ಹಾರ್ಮುಜ್ ಜಲಸಂಧಿಯನ್ನು ಬೈಪಾಸ್ ಮಾಡಿ ತೈಲ ಸಾಗಿಸುತ್ತಿದ್ದ ಸೌದಿ ಅರೇಬಿಯಾದ ಪೈಪ್‌ಲೈನ್ ಮೇಲೆ ಡ್ರೋನ್ ದಾಳಿ ನಡೆದಿದೆ. ದಾಳಿಯ ಬೆನ್ನಲ್ಲೇ ಸೌದಿ ಅರೇಬಿಯಾ ಪೈಪ್‌ಲೈನ್ ಕಾರ್ಯಾಚರಣೆಯನ್ನು ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದೆ.
ಪೈಪ್‌ಲೈನ್ ಕಾರ್ಯಾಚರಣೆ ಸ್ಥಗಿತಗೊಂಡ ಬೆನ್ನಲ್ಲೇ ಜಾಗತಿಕ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ಬೆಲೆಗಳು ತೀವ್ರವಾಗಿ ಏರಿಕೆ ಕಂಡಿವೆ. ದಾಳಿಯಿಂದ ತೈಲ ಪೂರೈಕೆಯ ಮೇಲೆ ಪರಿಣಾಮ ಬೀರುವ ಸಾಧ್ಯತೆ ಮಾರುಕಟ್ಟೆಯಲ್ಲಿ ಆತಂಕಕ್ಕೆ ಕಾರಣವಾಗಿದೆ.
WTI ಮತ್ತು ಬ್ರೆಂಟ್ ಕಚ್ಚಾ ತೈಲ ದರಗಳು ಶೇ. 3ಕ್ಕಿಂತ ಹೆಚ್ಚು ಏರಿಕೆಯಾಗಿವೆ. ಬ್ರೆಂಟ್ ಕಚ್ಚಾ ತೈಲ ಬೆಲೆ ಪ್ರತಿ ಬ್ಯಾರೆಲ್‌ಗೆ ಸುಮಾರು 108 ಡಾಲರ್‌ಗೆ ತಲುಪಿದೆ.









