ಬೆಂಗಳೂರು: ಜೋಗ ಜಲಪಾತಕ್ಕೆ KSRTC ವಿಶೇಷ ಟೂರ್ ಪ್ಯಾಕೇಜ್.. ಆಗಸ್ಟ್ 8ರಿಂದ ನಾನ್ ಎಸಿ ಸ್ಲೀಪರ್ ಬಸ್ ಸೇವೆ

mirrortvkannada.com
Date : 04 August 2026, 11:02 pm Posted By : MIRROR TV KANNADA

ಬೆಂಗಳೂರು: ಜೋಗ ಜಲಪಾತಕ್ಕೆ KSRTC ವಿಶೇಷ ಟೂರ್ ಪ್ಯಾಕೇಜ್.. ಆಗಸ್ಟ್ 8ರಿಂದ ನಾನ್ ಎಸಿ ಸ್ಲೀಪರ್ ಬಸ್ ಸೇವೆ

ಮಳೆಗಾಲ ಆರಂಭವಾಗುತ್ತಿದ್ದಂತೆ ವಿಶ್ವವಿಖ್ಯಾತ ಜೋಗ ಜಲಪಾತಕ್ಕೆ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರಿನಿಂದ ಜೋಗ ಜಲಪಾತಕ್ಕೆ ತೆರಳುವ ಪ್ರವಾಸಿಗರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ಗುಡ್‌ನ್ಯೂಸ್ ನೀಡಿದೆ. ಬೆಂಗಳೂರು ಕೇಂದ್ರೀಯ ವಿಭಾಗದ ವತಿಯಿಂದ ಜೋಗ ಜಲಪಾತಕ್ಕೆ ವಿಶೇಷ ಟೂರ್ ಪ್ಯಾಕೇಜ್ ಘೋಷಿಸಲಾಗಿದ್ದು, ಬೆಂಗಳೂರಿನಿಂದ ಕಣ್ಣೂರಿಗೂ ನಾನ್ ಎಸಿ ಸ್ಲೀಪರ್ ಬಸ್ ಸೇವೆಯನ್ನು ಪರಿಚಯಿಸಲಾಗಿದೆ.

ಆಗಸ್ಟ್ 8ರಿಂದ ಶಿವಮೊಗ್ಗ ಮತ್ತು ಸಾಗರ ಮಾರ್ಗವಾಗಿ ಸುಮಾರು 840 ಕಿಲೋಮೀಟರ್ ದೂರದ ಬೆಂಗಳೂರು-ಜೋಗ ಜಲಪಾತ ನಾನ್ ಎಸಿ ಸ್ಲೀಪರ್ ಬಸ್ ಸೇವೆ ಆರಂಭವಾಗಲಿದೆ. ಶುಕ್ರವಾರ ಮತ್ತು ಶನಿವಾರದಂದು ವಾರಾಂತ್ಯದ ವಿಶೇಷ ಟೂರ್ ಪ್ಯಾಕೇಜ್ ರೂಪದಲ್ಲಿ ಈ ಸೇವೆ ಲಭ್ಯವಿರಲಿದೆ. ಜೋಗ ಜಲಪಾತ ವೀಕ್ಷಣೆಗೆ ತೆರಳುವ ಪ್ರವಾಸಿಗರಿಗೆ ಆರಾಮದಾಯಕ ಪ್ರಯಾಣದ ಅನುಭವ ನೀಡುವ ಉದ್ದೇಶದಿಂದ KSRTC ಈ ವ್ಯವಸ್ಥೆ ಮಾಡಿದೆ.

ವಿಶೇಷ ಪ್ಯಾಕೇಜ್‌ನಲ್ಲಿ ಬೆಳಗಿನ ಉಪಹಾರ, ಮಧ್ಯಾಹ್ನದ ಊಟ ಮತ್ತು ರಾತ್ರಿ ಊಟ ಸೇರಿದಂತೆ ಹಲವು ಸೌಲಭ್ಯಗಳನ್ನು ಒದಗಿಸಲಾಗುತ್ತದೆ ಎಂದು ನಿಗಮದ ಅಧಿಕಾರಿಗಳು ತಿಳಿಸಿದ್ದಾರೆ. ಬಸ್‌ನ ಸಮಯ, ಸಂಪೂರ್ಣ ವೇಳಾಪಟ್ಟಿ, ಟಿಕೆಟ್ ದರ ಹಾಗೂ ಮಾರ್ಗಮಧ್ಯೆ ಇರುವ ನಿಲುಗಡೆಗಳ ಕುರಿತ ವಿವರಗಳನ್ನು KSRTC ಪ್ರಕಟಿಸಲಿದೆ. ಮಳೆಗಾಲದಲ್ಲಿ ಜೋಗ ಜಲಪಾತದ ಸೌಂದರ್ಯ ಸವಿಯಲು ಬಯಸುವ ಬೆಂಗಳೂರಿನ ಪ್ರವಾಸಿಗರಿಗೆ ಈ ಪ್ಯಾಕೇಜ್ ಅನುಕೂಲವಾಗಲಿದೆ.

⬇ DOWNLOAD
×

Editor Reporter

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్