ಪಾಕಿಸ್ತಾನ ಬಾಂಬ್ ಸ್ಫೋಟ: ಖೈಬರ್ ಪಖ್ತುಂಖ್ವಾದಲ್ಲಿ ಶಾಂತಿ ರ‍್ಯಾಲಿ ವೇಳೆ ಭೀಕರ ದಾಳಿ, 13 ಮಂದಿ ಸಾವು

mirrortvkannada.com
Date : 03 August 2026, 10:18 pm Posted By : MIRROR TV KANNADA

ಪಾಕಿಸ್ತಾನ ಬಾಂಬ್ ಸ್ಫೋಟ: ಖೈಬರ್ ಪಖ್ತುಂಖ್ವಾದಲ್ಲಿ ಶಾಂತಿ ರ‍್ಯಾಲಿ ವೇಳೆ ಭೀಕರ ದಾಳಿ, 13 ಮಂದಿ ಸಾವು

ಇಸ್ಲಾಮಾಬಾದ್: ಪಾಕಿಸ್ತಾನದ ಖೈಬರ್ ಪಖ್ತುಂಖ್ವಾ ಪ್ರಾಂತ್ಯದಲ್ಲಿ ನಡೆದ ಶಾಂತಿ ರ‍್ಯಾಲಿ ವೇಳೆ ಭೀಕರ ಬಾಂಬ್ ಸ್ಫೋಟ ಸಂಭವಿಸಿದ್ದು, ಪೊಲೀಸ್ ಸಿಬ್ಬಂದಿ ಸೇರಿದಂತೆ 13 ಮಂದಿ ಮೃತಪಟ್ಟಿದ್ದಾರೆ. ಘಟನೆಯಲ್ಲಿ ಕನಿಷ್ಠ 18 ಮಂದಿ ಗಾಯಗೊಂಡಿದ್ದಾರೆ. ಸ್ಫೋಟದ ಭಯಾನಕ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದು, ಘಟನೆಯ ತೀವ್ರತೆಯನ್ನು ತೋರಿಸುತ್ತಿವೆ.

ಕಳೆದ ಕೆಲವು ತಿಂಗಳುಗಳಿಂದ ಭದ್ರತಾ ಪರಿಸ್ಥಿತಿ ಹದಗೆಟ್ಟಿರುವ ಸ್ವಾತ್ ಪ್ರದೇಶದಲ್ಲಿ ಶಾಂತಿ ಸ್ಥಾಪನೆಗೆ ಒತ್ತಾಯಿಸಿ ಸ್ಥಳೀಯ ಬುಡಕಟ್ಟು ಮಂಡಳಿಯಾದ ಸ್ವಾತ್ ಅಮನ್ ಜಿರ್ಗಾ ಈ ರ‍್ಯಾಲಿಯನ್ನು ಆಯೋಜಿಸಿತ್ತು. ರ‍್ಯಾಲಿಯಲ್ಲಿ ಭಾಗವಹಿಸಿದ್ದವರು ಶಾಂತಿ ಕಾಪಾಡುವಂತೆ ಒತ್ತಾಯಿಸಿ ಘೋಷಣೆಗಳನ್ನು ಕೂಗುತ್ತಾ, ಫಲಕಗಳನ್ನು ಹಿಡಿದು ಪ್ರತಿಭಟನೆ ನಡೆಸುತ್ತಿದ್ದರು. ಈ ವೇಳೆ ಏಕಾಏಕಿ ಬಾಂಬ್ ಸ್ಫೋಟ ಸಂಭವಿಸಿದೆ.

ಘಟನೆಯ ಬಳಿಕ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ಸ್ಫೋಟಕ್ಕೆ ಕಾರಣವೇನು ಮತ್ತು ದಾಳಿಯ ಹಿಂದೆ ಯಾರಿದ್ದಾರೆ ಎಂಬುದನ್ನು ಪತ್ತೆಹಚ್ಚಲು ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಖೈಬರ್ ಪಖ್ತುಂಖ್ವಾದಲ್ಲಿ ಹೆಚ್ಚುತ್ತಿರುವ ಭದ್ರತಾ ಸವಾಲುಗಳ ನಡುವೆ ನಡೆದ ಈ ಘಟನೆ ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ.

⬇ DOWNLOAD
×

Editor Reporter

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్