ಬೆಂಗಳೂರು: 2028ರ ವಿಧಾನಸಭಾ ಚುನಾವಣೆಯನ್ನು ಹೇಗೆ ಎದುರಿಸಬೇಕು ಎಂಬುದು ನನಗೆ ಚೆನ್ನಾಗಿ ಗೊತ್ತಿದೆ ಎಂದು ಉಪಮುಖ್ಯಮಂತ್ರಿ ಹಾಗೂ ಕಾಂಗ್ರೆಸ್ ನಾಯಕ ಡಿ.ಕೆ. ಶಿವಕುಮಾರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ವಿಧಾನಸಭೆಯಲ್ಲಿ ಮಾತನಾಡಿದ ಅವರು, ತಮ್ಮ ರಾಜಕೀಯ ತಂತ್ರಗಾರಿಕೆಯನ್ನು ಚೆಸ್ ಆಟಕ್ಕೆ ಹೋಲಿಸುವ ಮೂಲಕ ಪ್ರತಿಪಕ್ಷಗಳಿಗೆ ಪರೋಕ್ಷ ಸಂದೇಶ ನೀಡಿದ್ದಾರೆ.
ವಿಧಾನಸಭೆಯಲ್ಲಿ ಸಚಿವ ಸಂಪುಟದ ಸಹೋದ್ಯೋಗಿಗಳನ್ನು ಸದನಕ್ಕೆ ಪರಿಚಯಿಸಿ ಮಾತನಾಡಿದ ಶಿವಕುಮಾರ್, “2028ರ ಚುನಾವಣೆಯನ್ನು ಹೇಗೆ ಎದುರಿಸಬೇಕು ಎಂಬುದು ನನಗೆ ಗೊತ್ತಿದೆ. ನಾನು ಫುಟ್ಬಾಲ್ ಆಡುವವನಲ್ಲ, ಚೆಸ್ ಆಡುವವನು” ಎಂದು ಹೇಳಿದ್ದಾರೆ. ಅವರ ಈ ಹೇಳಿಕೆ ರಾಜಕೀಯ ವಲಯದಲ್ಲಿ ಗಮನ ಸೆಳೆದಿದೆ.
ಜನರ ಸೇವೆ ಮಾಡುವಾಗ ಎಲ್ಲರೂ ಒಗ್ಗಟ್ಟಿನಿಂದ ಕೆಲಸ ಮಾಡಬೇಕು ಎಂದು ಅವರು ಇದೇ ವೇಳೆ ಕರೆ ನೀಡಿದರು. “ಇಲ್ಲಿ ಯಾರೂ ಶಾಶ್ವತವಲ್ಲ. ನಾವು ವಿರೋಧ ಪಕ್ಷಕ್ಕೆ ಹೋಗಬಹುದು, ವಿರೋಧ ಪಕ್ಷದವರು ಇಲ್ಲಿಗೆ ಬರಬಹುದು” ಎಂದು ಶಿವಕುಮಾರ್ ಹೇಳುವ ಮೂಲಕ ಅಧಿಕಾರ ಶಾಶ್ವತವಲ್ಲ ಎಂಬುದನ್ನು ನೆನಪಿಸಿದರು.








