ಯಶ್ ಹಾಗೂ ಕಿಯಾರಾ ಅಡ್ವಾಣಿ ಅಭಿನಯದ ಬಹುನಿರೀಕ್ಷಿತ ಸಿನಿಮಾ ‘ಟಾಕ್ಸಿಕ್: ಎ ಫೇರಿ ಟೇಲ್ ಫಾರ್ ಗ್ರೋನ್-ಅಪ್ಸ್’ (Toxic) ಸದ್ಯ ಭಾರಿ ನಿರೀಕ್ಷೆ ಮೂಡಿಸಿದೆ. ನಿನ್ನೆಯಷ್ಟೇ ಬಿಡುಗಡೆಯಾದ ಚಿತ್ರದ ಟ್ರೈಲರ್‌ಗೆ ಸಿನಿಪ್ರೇಮಿಗಳಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.
ಇದೀಗ ಕಿಯಾರಾ ಅಡ್ವಾಣಿ ಅವರ ಪತಿ ಹಾಗೂ ನಟ ಸಿದ್ಧಾರ್ಥ್ ಮಲ್ಹೋತ್ರಾ ಅವರು ‘ಟಾಕ್ಸಿಕ್’ ಟ್ರೈಲರ್‌ನಲ್ಲಿ ಪತ್ನಿಯ ಅಭಿನಯದ ಕುರಿತು ಮೊದಲ ಬಾರಿಗೆ ತಮ್ಮ ಪ್ರತಿಕ್ರಿಯೆ ನೀಡಿದ್ದಾರೆ. ಕಿಯಾರಾ ಅವರ ಹೊಸ ಲುಕ್ ಹಾಗೂ ಅಭಿನಯವನ್ನು ಮೆಚ್ಚಿಕೊಂಡಿರುವ ಅವರು, ಪತ್ನಿಗೆ ಪ್ರೀತಿಯಿಂದ ಶುಭಾಶಯ ತಿಳಿಸಿದ್ದಾರೆ.
ಸಿದ್ಧಾರ್ಥ್ ಮಲ್ಹೋತ್ರಾ ಅವರ ಈ ಸ್ವೀಟ್ ರಿಯಾಕ್ಷನ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಗಮನ ಸೆಳೆಯುತ್ತಿದೆ. ‘ಟಾಕ್ಸಿಕ್’ ಸಿನಿಮಾದಲ್ಲಿ ಯಶ್ ಹಾಗೂ ಕಿಯಾರಾ ಅವರ ಕಾಂಬಿನೇಷನ್ ಹೇಗಿರಲಿದೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮತ್ತಷ್ಟು ಹೆಚ್ಚಾಗಿದೆ.









