ರಾವಣನ ಪಾತ್ರದಲ್ಲಿ ರಾಕಿಂಗ್ ಸ್ಟಾರ್ ಯಶ್ ಅವರ ರೌದ್ರಾವತಾರ ಪ್ರೇಕ್ಷಕರಿಂದ ಭಾರೀ ಮೆಚ್ಚುಗೆ ಪಡೆಯುತ್ತಿದೆ. ಟ್ರೇಲರ್‌ನಲ್ಲಿ ಯಶ್ ಅವರ ಪ್ರಭಾವವೇ ಹೆಚ್ಚಾಗಿ ಕಾಣಿಸಿಕೊಂಡಿದ್ದು, ಅವರ ಎಂಟ್ರಿ ದೃಶ್ಯಕ್ಕೆ ಚಿತ್ರಮಂದಿರಗಳಲ್ಲಿ ಅಭಿಮಾನಿಗಳು ಸಂಭ್ರಮ ವ್ಯಕ್ತಪಡಿಸಿದ್ದಾರೆ.

ಟ್ರೇಲರ್ ವೀಕ್ಷಿಸಿದ ಸಿನಿಪ್ರಿಯರು ಸಾಮಾಜಿಕ ಜಾಲತಾಣಗಳಲ್ಲಿ ಯಶ್ ಅವರ ಅಭಿನಯವನ್ನು ಕೊಂಡಾಡುತ್ತಿದ್ದಾರೆ. ರಾವಣನ ಪಾತ್ರದಲ್ಲಿ ಅವರ ಕಣ್ಣುಗಳಲ್ಲಿನ ತೀವ್ರತೆ, ಗಂಭೀರ ವ್ಯಕ್ತಿತ್ವ ಹಾಗೂ ಪರದೆಯ ಮೇಲಿನ ಪ್ರಭಾವಶಾಲಿ ಹಾಜರಾತಿ ಟ್ರೇಲರ್‌ನ ಪ್ರಮುಖ ಆಕರ್ಷಣೆಯಾಗಿದೆ ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.

ಕೆಜಿಎಫ್ ಸರಣಿಯ ಬಳಿಕ ವಿಶ್ವಮಟ್ಟದಲ್ಲಿ ಗುರುತಿಸಿಕೊಂಡಿರುವ ಯಶ್, ಟಾಕ್ಸಿಕ್ ಚಿತ್ರದ ಜೊತೆಗೆ ರಾಮಾಯಣದಲ್ಲೂ ಹೊಸ ರೀತಿಯ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಭವ್ಯ ದೃಶ್ಯ ವೈಭವ, ಅದ್ದೂರಿ ನಿರ್ಮಾಣ ಮತ್ತು ಯಶ್ ಅವರ ಅಭಿನಯದ ಕಾರಣದಿಂದ ರಾಮಾಯಣ ಬಾಕ್ಸ್ ಆಫೀಸ್‌ನಲ್ಲಿ ದೊಡ್ಡ ಯಶಸ್ಸು ಸಾಧಿಸುವ ಸಾಧ್ಯತೆ ಇದೆ ಎಂಬ ಅಭಿಪ್ರಾಯವನ್ನು ಅಭಿಮಾನಿಗಳು ಹಾಗೂ ಸಿನಿವಿಶ್ಲೇಷಕರು ವ್ಯಕ್ತಪಡಿಸುತ್ತಿದ್ದಾರೆ.

⬇ DOWNLOAD
×

Editor Reporter

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్