ಬಡವರ ಮನೆ ಕನಸು ನನಸಾಗಿಸಲು ಸರ್ಕಾರದ ಹೊಸ ನಿರ್ಧಾರ; ಇನ್ಮುಂದೆ 30X40 ಅಡಿ ಸೈಟ್‌..

mirrortvkannada.com
Date : 20 November 2026, 10:59 pm Posted By : MIRROR TV KANNADA

ಬಡವರ ಮನೆ ಕನಸು ನನಸಾಗಿಸಲು ಸರ್ಕಾರದ ಹೊಸ ನಿರ್ಧಾರ; ಇನ್ಮುಂದೆ 30X40 ಅಡಿ ಸೈಟ್‌..

ಬಡವರಿಗೆ ನೀಡುವ ನಿವೇಶನಗಳ ಅಳತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಹಿಂದೆ 20X30 ಅಡಿ ನಿವೇಶನ ನೀಡಲಾಗುತ್ತಿತ್ತು. ಇನ್ಮುಂದೆ ಕನಿಷ್ಠ 30X40 ಅಡಿ ನಿವೇಶನ ನೀಡಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಕುಟುಂಬಗಳು ಭವಿಷ್ಯದಲ್ಲಿ ಉತ್ತಮ ಮನೆ ನಿರ್ಮಿಸಿಕೊಳ್ಳಲು ಹಾಗೂ ಹೊಸ ಕೊಳಚೆ ಪ್ರದೇಶಗಳು ಸೃಷ್ಟಿಯಾಗುವುದನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ 'ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ' ಹಾಗೂ 'ಮುಖ್ಯಮಂತ್ರಿ ಗ್ರಾಮೀಣಾಭಿವೃದ್ಧಿ ಯೋಜನೆ'ಗಳಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿ, ಇನ್ನು ಮುಂದೆ ಬಡವರಿಗೆ ನೀಡುವ ನಿವೇಶನಗಳ ಅಳತೆಯನ್ನು ಕನಿಷ್ಠ 30X40 ಅಡಿಗೆ ನಿಗದಿಪಡಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಈ ಹಿಂದೆ 20X30 ಅಡಿ ನಿವೇಶನ ನೀಡಲಾಗುತ್ತಿತ್ತು. ಆದರೆ ಕುಟುಂಬ ಬೆಳೆದಂತೆ ಮನೆ ಕಟ್ಟಲು ಜಾಗ ಸಾಲುವುದಿಲ್ಲ. ಮತ್ತೆ ಹೊಸ ಕೊಳಚೆ ಪ್ರದೇಶಗಳು ಸೃಷ್ಟಿಯಾಗಬಾರದು.

ಬಡವರ ಮಕ್ಕಳು ಕೂಡ ಭವಿಷ್ಯದಲ್ಲಿ ಉತ್ತಮ ಮನೆ ಕಟ್ಟಿಕೊಳ್ಳುವಂತಾಗಬೇಕು ಎಂಬ ಉದ್ದೇಶದಿಂದ 30X40 ಅಡಿ ನಿವೇಶನ ನೀಡಲು ನಿರ್ಧರಿಸಲಾಗಿದೆ. ಅಗತ್ಯವಿದ್ದರೆ ನಿವೇಶನಗಳ ಸಂಖ್ಯೆಯನ್ನು ಕಡಿಮೆ ಮಾಡಿಯಾದರೂ ದೊಡ್ಡ ನಿವೇಶನ ನೀಡಲಾಗುವುದು. ಮನೆ ಇಲ್ಲದ ಕುಟುಂಬಗಳಿಗೆ ನಿವೇಶನ ನೀಡುವಾಗ ಆದ್ಯತೆ ನೀಡಬೇಕು. ಈಗಾಗಲೇ ಮನೆ ಅಥವಾ ನಿವೇಶನ ಹೊಂದಿರುವವರಿಗೆ ಮತ್ತೊಮ್ಮೆ ಸೌಲಭ್ಯ ಕಲ್ಪಿಸಬಾರದು ಎಂದು ಸ್ಪಷ್ಟಪಡಿಸಿದರು.
ಹಳ್ಳಿಗಳ ಅಭಿವೃದ್ಧಿಗೆ 16 ಸಾವಿರ ಕೋಟಿ ಬಲ
ರಾಜ್ಯದ ಗ್ರಾಮೀಣ ಪ್ರದೇಶಗಳ ಚಿತ್ರಣ ಬದಲಿಸಲು ನಮ್ಮ ಸರ್ಕಾರ 16 ಸಾವಿರ ಕೋಟಿ ರೂಪಾಯಿ ಮೊತ್ತದ ಬೃಹತ್ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿದೆ. ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ಸುಮಾರು 15 ಸಾವಿರ ಕಿಮೀ ರಸ್ತೆ ಅಭಿವೃದ್ಧಿಗೆ 10 ಸಾವಿರ ಕೋಟಿ ರೂಪಾಯಿ, 6 ಸಾವಿರ ಕೋಟಿ ರೂಪಾಯನ್ನು ಪಂಚಾಯಿತಿ ಮಟ್ಟದ ಅಭಿವೃದ್ಧಿಗೆ ಮೀಸಲಿಡಲಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಇಷ್ಟು ಬೃಹತ್ ಮೊತ್ತದ ಅನುದಾ‌ನ ನೀಡಿರುವುದು ಗುತ್ತಿಗೆದಾರರ ಉದ್ದಾರಕ್ಕೆ, ಜೇಬು ತುಂಬಿಸೋಕಲ್ಲ. ಗ್ರಾಮೀಣ ಜನರ ಬದುಕು ಬದಲಾಯೊಸೋಕೆ ನೀಡಲಾಗುತ್ತಿದೆ. ಈ ಅನುದಾನದಲ್ಲಿ ಒಂದು ರೂಪಾಯಿಯೂ ದುರುಪಯೋಗವಾಗಬಾರದು. ಕಾಮಗಾರಿಗಳಲ್ಲಿ ಪಾರದರ್ಶಕತೆ ಮತ್ತು ಗುಣಮಟ್ಟ ಕಡ್ಡಾಯ" ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕಾಲಕಾಲಕ್ಕೆ ಕಾಮಗಾರಿ ವಿಡಿಯೋ ಕಳುಹಿಸಲು ಸೂಚನೆ
ಪ್ರತಿಯೊಂದು ಕಾಮಗಾರಿ ಆರಂಭಿಸುವ ಮೊದಲು ಸ್ಥಳದ ವಿಡಿಯೊ ಮತ್ತು ಛಾಯಾಚಿತ್ರಗಳನ್ನು ತೆಗೆದು ಕಡತದಲ್ಲಿ ದಾಖಲಿಸಬೇಕು. ಕಾಮಗಾರಿ ಪೂರ್ಣಗೊಂಡ ಬಳಿಕದ ಚಿತ್ರಗಳನ್ನೂ ಸಂಗ್ರಹಿಸಬೇಕು. ಕಾಮಗಾರಿ ನಡೆಯುವ ಸ್ಥಳದ ನಿಖರ ನಿರ್ದೇಶಾಂಕಗಳನ್ನು ದಾಖಲಿಸಬೇಕು. ಟೆಂಡರ್ ಪ್ರಕ್ರಿಯೆ ಇಲ್ಲದೆ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳುವಂತಿಲ್ಲ. ಕಾಮಗಾರಿಗಳ ಪ್ರಗತಿಯನ್ನು ಮುಖ್ಯಮಂತ್ರಿ ಡ್ಯಾಶ್ ಬೋರ್ಡ್ ಮೂಲಕ ಪರಿಶೀಲಿಸಲಾಗುವುದು. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುವ ಚಿತ್ರಗಳು ಸ್ಥಳೀಯ ಪತ್ರಿಕೆಗಳಲ್ಲಿ ಪ್ರಕಟವಾಗಬೇಕು. ಪ್ರತಿ ಪಂಚಾಯಿತಿ ಮತ್ತು ಜಿಲ್ಲಾಮಟ್ಟದಲ್ಲಿ ವಾಟ್ಸ್ ಆ್ಯಪ್ ಗುಂಪು ರಚಿಸಿ ಕಾಮಗಾರಿಗಳ ವಿವರಗಳನ್ನು ಹಂಚಿಕೊಳ್ಳಬೇಕು ಎಂದರು.

ರಸ್ತೆ ಚೆನ್ನಾಗಿದ್ದರೂ ಮತ್ತೆ ಅದೇ ರಸ್ತೆಗೆ ಹಣ ಖರ್ಚು ಮಾಡುವುದು, ಕಾಮಗಾರಿ ಮಾಡದೆ ಬಿಲ್ ಪಡೆಯುವುದು, ಅಧಿಕಾರಿಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಹಣ ದುರುಪಯೋಗ ಮಾಡುವುದು ನನ್ನ ಗಮನಕ್ಕೆ ಬಂದಿದೆ. ಇಂತಹ ಅಕ್ರಮಗಳಿಗೆ ಇನ್ನು ಅವಕಾಶವಿಲ್ಲ" ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು .

15 ಸಾವಿರ ಕಿಮೀ ರಸ್ತೆ ಅಭಿವೃದ್ಧಿಗೆ 10 ಸಾವಿರ ಕೋಟಿ
"ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ಸುಮಾರು 15 ಸಾವಿರ ಕಿಮೀ ರಸ್ತೆಗಳನ್ನು ಅಭಿವೃದ್ಧಿಪಡಿಸಲು 10 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ರಸ್ತೆ ಮರು ಡಾಂಬರೀಕರಣ, ಜಲ್ಲಿ ರಸ್ತೆ ಅಭಿವೃದ್ಧಿ, ಚರಂಡಿ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಪ್ರತಿ ಕಿಲೋಮೀಟರ್ ನ ಕಾಮಗಾರಿಯ ಸ್ವರೂಪಕ್ಕೆ ಅನುಗುಣವಾಗಿ 38 ರಿಂದ 70 ಲಕ್ಷ ರೂಪಾಯಿ ವೆಚ್ಚವನ್ನು ಅಂದಾಜು ಮಾಡಲಾಗಿದೆ. ಈಗಾಗಲೇ ಪ್ರಗತಿ ಪಥ ಯೋಜನೆಯಡಿ 5 ಸಾವಿರ ಕೋಟಿ ಅನುದಾನವನ್ನೂ ನೀಡಲಾಗಿದೆ ಎಂದು ಹೇಳಿದರು.

6 ಸಾವಿರ ಕೋಟಿ ರೂಪಾಯನ್ನು ಪಂಚಾಯಿತಿ ಮಟ್ಟದ ಅಭಿವೃದ್ಧಿಗೆ ಮೀಸಲಿಡಲಾಗಿದೆ. ಚರಂಡಿ, ಕುಡಿಯುವ ನೀರು ಹಾಗೂ ಅಗತ್ಯ ಮೂಲಸೌಕರ್ಯಗಳಿಗೆ ಈ ಹಣ ಬಳಕೆಯಾಗಲಿದೆ. ಯಾವ ಪಂಚಾಯಿತಿಯಲ್ಲಿ ಯಾವ ಕಾಮಗಾರಿ ಅಗತ್ಯವಿದೆ ಎಂಬುದನ್ನು ಗುರುತಿಸಿ, ಜಿಲ್ಲಾಧಿಕಾರಿಗಳ ಅನುಮತಿ ಮೂಲಕ ಅನುದಾನ ಬಿಡುಗಡೆ ಮಾಡಲಾಗುವುದು. ಗ್ರಾಮೀಣಾಭಿವೃದ್ಧಿ ಇಲಾಖೆಗೆ ಮೊದಲ ಬಾರಿಗೆ ಇಷ್ಟು ದೊಡ್ಡ ಮೊತ್ತದ ಅನುದಾನ ನೀಡಲಾಗುತ್ತಿದ್ದು, ಇದೊಂದು ದಾಖಲೆ" ಎಂದು ಹೇಳಿದರು.
ಮೊದಲ ಹಂತದಲ್ಲಿ 5 ಲಕ್ಷ ನಿವೇಶನ ಹಂಚಿಕೆ
ರಾಜ್ಯದಲ್ಲಿ ಒಟ್ಟು 15 ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡುವ ಗುರಿ ಹೊಂದಲಾಗಿದೆ. ಮೊದಲ ಹಂತದಲ್ಲಿ 5 ಲಕ್ಷ ನಿವೇಶನಗಳನ್ನು ವಿತರಿಸಲು ನಿರ್ಧರಿಸಿದ್ದು, ಇದಕ್ಕಾಗಿ ಸುಮಾರು 9 ಸಾವಿರ ಎಕರೆ ಜಮೀನು ಗುರುತಿಸಲಾಗಿದೆ. ನಿವೇಶನಗಳ ಅಭಿವೃದ್ಧಿಗೆ ಅಗತ್ಯವಿರುವ ರಸ್ತೆ, ಚರಂಡಿ ಸೇರಿದಂತೆ ಮೂಲಸೌಕರ್ಯಗಳ ವೆಚ್ಚವನ್ನು ವಾಸ್ತವಿಕವಾಗಿ ಪರಿಶೀಲಿಸಿ ಯೋಜನೆ ರೂಪಿಸಲಾಗುವುದು" ಎಂದು ಹೇಳಿದರು.
ನಗರಗಳತ್ತ ವಲಸೆ ತಡೆಯಲು ಹಳ್ಳಿಗಳ ಅಭಿವೃದ್ಧಿ
ಮಹಾತ್ಮ ಗಾಂಧೀಜಿ ಅವರು ಭಾರತದ ಆತ್ಮ ಹಳ್ಳಿಗಳಲ್ಲಿ‌ ಇದೆ ಎಂದಿದ್ದರು. ಹಳ್ಳಿಗಳು ಅಭಿವೃದ್ಧಿಯಾದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ ಎಂಬುದು ನಮ್ಮ ನಂಬಿಕೆ. ನಾನೂ ಜಿಲ್ಲಾ ಪಂಚಾಯಿತಿ ಸದಸ್ಯನಾಗಿ ಕೆಲಸ ಮಾಡಿದ್ದೇನೆ. ಗ್ರಾಮೀಣ ಜನರ ಸಮಸ್ಯೆಗಳು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಅನುದಾನದ ಕೊರತೆಯಿಂದ ಎದುರಿಸುವ ಸಂಕಷ್ಟಗಳ ಅರಿವು ನನಗಿದೆ. ಹೀಗಾಗಿ ಪಂಚಾಯಿತಿಗಳಿಗೆ ಹೆಚ್ಚಿನ ಆರ್ಥಿಕ ಶಕ್ತಿ ನೀಡುವ ಉದ್ದೇಶದಿಂದ ಇಷ್ಟು ದೊಡ್ಡ ಮೊತ್ತದ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶಗಳಿಂದ ನಗರಗಳಿಗೆ ಈಗಾಗಲೇ ಶೇ.47ರಷ್ಟು ಜನಸಂಖ್ಯೆ ಸ್ಥಳಾಂತರಗೊಂಡಿದ್ದು, ಮುಂದಿನ ದಿನಗಳಲ್ಲಿ ಈ ಪ್ರಮಾಣ ಶೇ.76ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಜ್ಞರು ವರದಿ ನೀಡಿದ್ದಾರೆ. ಉದ್ಯೋಗ, ಶಿಕ್ಷಣ ಹಾಗೂ ಉತ್ತಮ ಜೀವನದ ನಿರೀಕ್ಷೆಯಲ್ಲಿ ರೈತರ ಮಕ್ಕಳು ಊರು ತೊರೆಯುತ್ತಿದ್ದಾರೆ. ಈ ವಲಸೆ ತಡೆಯಬೇಕಾದರೆ ಹಳ್ಳಿಗಳಲ್ಲೇ ಉತ್ತಮ ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು ಎಂದರು.
ಹಳ್ಳಿಗಳ ಅಭಿವೃದ್ಧಿಯೇ ಮೊದಲ ಆದ್ಯತೆ
ಗ್ರಾಮೀಣ ಪ್ರದೇಶಗಳಲ್ಲಿ ಕೈಗಾರಿಕೆಗಳು ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು. ಹಳ್ಳಿಗಳಲ್ಲಿ ಉದ್ಯಮ ಸ್ಥಾಪಿಸಲು ಮುಂದೆ ಬರುವವರಿಗೆ ಪಂಚಾಯಿತಿಗಳು ಅನಗತ್ಯ ತೊಂದರೆ ನೀಡಬಾರದು. ಕರಾವಳಿ ಮತ್ತು ಮಲೆನಾಡು ಭಾಗಗಳ ಅಭಿವೃದ್ಧಿಗೂ ವಿಶೇಷ ನೀತಿ ರೂಪಿಸಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.

ನಗರಗಳ ಅಭಿವೃದ್ಧಿಯಷ್ಟೇ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯೂ ಮುಖ್ಯ. ಸರ್ಕಾರಿ ಕಚೇರಿಗಳು ಮತ್ತು ಪಂಚಾಯಿತಿಗಳು ಜನರ ಕಷ್ಟ ಪರಿಹರಿಸುವ ಕೇಂದ್ರಗಳಾಗಬೇಕು. ರಸ್ತೆ, ಕುಡಿಯುವ ನೀರು, ನಿವೇಶನ, ಖಾತಾ ಸೇರಿದಂತೆ ಜನರ ಮೂಲಭೂತ ಸಮಸ್ಯೆಗಳಿಗೆ ಆದ್ಯತೆ ನೀಡಬೇಕು. 16 ಸಾವಿರ ಕೋಟಿ ಗ್ರಾಮೀಣ ಜನರ ಬದುಕು ಬದಲಿಸುವುದಕ್ಕಾಗಿ. ಅಧಿಕಾರಿಗಳು ಇದನ್ನು ತಮ್ಮ ಕರ್ತವ್ಯವೆಂದು ಭಾವಿಸಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

⬇ DOWNLOAD
×

ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ‘ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ’ ಹಾಗೂ ‘ಮುಖ್ಯಮಂತ್ರಿ ಗ್ರಾಮೀಣಾಭಿವೃದ್ಧಿ ಯೋಜನೆ’ಗಳಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿ, ಇನ್ನು ಮುಂದೆ ಬಡವರಿಗೆ ನೀಡುವ ನಿವೇಶನಗಳ ಅಳತೆಯನ್ನು ಕನಿಷ್ಠ 30X40 ಅಡಿಗೆ ನಿಗದಿಪಡಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಈ ಹಿಂದೆ 20X30 ಅಡಿ ನಿವೇಶನ ನೀಡಲಾಗುತ್ತಿತ್ತು. ಆದರೆ ಕುಟುಂಬ ಬೆಳೆದಂತೆ ಮನೆ ಕಟ್ಟಲು ಜಾಗ ಸಾಲುವುದಿಲ್ಲ. ಮತ್ತೆ ಹೊಸ ಕೊಳಚೆ ಪ್ರದೇಶಗಳು ಸೃಷ್ಟಿಯಾಗಬಾರದು.

ಬಡವರ ಮಕ್ಕಳು ಕೂಡ ಭವಿಷ್ಯದಲ್ಲಿ ಉತ್ತಮ ಮನೆ ಕಟ್ಟಿಕೊಳ್ಳುವಂತಾಗಬೇಕು ಎಂಬ ಉದ್ದೇಶದಿಂದ 30X40 ಅಡಿ ನಿವೇಶನ ನೀಡಲು ನಿರ್ಧರಿಸಲಾಗಿದೆ. ಅಗತ್ಯವಿದ್ದರೆ ನಿವೇಶನಗಳ ಸಂಖ್ಯೆಯನ್ನು ಕಡಿಮೆ ಮಾಡಿಯಾದರೂ ದೊಡ್ಡ ನಿವೇಶನ ನೀಡಲಾಗುವುದು. ಮನೆ ಇಲ್ಲದ ಕುಟುಂಬಗಳಿಗೆ ನಿವೇಶನ ನೀಡುವಾಗ ಆದ್ಯತೆ ನೀಡಬೇಕು. ಈಗಾಗಲೇ ಮನೆ ಅಥವಾ ನಿವೇಶನ ಹೊಂದಿರುವವರಿಗೆ ಮತ್ತೊಮ್ಮೆ ಸೌಲಭ್ಯ ಕಲ್ಪಿಸಬಾರದು ಎಂದು ಸ್ಪಷ್ಟಪಡಿಸಿದರು.

ಹಳ್ಳಿಗಳ ಅಭಿವೃದ್ಧಿಗೆ 16 ಸಾವಿರ ಕೋಟಿ ಬಲ

ರಾಜ್ಯದ ಗ್ರಾಮೀಣ ಪ್ರದೇಶಗಳ ಚಿತ್ರಣ ಬದಲಿಸಲು ನಮ್ಮ ಸರ್ಕಾರ 16 ಸಾವಿರ ಕೋಟಿ ರೂಪಾಯಿ ಮೊತ್ತದ ಬೃಹತ್ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿದೆ. ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ಸುಮಾರು 15 ಸಾವಿರ ಕಿಮೀ ರಸ್ತೆ ಅಭಿವೃದ್ಧಿಗೆ 10 ಸಾವಿರ ಕೋಟಿ ರೂಪಾಯಿ, 6 ಸಾವಿರ ಕೋಟಿ ರೂಪಾಯನ್ನು ಪಂಚಾಯಿತಿ ಮಟ್ಟದ ಅಭಿವೃದ್ಧಿಗೆ ಮೀಸಲಿಡಲಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಇಷ್ಟು ಬೃಹತ್ ಮೊತ್ತದ ಅನುದಾ‌ನ ನೀಡಿರುವುದು ಗುತ್ತಿಗೆದಾರರ ಉದ್ದಾರಕ್ಕೆ, ಜೇಬು ತುಂಬಿಸೋಕಲ್ಲ. ಗ್ರಾಮೀಣ ಜನರ ಬದುಕು ಬದಲಾಯೊಸೋಕೆ ನೀಡಲಾಗುತ್ತಿದೆ. ಈ ಅನುದಾನದಲ್ಲಿ ಒಂದು ರೂಪಾಯಿಯೂ ದುರುಪಯೋಗವಾಗಬಾರದು. ಕಾಮಗಾರಿಗಳಲ್ಲಿ ಪಾರದರ್ಶಕತೆ ಮತ್ತು ಗುಣಮಟ್ಟ ಕಡ್ಡಾಯ” ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಕಾಲಕಾಲಕ್ಕೆ ಕಾಮಗಾರಿ ವಿಡಿಯೋ ಕಳುಹಿಸಲು ಸೂಚನೆ

ಪ್ರತಿಯೊಂದು ಕಾಮಗಾರಿ ಆರಂಭಿಸುವ ಮೊದಲು ಸ್ಥಳದ ವಿಡಿಯೊ ಮತ್ತು ಛಾಯಾಚಿತ್ರಗಳನ್ನು ತೆಗೆದು ಕಡತದಲ್ಲಿ ದಾಖಲಿಸಬೇಕು. ಕಾಮಗಾರಿ ಪೂರ್ಣಗೊಂಡ ಬಳಿಕದ ಚಿತ್ರಗಳನ್ನೂ ಸಂಗ್ರಹಿಸಬೇಕು. ಕಾಮಗಾರಿ ನಡೆಯುವ ಸ್ಥಳದ ನಿಖರ ನಿರ್ದೇಶಾಂಕಗಳನ್ನು ದಾಖಲಿಸಬೇಕು. ಟೆಂಡರ್ ಪ್ರಕ್ರಿಯೆ ಇಲ್ಲದೆ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳುವಂತಿಲ್ಲ. ಕಾಮಗಾರಿಗಳ ಪ್ರಗತಿಯನ್ನು ಮುಖ್ಯಮಂತ್ರಿ ಡ್ಯಾಶ್ ಬೋರ್ಡ್ ಮೂಲಕ ಪರಿಶೀಲಿಸಲಾಗುವುದು. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುವ ಚಿತ್ರಗಳು ಸ್ಥಳೀಯ ಪತ್ರಿಕೆಗಳಲ್ಲಿ ಪ್ರಕಟವಾಗಬೇಕು. ಪ್ರತಿ ಪಂಚಾಯಿತಿ ಮತ್ತು ಜಿಲ್ಲಾಮಟ್ಟದಲ್ಲಿ ವಾಟ್ಸ್ ಆ್ಯಪ್ ಗುಂಪು ರಚಿಸಿ ಕಾಮಗಾರಿಗಳ ವಿವರಗಳನ್ನು ಹಂಚಿಕೊಳ್ಳಬೇಕು ಎಂದರು.

ರಸ್ತೆ ಚೆನ್ನಾಗಿದ್ದರೂ ಮತ್ತೆ ಅದೇ ರಸ್ತೆಗೆ ಹಣ ಖರ್ಚು ಮಾಡುವುದು, ಕಾಮಗಾರಿ ಮಾಡದೆ ಬಿಲ್ ಪಡೆಯುವುದು, ಅಧಿಕಾರಿಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಹಣ ದುರುಪಯೋಗ ಮಾಡುವುದು ನನ್ನ ಗಮನಕ್ಕೆ ಬಂದಿದೆ. ಇಂತಹ ಅಕ್ರಮಗಳಿಗೆ ಇನ್ನು ಅವಕಾಶವಿಲ್ಲ” ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು .

15 ಸಾವಿರ ಕಿಮೀ ರಸ್ತೆ ಅಭಿವೃದ್ಧಿಗೆ 10 ಸಾವಿರ ಕೋಟಿ

“ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ಸುಮಾರು 15 ಸಾವಿರ ಕಿಮೀ ರಸ್ತೆಗಳನ್ನು ಅಭಿವೃದ್ಧಿಪಡಿಸಲು 10 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ರಸ್ತೆ ಮರು ಡಾಂಬರೀಕರಣ, ಜಲ್ಲಿ ರಸ್ತೆ ಅಭಿವೃದ್ಧಿ, ಚರಂಡಿ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಪ್ರತಿ ಕಿಲೋಮೀಟರ್ ನ ಕಾಮಗಾರಿಯ ಸ್ವರೂಪಕ್ಕೆ ಅನುಗುಣವಾಗಿ 38 ರಿಂದ 70 ಲಕ್ಷ ರೂಪಾಯಿ ವೆಚ್ಚವನ್ನು ಅಂದಾಜು ಮಾಡಲಾಗಿದೆ. ಈಗಾಗಲೇ ಪ್ರಗತಿ ಪಥ ಯೋಜನೆಯಡಿ 5 ಸಾವಿರ ಕೋಟಿ ಅನುದಾನವನ್ನೂ ನೀಡಲಾಗಿದೆ ಎಂದು ಹೇಳಿದರು.

6 ಸಾವಿರ ಕೋಟಿ ರೂಪಾಯನ್ನು ಪಂಚಾಯಿತಿ ಮಟ್ಟದ ಅಭಿವೃದ್ಧಿಗೆ ಮೀಸಲಿಡಲಾಗಿದೆ. ಚರಂಡಿ, ಕುಡಿಯುವ ನೀರು ಹಾಗೂ ಅಗತ್ಯ ಮೂಲಸೌಕರ್ಯಗಳಿಗೆ ಈ ಹಣ ಬಳಕೆಯಾಗಲಿದೆ. ಯಾವ ಪಂಚಾಯಿತಿಯಲ್ಲಿ ಯಾವ ಕಾಮಗಾರಿ ಅಗತ್ಯವಿದೆ ಎಂಬುದನ್ನು ಗುರುತಿಸಿ, ಜಿಲ್ಲಾಧಿಕಾರಿಗಳ ಅನುಮತಿ ಮೂಲಕ ಅನುದಾನ ಬಿಡುಗಡೆ ಮಾಡಲಾಗುವುದು. ಗ್ರಾಮೀಣಾಭಿವೃದ್ಧಿ ಇಲಾಖೆಗೆ ಮೊದಲ ಬಾರಿಗೆ ಇಷ್ಟು ದೊಡ್ಡ ಮೊತ್ತದ ಅನುದಾನ ನೀಡಲಾಗುತ್ತಿದ್ದು, ಇದೊಂದು ದಾಖಲೆ” ಎಂದು ಹೇಳಿದರು.

ಮೊದಲ ಹಂತದಲ್ಲಿ 5 ಲಕ್ಷ ನಿವೇಶನ ಹಂಚಿಕೆ

ರಾಜ್ಯದಲ್ಲಿ ಒಟ್ಟು 15 ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡುವ ಗುರಿ ಹೊಂದಲಾಗಿದೆ. ಮೊದಲ ಹಂತದಲ್ಲಿ 5 ಲಕ್ಷ ನಿವೇಶನಗಳನ್ನು ವಿತರಿಸಲು ನಿರ್ಧರಿಸಿದ್ದು, ಇದಕ್ಕಾಗಿ ಸುಮಾರು 9 ಸಾವಿರ ಎಕರೆ ಜಮೀನು ಗುರುತಿಸಲಾಗಿದೆ. ನಿವೇಶನಗಳ ಅಭಿವೃದ್ಧಿಗೆ ಅಗತ್ಯವಿರುವ ರಸ್ತೆ, ಚರಂಡಿ ಸೇರಿದಂತೆ ಮೂಲಸೌಕರ್ಯಗಳ ವೆಚ್ಚವನ್ನು ವಾಸ್ತವಿಕವಾಗಿ ಪರಿಶೀಲಿಸಿ ಯೋಜನೆ ರೂಪಿಸಲಾಗುವುದು” ಎಂದು ಹೇಳಿದರು.

ನಗರಗಳತ್ತ ವಲಸೆ ತಡೆಯಲು ಹಳ್ಳಿಗಳ ಅಭಿವೃದ್ಧಿ

ಮಹಾತ್ಮ ಗಾಂಧೀಜಿ ಅವರು ಭಾರತದ ಆತ್ಮ ಹಳ್ಳಿಗಳಲ್ಲಿ‌ ಇದೆ ಎಂದಿದ್ದರು. ಹಳ್ಳಿಗಳು ಅಭಿವೃದ್ಧಿಯಾದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ ಎಂಬುದು ನಮ್ಮ ನಂಬಿಕೆ. ನಾನೂ ಜಿಲ್ಲಾ ಪಂಚಾಯಿತಿ ಸದಸ್ಯನಾಗಿ ಕೆಲಸ ಮಾಡಿದ್ದೇನೆ. ಗ್ರಾಮೀಣ ಜನರ ಸಮಸ್ಯೆಗಳು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಅನುದಾನದ ಕೊರತೆಯಿಂದ ಎದುರಿಸುವ ಸಂಕಷ್ಟಗಳ ಅರಿವು ನನಗಿದೆ. ಹೀಗಾಗಿ ಪಂಚಾಯಿತಿಗಳಿಗೆ ಹೆಚ್ಚಿನ ಆರ್ಥಿಕ ಶಕ್ತಿ ನೀಡುವ ಉದ್ದೇಶದಿಂದ ಇಷ್ಟು ದೊಡ್ಡ ಮೊತ್ತದ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶಗಳಿಂದ ನಗರಗಳಿಗೆ ಈಗಾಗಲೇ ಶೇ.47ರಷ್ಟು ಜನಸಂಖ್ಯೆ ಸ್ಥಳಾಂತರಗೊಂಡಿದ್ದು, ಮುಂದಿನ ದಿನಗಳಲ್ಲಿ ಈ ಪ್ರಮಾಣ ಶೇ.76ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಜ್ಞರು ವರದಿ ನೀಡಿದ್ದಾರೆ. ಉದ್ಯೋಗ, ಶಿಕ್ಷಣ ಹಾಗೂ ಉತ್ತಮ ಜೀವನದ ನಿರೀಕ್ಷೆಯಲ್ಲಿ ರೈತರ ಮಕ್ಕಳು ಊರು ತೊರೆಯುತ್ತಿದ್ದಾರೆ. ಈ ವಲಸೆ ತಡೆಯಬೇಕಾದರೆ ಹಳ್ಳಿಗಳಲ್ಲೇ ಉತ್ತಮ ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು ಎಂದರು.

ಹಳ್ಳಿಗಳ ಅಭಿವೃದ್ಧಿಯೇ ಮೊದಲ ಆದ್ಯತೆ

ಗ್ರಾಮೀಣ ಪ್ರದೇಶಗಳಲ್ಲಿ ಕೈಗಾರಿಕೆಗಳು ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು. ಹಳ್ಳಿಗಳಲ್ಲಿ ಉದ್ಯಮ ಸ್ಥಾಪಿಸಲು ಮುಂದೆ ಬರುವವರಿಗೆ ಪಂಚಾಯಿತಿಗಳು ಅನಗತ್ಯ ತೊಂದರೆ ನೀಡಬಾರದು. ಕರಾವಳಿ ಮತ್ತು ಮಲೆನಾಡು ಭಾಗಗಳ ಅಭಿವೃದ್ಧಿಗೂ ವಿಶೇಷ ನೀತಿ ರೂಪಿಸಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.

ನಗರಗಳ ಅಭಿವೃದ್ಧಿಯಷ್ಟೇ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯೂ ಮುಖ್ಯ. ಸರ್ಕಾರಿ ಕಚೇರಿಗಳು ಮತ್ತು ಪಂಚಾಯಿತಿಗಳು ಜನರ ಕಷ್ಟ ಪರಿಹರಿಸುವ ಕೇಂದ್ರಗಳಾಗಬೇಕು. ರಸ್ತೆ, ಕುಡಿಯುವ ನೀರು, ನಿವೇಶನ, ಖಾತಾ ಸೇರಿದಂತೆ ಜನರ ಮೂಲಭೂತ ಸಮಸ್ಯೆಗಳಿಗೆ ಆದ್ಯತೆ ನೀಡಬೇಕು. 16 ಸಾವಿರ ಕೋಟಿ ಗ್ರಾಮೀಣ ಜನರ ಬದುಕು ಬದಲಿಸುವುದಕ್ಕಾಗಿ. ಅಧಿಕಾರಿಗಳು ಇದನ್ನು ತಮ್ಮ ಕರ್ತವ್ಯವೆಂದು ಭಾವಿಸಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

Editor Reporter
mirrortvkannada.com

ಬಡವರ ಮನೆ ಕನಸು ನನಸಾಗಿಸಲು ಸರ್ಕಾರದ ಹೊಸ ನಿರ್ಧಾರ; ಇನ್ಮುಂದೆ 30X40 ಅಡಿ ಸೈಟ್‌..

ಬಡವರಿಗೆ ನೀಡುವ ನಿವೇಶನಗಳ ಅಳತೆಯನ್ನು ಹೆಚ್ಚಿಸಲು ರಾಜ್ಯ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಈ ಹಿಂದೆ 20X30 ಅಡಿ ನಿವೇಶನ ನೀಡಲಾಗುತ್ತಿತ್ತು. ಇನ್ಮುಂದೆ ಕನಿಷ್ಠ 30X40 ಅಡಿ ನಿವೇಶನ ನೀಡಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಕುಟುಂಬಗಳು ಭವಿಷ್ಯದಲ್ಲಿ ಉತ್ತಮ ಮನೆ ನಿರ್ಮಿಸಿಕೊಳ್ಳಲು ಹಾಗೂ ಹೊಸ ಕೊಳಚೆ ಪ್ರದೇಶಗಳು ಸೃಷ್ಟಿಯಾಗುವುದನ್ನು ತಡೆಯುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ 'ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆ' ಹಾಗೂ 'ಮುಖ್ಯಮಂತ್ರಿ ಗ್ರಾಮೀಣಾಭಿವೃದ್ಧಿ ಯೋಜನೆ'ಗಳಿಗೆ ಶುಕ್ರವಾರ ಚಾಲನೆ ನೀಡಿ ಮಾತನಾಡಿ, ಇನ್ನು ಮುಂದೆ ಬಡವರಿಗೆ ನೀಡುವ ನಿವೇಶನಗಳ ಅಳತೆಯನ್ನು ಕನಿಷ್ಠ 30X40 ಅಡಿಗೆ ನಿಗದಿಪಡಿಸಲು ಸಚಿವ ಸಂಪುಟದಲ್ಲಿ ತೀರ್ಮಾನಿಸಲಾಗಿದೆ. ಈ ಹಿಂದೆ 20X30 ಅಡಿ ನಿವೇಶನ ನೀಡಲಾಗುತ್ತಿತ್ತು. ಆದರೆ ಕುಟುಂಬ ಬೆಳೆದಂತೆ ಮನೆ ಕಟ್ಟಲು ಜಾಗ ಸಾಲುವುದಿಲ್ಲ. ಮತ್ತೆ ಹೊಸ ಕೊಳಚೆ ಪ್ರದೇಶಗಳು ಸೃಷ್ಟಿಯಾಗಬಾರದು.

ಬಡವರ ಮಕ್ಕಳು ಕೂಡ ಭವಿಷ್ಯದಲ್ಲಿ ಉತ್ತಮ ಮನೆ ಕಟ್ಟಿಕೊಳ್ಳುವಂತಾಗಬೇಕು ಎಂಬ ಉದ್ದೇಶದಿಂದ 30X40 ಅಡಿ ನಿವೇಶನ ನೀಡಲು ನಿರ್ಧರಿಸಲಾಗಿದೆ. ಅಗತ್ಯವಿದ್ದರೆ ನಿವೇಶನಗಳ ಸಂಖ್ಯೆಯನ್ನು ಕಡಿಮೆ ಮಾಡಿಯಾದರೂ ದೊಡ್ಡ ನಿವೇಶನ ನೀಡಲಾಗುವುದು. ಮನೆ ಇಲ್ಲದ ಕುಟುಂಬಗಳಿಗೆ ನಿವೇಶನ ನೀಡುವಾಗ ಆದ್ಯತೆ ನೀಡಬೇಕು. ಈಗಾಗಲೇ ಮನೆ ಅಥವಾ ನಿವೇಶನ ಹೊಂದಿರುವವರಿಗೆ ಮತ್ತೊಮ್ಮೆ ಸೌಲಭ್ಯ ಕಲ್ಪಿಸಬಾರದು ಎಂದು ಸ್ಪಷ್ಟಪಡಿಸಿದರು.
ಹಳ್ಳಿಗಳ ಅಭಿವೃದ್ಧಿಗೆ 16 ಸಾವಿರ ಕೋಟಿ ಬಲ
ರಾಜ್ಯದ ಗ್ರಾಮೀಣ ಪ್ರದೇಶಗಳ ಚಿತ್ರಣ ಬದಲಿಸಲು ನಮ್ಮ ಸರ್ಕಾರ 16 ಸಾವಿರ ಕೋಟಿ ರೂಪಾಯಿ ಮೊತ್ತದ ಬೃಹತ್ ಅಭಿವೃದ್ಧಿ ಯೋಜನೆಗಳನ್ನು ರೂಪಿಸಿದೆ. ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ಸುಮಾರು 15 ಸಾವಿರ ಕಿಮೀ ರಸ್ತೆ ಅಭಿವೃದ್ಧಿಗೆ 10 ಸಾವಿರ ಕೋಟಿ ರೂಪಾಯಿ, 6 ಸಾವಿರ ಕೋಟಿ ರೂಪಾಯನ್ನು ಪಂಚಾಯಿತಿ ಮಟ್ಟದ ಅಭಿವೃದ್ಧಿಗೆ ಮೀಸಲಿಡಲಾಗಿದೆ ಎಂದು ಸಿಎಂ ಡಿ ಕೆ ಶಿವಕುಮಾರ್ ಅವರು ತಿಳಿಸಿದರು.

ಇಷ್ಟು ಬೃಹತ್ ಮೊತ್ತದ ಅನುದಾ‌ನ ನೀಡಿರುವುದು ಗುತ್ತಿಗೆದಾರರ ಉದ್ದಾರಕ್ಕೆ, ಜೇಬು ತುಂಬಿಸೋಕಲ್ಲ. ಗ್ರಾಮೀಣ ಜನರ ಬದುಕು ಬದಲಾಯೊಸೋಕೆ ನೀಡಲಾಗುತ್ತಿದೆ. ಈ ಅನುದಾನದಲ್ಲಿ ಒಂದು ರೂಪಾಯಿಯೂ ದುರುಪಯೋಗವಾಗಬಾರದು. ಕಾಮಗಾರಿಗಳಲ್ಲಿ ಪಾರದರ್ಶಕತೆ ಮತ್ತು ಗುಣಮಟ್ಟ ಕಡ್ಡಾಯ" ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕಾಲಕಾಲಕ್ಕೆ ಕಾಮಗಾರಿ ವಿಡಿಯೋ ಕಳುಹಿಸಲು ಸೂಚನೆ
ಪ್ರತಿಯೊಂದು ಕಾಮಗಾರಿ ಆರಂಭಿಸುವ ಮೊದಲು ಸ್ಥಳದ ವಿಡಿಯೊ ಮತ್ತು ಛಾಯಾಚಿತ್ರಗಳನ್ನು ತೆಗೆದು ಕಡತದಲ್ಲಿ ದಾಖಲಿಸಬೇಕು. ಕಾಮಗಾರಿ ಪೂರ್ಣಗೊಂಡ ಬಳಿಕದ ಚಿತ್ರಗಳನ್ನೂ ಸಂಗ್ರಹಿಸಬೇಕು. ಕಾಮಗಾರಿ ನಡೆಯುವ ಸ್ಥಳದ ನಿಖರ ನಿರ್ದೇಶಾಂಕಗಳನ್ನು ದಾಖಲಿಸಬೇಕು. ಟೆಂಡರ್ ಪ್ರಕ್ರಿಯೆ ಇಲ್ಲದೆ ಯಾವುದೇ ಕಾಮಗಾರಿ ಕೈಗೆತ್ತಿಕೊಳ್ಳುವಂತಿಲ್ಲ. ಕಾಮಗಾರಿಗಳ ಪ್ರಗತಿಯನ್ನು ಮುಖ್ಯಮಂತ್ರಿ ಡ್ಯಾಶ್ ಬೋರ್ಡ್ ಮೂಲಕ ಪರಿಶೀಲಿಸಲಾಗುವುದು. ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸುವ ಚಿತ್ರಗಳು ಸ್ಥಳೀಯ ಪತ್ರಿಕೆಗಳಲ್ಲಿ ಪ್ರಕಟವಾಗಬೇಕು. ಪ್ರತಿ ಪಂಚಾಯಿತಿ ಮತ್ತು ಜಿಲ್ಲಾಮಟ್ಟದಲ್ಲಿ ವಾಟ್ಸ್ ಆ್ಯಪ್ ಗುಂಪು ರಚಿಸಿ ಕಾಮಗಾರಿಗಳ ವಿವರಗಳನ್ನು ಹಂಚಿಕೊಳ್ಳಬೇಕು ಎಂದರು.

ರಸ್ತೆ ಚೆನ್ನಾಗಿದ್ದರೂ ಮತ್ತೆ ಅದೇ ರಸ್ತೆಗೆ ಹಣ ಖರ್ಚು ಮಾಡುವುದು, ಕಾಮಗಾರಿ ಮಾಡದೆ ಬಿಲ್ ಪಡೆಯುವುದು, ಅಧಿಕಾರಿಗಳೊಂದಿಗೆ ಹೊಂದಾಣಿಕೆ ಮಾಡಿಕೊಂಡು ಹಣ ದುರುಪಯೋಗ ಮಾಡುವುದು ನನ್ನ ಗಮನಕ್ಕೆ ಬಂದಿದೆ. ಇಂತಹ ಅಕ್ರಮಗಳಿಗೆ ಇನ್ನು ಅವಕಾಶವಿಲ್ಲ" ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ನೀಡಿದರು .

15 ಸಾವಿರ ಕಿಮೀ ರಸ್ತೆ ಅಭಿವೃದ್ಧಿಗೆ 10 ಸಾವಿರ ಕೋಟಿ
"ಮುಖ್ಯಮಂತ್ರಿ ಗ್ರಾಮೀಣ ರಸ್ತೆ ಸಂಪರ್ಕ ಯೋಜನೆಯಡಿ ಸುಮಾರು 15 ಸಾವಿರ ಕಿಮೀ ರಸ್ತೆಗಳನ್ನು ಅಭಿವೃದ್ಧಿಪಡಿಸಲು 10 ಸಾವಿರ ಕೋಟಿ ರೂ. ಮೀಸಲಿಡಲಾಗಿದೆ. ರಸ್ತೆ ಮರು ಡಾಂಬರೀಕರಣ, ಜಲ್ಲಿ ರಸ್ತೆ ಅಭಿವೃದ್ಧಿ, ಚರಂಡಿ ನಿರ್ಮಾಣ ಸೇರಿದಂತೆ ವಿವಿಧ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗುವುದು. ಪ್ರತಿ ಕಿಲೋಮೀಟರ್ ನ ಕಾಮಗಾರಿಯ ಸ್ವರೂಪಕ್ಕೆ ಅನುಗುಣವಾಗಿ 38 ರಿಂದ 70 ಲಕ್ಷ ರೂಪಾಯಿ ವೆಚ್ಚವನ್ನು ಅಂದಾಜು ಮಾಡಲಾಗಿದೆ. ಈಗಾಗಲೇ ಪ್ರಗತಿ ಪಥ ಯೋಜನೆಯಡಿ 5 ಸಾವಿರ ಕೋಟಿ ಅನುದಾನವನ್ನೂ ನೀಡಲಾಗಿದೆ ಎಂದು ಹೇಳಿದರು.

6 ಸಾವಿರ ಕೋಟಿ ರೂಪಾಯನ್ನು ಪಂಚಾಯಿತಿ ಮಟ್ಟದ ಅಭಿವೃದ್ಧಿಗೆ ಮೀಸಲಿಡಲಾಗಿದೆ. ಚರಂಡಿ, ಕುಡಿಯುವ ನೀರು ಹಾಗೂ ಅಗತ್ಯ ಮೂಲಸೌಕರ್ಯಗಳಿಗೆ ಈ ಹಣ ಬಳಕೆಯಾಗಲಿದೆ. ಯಾವ ಪಂಚಾಯಿತಿಯಲ್ಲಿ ಯಾವ ಕಾಮಗಾರಿ ಅಗತ್ಯವಿದೆ ಎಂಬುದನ್ನು ಗುರುತಿಸಿ, ಜಿಲ್ಲಾಧಿಕಾರಿಗಳ ಅನುಮತಿ ಮೂಲಕ ಅನುದಾನ ಬಿಡುಗಡೆ ಮಾಡಲಾಗುವುದು. ಗ್ರಾಮೀಣಾಭಿವೃದ್ಧಿ ಇಲಾಖೆಗೆ ಮೊದಲ ಬಾರಿಗೆ ಇಷ್ಟು ದೊಡ್ಡ ಮೊತ್ತದ ಅನುದಾನ ನೀಡಲಾಗುತ್ತಿದ್ದು, ಇದೊಂದು ದಾಖಲೆ" ಎಂದು ಹೇಳಿದರು.
ಮೊದಲ ಹಂತದಲ್ಲಿ 5 ಲಕ್ಷ ನಿವೇಶನ ಹಂಚಿಕೆ
ರಾಜ್ಯದಲ್ಲಿ ಒಟ್ಟು 15 ಲಕ್ಷ ನಿವೇಶನಗಳನ್ನು ಹಂಚಿಕೆ ಮಾಡುವ ಗುರಿ ಹೊಂದಲಾಗಿದೆ. ಮೊದಲ ಹಂತದಲ್ಲಿ 5 ಲಕ್ಷ ನಿವೇಶನಗಳನ್ನು ವಿತರಿಸಲು ನಿರ್ಧರಿಸಿದ್ದು, ಇದಕ್ಕಾಗಿ ಸುಮಾರು 9 ಸಾವಿರ ಎಕರೆ ಜಮೀನು ಗುರುತಿಸಲಾಗಿದೆ. ನಿವೇಶನಗಳ ಅಭಿವೃದ್ಧಿಗೆ ಅಗತ್ಯವಿರುವ ರಸ್ತೆ, ಚರಂಡಿ ಸೇರಿದಂತೆ ಮೂಲಸೌಕರ್ಯಗಳ ವೆಚ್ಚವನ್ನು ವಾಸ್ತವಿಕವಾಗಿ ಪರಿಶೀಲಿಸಿ ಯೋಜನೆ ರೂಪಿಸಲಾಗುವುದು" ಎಂದು ಹೇಳಿದರು.
ನಗರಗಳತ್ತ ವಲಸೆ ತಡೆಯಲು ಹಳ್ಳಿಗಳ ಅಭಿವೃದ್ಧಿ
ಮಹಾತ್ಮ ಗಾಂಧೀಜಿ ಅವರು ಭಾರತದ ಆತ್ಮ ಹಳ್ಳಿಗಳಲ್ಲಿ‌ ಇದೆ ಎಂದಿದ್ದರು. ಹಳ್ಳಿಗಳು ಅಭಿವೃದ್ಧಿಯಾದಾಗ ಮಾತ್ರ ರಾಜ್ಯದ ಅಭಿವೃದ್ಧಿ ಸಾಧ್ಯ ಎಂಬುದು ನಮ್ಮ ನಂಬಿಕೆ. ನಾನೂ ಜಿಲ್ಲಾ ಪಂಚಾಯಿತಿ ಸದಸ್ಯನಾಗಿ ಕೆಲಸ ಮಾಡಿದ್ದೇನೆ. ಗ್ರಾಮೀಣ ಜನರ ಸಮಸ್ಯೆಗಳು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಅನುದಾನದ ಕೊರತೆಯಿಂದ ಎದುರಿಸುವ ಸಂಕಷ್ಟಗಳ ಅರಿವು ನನಗಿದೆ. ಹೀಗಾಗಿ ಪಂಚಾಯಿತಿಗಳಿಗೆ ಹೆಚ್ಚಿನ ಆರ್ಥಿಕ ಶಕ್ತಿ ನೀಡುವ ಉದ್ದೇಶದಿಂದ ಇಷ್ಟು ದೊಡ್ಡ ಮೊತ್ತದ ಅನುದಾನ ಒದಗಿಸಲಾಗಿದೆ ಎಂದು ತಿಳಿಸಿದರು.

ಗ್ರಾಮೀಣ ಪ್ರದೇಶಗಳಿಂದ ನಗರಗಳಿಗೆ ಈಗಾಗಲೇ ಶೇ.47ರಷ್ಟು ಜನಸಂಖ್ಯೆ ಸ್ಥಳಾಂತರಗೊಂಡಿದ್ದು, ಮುಂದಿನ ದಿನಗಳಲ್ಲಿ ಈ ಪ್ರಮಾಣ ಶೇ.76ಕ್ಕೆ ಏರಿಕೆಯಾಗುವ ಸಾಧ್ಯತೆ ಇದೆ ಎಂದು ತಜ್ಞರು ವರದಿ ನೀಡಿದ್ದಾರೆ. ಉದ್ಯೋಗ, ಶಿಕ್ಷಣ ಹಾಗೂ ಉತ್ತಮ ಜೀವನದ ನಿರೀಕ್ಷೆಯಲ್ಲಿ ರೈತರ ಮಕ್ಕಳು ಊರು ತೊರೆಯುತ್ತಿದ್ದಾರೆ. ಈ ವಲಸೆ ತಡೆಯಬೇಕಾದರೆ ಹಳ್ಳಿಗಳಲ್ಲೇ ಉತ್ತಮ ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು ಎಂದರು.
ಹಳ್ಳಿಗಳ ಅಭಿವೃದ್ಧಿಯೇ ಮೊದಲ ಆದ್ಯತೆ
ಗ್ರಾಮೀಣ ಪ್ರದೇಶಗಳಲ್ಲಿ ಕೈಗಾರಿಕೆಗಳು ಮತ್ತು ಉದ್ಯೋಗಾವಕಾಶಗಳನ್ನು ಸೃಷ್ಟಿಸಬೇಕು. ಹಳ್ಳಿಗಳಲ್ಲಿ ಉದ್ಯಮ ಸ್ಥಾಪಿಸಲು ಮುಂದೆ ಬರುವವರಿಗೆ ಪಂಚಾಯಿತಿಗಳು ಅನಗತ್ಯ ತೊಂದರೆ ನೀಡಬಾರದು. ಕರಾವಳಿ ಮತ್ತು ಮಲೆನಾಡು ಭಾಗಗಳ ಅಭಿವೃದ್ಧಿಗೂ ವಿಶೇಷ ನೀತಿ ರೂಪಿಸಿ ಕಾರ್ಯಕ್ರಮಗಳನ್ನು ಜಾರಿಗೊಳಿಸಲಾಗುತ್ತಿದೆ ಎಂದು ಹೇಳಿದರು.

ನಗರಗಳ ಅಭಿವೃದ್ಧಿಯಷ್ಟೇ ಗ್ರಾಮೀಣ ಪ್ರದೇಶಗಳ ಅಭಿವೃದ್ಧಿಯೂ ಮುಖ್ಯ. ಸರ್ಕಾರಿ ಕಚೇರಿಗಳು ಮತ್ತು ಪಂಚಾಯಿತಿಗಳು ಜನರ ಕಷ್ಟ ಪರಿಹರಿಸುವ ಕೇಂದ್ರಗಳಾಗಬೇಕು. ರಸ್ತೆ, ಕುಡಿಯುವ ನೀರು, ನಿವೇಶನ, ಖಾತಾ ಸೇರಿದಂತೆ ಜನರ ಮೂಲಭೂತ ಸಮಸ್ಯೆಗಳಿಗೆ ಆದ್ಯತೆ ನೀಡಬೇಕು. 16 ಸಾವಿರ ಕೋಟಿ ಗ್ರಾಮೀಣ ಜನರ ಬದುಕು ಬದಲಿಸುವುದಕ್ಕಾಗಿ. ಅಧಿಕಾರಿಗಳು ಇದನ್ನು ತಮ್ಮ ಕರ್ತವ್ಯವೆಂದು ಭಾವಿಸಿ ಕೆಲಸ ಮಾಡಬೇಕು ಎಂದು ಕರೆ ನೀಡಿದರು.

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్