‘ಜಿಗ್ರಿ ದೋಸ್ತ ಜಿಗ್ರಿ ದೋಸ್ತ’ ಹಾಗೂ ‘ಹುಟ್ಟಿಬಂದೆ ಹುಲಿಬೀರನಾಗಿ’ ಹಾಡುಗಳ ಮೂಲಕ ಈಗಾಗಲೇ ಗಮನ ಸೆಳೆಯುತ್ತಿರುವ ಉತ್ತರ ಕರ್ನಾಟಕದ ಚಿತ್ರ ‘ಹುಲಿಬೀರ’. ಚಿತ್ರದ ಟ್ರೈಲರ್‌ನ್ನು ಹಿರಿಯ ನಟ, ಸುಪ್ರೀಂ ಹೀರೋ ಶಶಿಕುಮಾರ್ ಬಿಡುಗಡೆ ಮಾಡಿದರು. ನಿರ್ದೇಶಕ ಎ.ಪಿ. ಅರ್ಜುನ್ ಕಾರ್ಯಕ್ರಮದಲ್ಲಿ ಅತಿಥಿಯಾಗಿ ಭಾಗವಹಿಸಿದ್ದರು.
‘ಮದರಂಗಿ’ ಮಲ್ಲಿಕಾರ್ಜುನ್ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರದಲ್ಲಿ ‘ಯರ್ರಾಬಿರ್ರಿ’ ಖ್ಯಾತಿಯ ರೂರಲ್ ಅಂಜನ್ ನಾಯಕನಾಗಿ ನಟಿಸಿದ್ದಾರೆ. ಚೈತ್ರ ತೋಟದ ಮತ್ತು ವನು ಪಾಟೀಲ್ ನಾಯಕಿಯರಾಗಿ ಕಾಣಿಸಿಕೊಂಡಿದ್ದಾರೆ. ಹಿರಿಯ ನಟ ರಂಗಾಯಣ ರಘು ಗ್ರಾಮದ ಹಿರಿಯನ ಪಾತ್ರದಲ್ಲಿ ಅಭಿನಯಿಸಿದ್ದಾರೆ.
ಉತ್ತರ ಕರ್ನಾಟಕದ ಭಾಷೆ, ಸಂಸ್ಕೃತಿ ಮತ್ತು ಸೊಗಡನ್ನು ಒಳಗೊಂಡಿರುವ ‘ಹುಲಿಬೀರ’ ಚಿತ್ರಕ್ಕೆ ವೀರಸಮರ್ಥ ಸಂಗೀತ ಸಂಯೋಜನೆ ಮಾಡಿದ್ದಾರೆ. ಸನಾತನ ಛಾಯಾಗ್ರಹಣದ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಈಗಾಗಲೇ ಹಾಡುಗಳ ಮೂಲಕ ಕುತೂಹಲ ಮೂಡಿಸಿರುವ ಚಿತ್ರದ ಟ್ರೈಲರ್‌ಗೂ ಪ್ರೇಕ್ಷಕರಿಂದ ಗಮನ ಸಿಕ್ಕಿದೆ.








