ಬೆಂಗಳೂರು ಮಳೆ: ಆಗಸ್ಟ್ 9ರವರೆಗೆ ಹಲವೆಡೆ ಭಾರಿ ಮಳೆ ಮುನ್ಸೂಚನೆ

mirrortvkannada.com
Date : 04 August 2026, 9:52 pm Posted By : MIRROR TV KANNADA

ಬೆಂಗಳೂರು ಮಳೆ: ಆಗಸ್ಟ್ 9ರವರೆಗೆ ಹಲವೆಡೆ ಭಾರಿ ಮಳೆ ಮುನ್ಸೂಚನೆ

ಬೆಂಗಳೂರು ಸೇರಿದಂತೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆ ಮುಂದುವರಿದಿದ್ದು, ಮಂಗಳವಾರ ಸಂಜೆ ರಾಜಧಾನಿಯ ಹಲವು ಪ್ರದೇಶಗಳಲ್ಲಿ ಮೋಡ ಕವಿದ ವಾತಾವರಣದೊಂದಿಗೆ ಮಳೆಯಾಗಿದೆ. ಸಂಜೆ 5 ಗಂಟೆಯ ವೇಳೆಗೆ ನಗರದ ಅನೇಕ ಬಡಾವಣೆಗಳಲ್ಲಿ ಮಳೆ ದಾಖಲಾಗಿದೆ. ಆಗಸ್ಟ್ 9ರವರೆಗೆ ಬೆಂಗಳೂರಿನ ಹಲವೆಡೆ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ (KSNDMC) ಮುನ್ಸೂಚನೆ ನೀಡಿದೆ.

ಮಂಗಳವಾರ ಸಂಜೆ 4 ಗಂಟೆಯ ನಂತರ ಆರ್.ಆರ್. ನಗರ, ಗೊಟ್ಟಿಗೆರೆ, ಕೋರಮಂಗಲ, ಸಿಲ್ಕ್ ಬೋರ್ಡ್, ಕನಕಪುರ ರಸ್ತೆ, ಬಿಎಂಟಿ ಲೇಔಟ್, ಎಲೆಕ್ಟ್ರಾನಿಕ್ ಸಿಟಿ, ಹೆಬ್ಬಾಳ, ಚೌಡೇಶ್ವರಿ ಲೇಔಟ್, ಯಲಹಂಕ, ಜಕ್ಕೂರು, ಮಹಾದೇವಪುರ ಮತ್ತು ಮಾರತ್ತಹಳ್ಳಿ ಸೇರಿದಂತೆ ಹಲವು ಪ್ರದೇಶಗಳಲ್ಲಿ ಜಿಟಿಜಿಟಿ ಮಳೆಯಾಗಿದೆ. ನಗರದ ವಿವಿಧೆಡೆ ಕೆಲಕಾಲ ಸಾಧಾರಣ ಮಳೆಯಾಗಿದ್ದು, ಮೋಡ ಕವಿದ ವಾತಾವರಣ ಮುಂದುವರಿದಿದೆ.

ಜಕ್ಕಸಂದ್ರ, ಡೈರಿ ಸರ್ಕಲ್, ಜೆಪಿ ನಗರ, ಜಯನಗರ, ಚಾಮರಾಜಪೇಟೆ, ಮೆಜೆಸ್ಟಿಕ್, ವಿದ್ಯಾರಣ್ಯಪುರ ಮತ್ತು ಯಶವಂತಪುರ ಸೇರಿದಂತೆ ಹಲವು ಪ್ರದೇಶಗಳಲ್ಲಿಯೂ ಮಳೆ ಸುರಿದಿದೆ. ಮುಂದಿನ ದಿನಗಳಲ್ಲಿಯೂ ಮಳೆಯ ಮುನ್ಸೂಚನೆ ಇರುವುದರಿಂದ, ನೀರು ನಿಲ್ಲುವ ಪ್ರದೇಶಗಳು ಹಾಗೂ ಸಂಚಾರ ದಟ್ಟಣೆ ಉಂಟಾಗುವ ಸಾಧ್ಯತೆ ಇರುವ ಕಡೆಗಳಲ್ಲಿ ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಲಾಗಿದೆ.

⬇ DOWNLOAD
×

Editor Reporter

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్