ಕರ್ನಾಟಕದಲ್ಲಿ ಜನವರಿಯಲ್ಲಿ ಜಿಪಂ, ತಾಪಂ ಚುನಾವಣೆ? ಮೀಸಲಾತಿ ಅಂತಿಮ ಅಧಿಸೂಚನೆ ಪ್ರಕಟ!

mirrortvkannada.com
Date : 24 November 2026, 3:24 pm Posted By : MIRROR TV KANNADA

ಕರ್ನಾಟಕದಲ್ಲಿ ಜನವರಿಯಲ್ಲಿ ಜಿಪಂ, ತಾಪಂ ಚುನಾವಣೆ? ಮೀಸಲಾತಿ ಅಂತಿಮ ಅಧಿಸೂಚನೆ ಪ್ರಕಟ!

ರಾಜ್ಯದಲ್ಲಿ ಬಹಳ ದಿನಗಳಿಂದ ಮುಂದೂಡಲ್ಪಟ್ಟಿರುವ ಜಿಲ್ಲಾ ಪಂಚಾಯಿತಿ (ಜಿಪಂ) ಮತ್ತು ತಾಲೂಕು ಪಂಚಾಯಿತಿ (ತಾಪಂ) ಚುನಾವಣೆ ನಡೆಸಲು ಸಿದ್ಧತೆಗಳು ಚುರುಕುಗೊಂಡಿವೆ. ಜಿಪಂ ಮತ್ತು ತಾಪಂ ಕ್ಷೇತ್ರಗಳ ಮೀಸಲಾತಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಅಂತಿಮ ಅಧಿಸೂಚನೆ ಪ್ರಕಟಿಸಿದ್ದು, ಮುಂಬರುವ ಜನವರಿಯಲ್ಲಿ ಚುನಾವಣೆ ನಡೆಯುವ ಸಾಧ್ಯತೆಯಿದೆ ಎಂದು ಸಚಿವ ಈಶ್ವರ ಬಿ. ಖಂಡ್ರೆ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸೋಮವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದ 30 ಜಿಲ್ಲೆಗಳ ಒಟ್ಟು 1,101 ಜಿಲ್ಲಾ ಪಂಚಾಯಿತಿ ಕ್ಷೇತ್ರಗಳು ಹಾಗೂ 234 ತಾಲೂಕು ಪಂಚಾಯಿತಿಗಳ 3,580 ಸದಸ್ಯ ಸ್ಥಾನಗಳಿಗೆ ಮೀಸಲಾತಿ ನಿಗದಿಪಡಿಸಿ ಸರ್ಕಾರ ಅಂತಿಮ ಅಧಿಸೂಚನೆ ಹೊರಡಿಸಿದೆ ಎಂದು ಮಾಹಿತಿ ನೀಡಿದರು.

ಈ ಮೂಲಕ ಚುನಾವಣೆ ನಡೆಸಲು ರಾಜ್ಯ ಸರ್ಕಾರದ ಕಡೆಯಿಂದ ಅಗತ್ಯ ಪ್ರಕ್ರಿಯೆಗಳು ಪೂರ್ಣಗೊಂಡಿವೆ. ಮುಂದಿನ ಹಂತದಲ್ಲಿ ರಾಜ್ಯ ಚುನಾವಣಾ ಆಯೋಗ ಚುನಾವಣಾ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಬಳಿಕ ಮತದಾನ ಪ್ರಕ್ರಿಯೆ ನಡೆಯಲಿದ್ದು, ಬಹಳ ದಿನಗಳಿಂದ ಕಾಯುತ್ತಿದ್ದ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಿಗೆ ಸಿದ್ಧತೆಗಳು ಅಂತಿಮ ಹಂತ ತಲುಪಿವೆ ಎಂದು ಸಚಿವರು ತಿಳಿಸಿದ್ದಾರೆ.

⬇ DOWNLOAD
×

Editor Reporter

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్