ಬಿಗ್‌ಬಾಸ್ ಕನ್ನಡ ಸೀಸನ್ 12ರ ಸ್ಪರ್ಧಿ ನಟಿ ಸ್ಪಂದನಾ ಸೋಮಣ್ಣ ತಮ್ಮ ಭಾವಿ ಪತಿಯನ್ನು ಪರಿಚಯಿಸಿದ ಬಳಿಕ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಟ್ರೋಲ್‌ಗೆ ಒಳಗಾಗಿದ್ದರು. ವರುಣ್ ಎಂಬ ಯುವಕನನ್ನು ಕಳೆದ ಆರು ವರ್ಷಗಳಿಂದ ಪ್ರೀತಿಸುತ್ತಿರುವ ಸ್ಪಂದನಾ, ಇತ್ತೀಚೆಗೆ ಅವರೊಂದಿಗೆ ನಿಶ್ಚಿತಾರ್ಥ ಮಾಡಿಕೊಂಡಿದ್ದರು. ಈ ಸಂದರ್ಭದಲ್ಲಿ ಭಾವಿ ಪತಿಯ ಫೋಟೋಗಳನ್ನು ಹಂಚಿಕೊಂಡಿದ್ದರು.
ಆದರೆ, ಸ್ಪಂದನಾ ಅವರ ಭಾವಿ ಪತಿಯ ರೂಪದ ಕುರಿತು ಕೆಲವರು ಸಾಮಾಜಿಕ ಜಾಲತಾಣಗಳಲ್ಲಿ ಟೀಕೆ ಹಾಗೂ ಟ್ರೋಲ್ ಮಾಡಿದ್ದರು. ಈ ವಿಚಾರವಾಗಿ ಸಾಕಷ್ಟು ಚರ್ಚೆಗಳು ನಡೆದಿದ್ದರೂ ಸ್ಪಂದನಾ ಮಾತ್ರ ಯಾವುದಕ್ಕೂ ತಲೆಕೆಡಿಸಿಕೊಂಡಿಲ್ಲ. ಇದೀಗ ತಮ್ಮ ಪ್ರೀ ವೆಡ್ಡಿಂಗ್ ಫೋಟೋಶೂಟ್ ಚಿತ್ರಗಳನ್ನು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಳ್ಳುವ ಮೂಲಕ ಟ್ರೋಲಿಗರಿಗೆ ಪರೋಕ್ಷವಾಗಿ ಉತ್ತರ ನೀಡಿದ್ದಾರೆ.
ಫೋಟೋಗಳೊಂದಿಗೆ ಭಾವುಕ ಸಾಲುಗಳನ್ನು ಬರೆದುಕೊಂಡಿರುವ ಅವರು, "ನೀವು ನನ್ನ ಜೊತೆಗಿರುವಾಗ ಜೀವನ ತುಂಬಾ ಸುಂದರವೆನಿಸುತ್ತದೆ. ನಾನು ಬಯಸುವ ಎಲ್ಲಕ್ಕಿಂತ ಮಿಗಿಲಾದವರು ನೀವು" ಎಂದು ತಮ್ಮ ಪ್ರೀತಿಯನ್ನು ವ್ಯಕ್ತಪಡಿಸಿದ್ದಾರೆ. ಈ ಮೂಲಕ ಟೀಕೆಗಳನ್ನು ಲೆಕ್ಕಿಸದೆ ತಮ್ಮ ಪ್ರೀತಿಯ ಜೀವನದಲ್ಲಿ ಸಂತೋಷವಾಗಿರುವುದಾಗಿ ಸ್ಪಂದನಾ ಸಂದೇಶ ನೀಡಿದ್ದಾರೆ.









