ಬೆಂಗಳೂರು ನಗರದ ರಸ್ತೆ ಕಾಮಗಾರಿಗಳಿಗೆ ಹೊಸ ಡೆಡ್‌ಲೈನ್: ಸಿಲಿಕಾನ್ ಸಿಟಿ ಜನರಿಗೆ ಕೃಷ್ಣಬೈರೇಗೌಡ ಗುಡ್‌ನ್ಯೂಸ್!

mirrortvkannada.com
Date : 25 November 2026, 11:02 pm Posted By : MIRROR TV KANNADA

ಬೆಂಗಳೂರು ನಗರದ ರಸ್ತೆ ಕಾಮಗಾರಿಗಳಿಗೆ ಹೊಸ ಡೆಡ್‌ಲೈನ್: ಸಿಲಿಕಾನ್ ಸಿಟಿ ಜನರಿಗೆ ಕೃಷ್ಣಬೈರೇಗೌಡ ಗುಡ್‌ನ್ಯೂಸ್!

ಗ್ರೇಟರ್ ಬೆಂಗಳೂರು ಪ್ರಾಧಿಕಾರದ (ಜಿಬಿಎ) 5 ನಗರ ಪಾಲಿಕೆಗಳ ವ್ಯಾಪ್ತಿಯಲ್ಲಿ ಕೈಗೆತ್ತಿಕೊಳ್ಳಲಾಗಿರುವ ರಸ್ತೆ ಅಭಿವೃದ್ಧಿ ಹಾಗೂ ರಾಜಕಾಲುವೆ ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನಗರದ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಪ್ರಗತಿ ಕುರಿತು ಇಂದು 5 ನಗರ ಪಾಲಿಕೆಗಳ ಹಾಗೂ ಬಿಬಿಎಂಪಿ ಅಧಿಕಾರಿಗಳೊಂದಿಗೆ ನಡೆಸಿದ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ನಗರದ ರಸ್ತೆಗಳಿಗೆ ಸಂಬಂಧಿಸಿದಂತೆ ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿವೆ. ಜನರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸರ್ಕಾರವು ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಅಗತ್ಯ ಅನುದಾನ ಒದಗಿಸಿದೆ. ಈ ಅನುದಾನವನ್ನು ಸಮರ್ಪಕವಾಗಿ ಬಳಸಿಕೊಂಡು ಕಾಮಗಾರಿಗಳನ್ನು ತ್ವರಿತವಾಗಿ ಪೂರ್ಣಗೊಳಿಸುವ ನಿಟ್ಟಿನಲ್ಲಿ ಸಭೆ ನಡೆಸಲಾಗಿದೆ ಎಂದು ತಿಳಿಸಿದ್ದಾರೆ.

ಮಳೆಗಾಲದಿಂದಾಗಿ ರಸ್ತೆ ಕಾಮಗಾರಿಗಳ ಪ್ರಗತಿಗೆ ಅಡಚಣೆಯಾಗಿತ್ತು. ಇದರ ಜೊತೆಗೆ ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿನ ಪ್ರತಿಕೂಲ ಪರಿಸ್ಥಿತಿಯಿಂದಾಗಿ ಟಾರ್ ದರ ಏರಿಕೆಯಾಗಿದ್ದು, ಕಾಮಗಾರಿಗಳ ಮೇಲೂ ಪರಿಣಾಮ ಬೀರಿತ್ತು. ಇದೀಗ ಮಳೆಗಾಲ ಮುಗಿದಿರುವುದರಿಂದ ಸ್ಟಾರ್ ರೇಟ್ ಆಧಾರದಲ್ಲಿ ಡಾಂಬರೀಕರಣಕ್ಕೆ ಹಣ ಪಾವತಿಸಲಾಗುತ್ತಿದೆ. ಆದ್ದರಿಂದ ಎಲ್ಲಾ ಕಾಮಗಾರಿಗಳ ವೇಗವನ್ನು ಹೆಚ್ಚಿಸಿ, ನಿಗದಿತ ಅವಧಿಯಲ್ಲಿ ಪೂರ್ಣಗೊಳಿಸಬೇಕು ಎಂದರು.
ರಸ್ತೆ ಅಭಿವೃದ್ಧಿ ಕಾಮಗಾರಿಗಳ ವಿವರ
ಸಿಎಂಐಡಿಪಿ ಯೋಜನೆ: 1,000 ಕೋಟಿ ರೂ. ವೆಚ್ಚದಲ್ಲಿ 629 ಕಿ.ಮೀ. ಉದ್ದದ ರಸ್ತೆ ಕಾಮಗಾರಿಗಳು.
ಎಸ್ಐಪಿ ಯೋಜನೆ: 1,241 ಕೋಟಿ ರೂ. ವೆಚ್ಚದಲ್ಲಿ 787 ಕಿ.ಮೀ. ಉದ್ದದ ರಸ್ತೆ ಅಭಿವೃದ್ಧಿ ಕಾಮಗಾರಿಗಳು.
2,000 ಕೋಟಿ ರೂ. ವಿಶೇಷ ಅನುದಾನ: ಈ ಅನುದಾನದಡಿ 1,040 ಕಿ.ಮೀ. ಉದ್ದದ ರಸ್ತೆ ಕಾಮಗಾರಿಗಳು.
ವಿಡಿಪಿ ಯೋಜನೆ: ಹೊರ ವಲಯದ 5 ವಿಧಾನಸಭಾ ಕ್ಷೇತ್ರಗಳಲ್ಲಿ 506 ಕೋಟಿ ರೂ. ವೆಚ್ಚದಲ್ಲಿ 250 ಕಿ.ಮೀ. ಉದ್ದದ ರಸ್ತೆ ಕಾಮಗಾರಿಗಳು.
ಪಾಲಿಕೆ ಅನುದಾನ: 647 ಕೋಟಿ ರೂ. ವೆಚ್ಚದಲ್ಲಿ 175 ಕಿ.ಮೀ. ಉದ್ದದ ರಸ್ತೆ ಕಾಮಗಾರಿಗಳು.

ದೀರ್ಘಕಾಲ ಬಾಳಿಕೆ ಬರುವ ವೈಟ್ ಟಾಪಿಂಗ್ ಕಾಮಗಾರಿಗಳಿಗೆ ಆದ್ಯತೆ
ನಗರದಲ್ಲಿ 2,321 ಕೋಟಿ ರೂ. ವೆಚ್ಚದಲ್ಲಿ 130 ಕಿ.ಮೀ ಉದ್ದದ 88 ವೈಟ್ ಟಾಪಿಂಗ್ ರಸ್ತೆಗಳನ್ನು ಅಭಿವೃದ್ಧಿಪಡಿಸುವ ಉದ್ದೇಶ ಹೊಂದಲಾಗಿದ್ದು, ಈ ಪೈಕಿ ಈಗಾಗಲೇ 120 ಕಿ.ಮೀ. ಉದ್ದದ ವೈಟ್ ಟಾಪಿಂಗ್ ಕಾಮಗಾರಿಗಳು ಪ್ರಗತಿಯಲ್ಲಿವೆ.
ಸುಮಾರು 20 ರಿಂದ 25 ಕಿ.ಮೀ. ರಸ್ತೆಗಳಲ್ಲಿ ಸಂಚಾರ ದಟ್ಟಣೆಯ ಕಾರಣದಿಂದ ಕಾಮಗಾರಿಗಳಿಗೆ ಅನುಮತಿ ದೊರೆಯುತ್ತಿಲ್ಲ. ಸಂಚಾರಕ್ಕೆ ತೊಂದರೆಯಾಗದಂತೆ ಕಾಮಗಾರಿಗಳನ್ನು ಹಂತ ಹಂತವಾಗಿ ಕೈಗೆತ್ತಿಕೊಳ್ಳಲಾಗುತ್ತಿದೆ. ಕಾಮಗಾರಿ ನಡೆಸಲು ಅವಕಾಶವಿರುವ ಸ್ಥಳಗಳಲ್ಲಿ ಡಿಸೆಂಬರ್ ವೇಳೆಗೆ ಕೆಲಸ ಪೂರ್ಣಗೊಳಿಸಲಾಗುವುದು. ಕೆಲವು ಕಡೆಗಳಲ್ಲಿ ಜಲಮಂಡಳಿಯ ಕಾಮಗಾರಿಗಳೂ ನಡೆಯುತ್ತಿರುವುದರಿಂದ ಸಮನ್ವಯದೊಂದಿಗೆ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.
ಅಲ್ಲದೆ, ಈ ರಸ್ತೆಗಳನ್ನು ದೀರ್ಘಕಾಲ ಬಾಳಿಕೆ ಬರುವಂತೆ ಅಭಿವೃದ್ಧಿಪಡಿಸಲು ಯೋಜಿಸಲಾಗಿದೆ. ಹೊರ ವರ್ತುಲ ರಸ್ತೆಯ ಅಭಿವೃದ್ಧಿಗಾಗಿ 487 ಕೋಟಿ ರೂ. ಅನುದಾನವನ್ನು ಪ್ರತ್ಯೇಕವಾಗಿ ಮೀಸಲಿಡಲಾಗಿದ್ದು, ರಸ್ತೆಯನ್ನು ಶಾಶ್ವತವಾಗಿ ಅಭಿವೃದ್ಧಿಪಡಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.
ಒಟ್ಟಾರೆ 2,875 ಕಿ.ಮೀ. ರಸ್ತೆ ಅಭಿವೃದ್ಧಿ ಕಾಮಗಾರಿಗಳ ಪೈಕಿ 553 ಕಿ.ಮೀ. ರಸ್ತೆಗಳಿಗೆ ಈಗಾಗಲೇ ಡಾಂಬರೀಕರಣ ಮಾಡಲಾಗಿದೆ. ಬಾಕಿ ಉಳಿದಿರುವ ರಸ್ತೆಗಳಿಗೆ ಡಾಂಬರೀಕರಣ ಕಾರ್ಯವನ್ನು ತ್ವರಿತವಾಗಿ ಪೂರ್ಣಗೊಳಿಸಬೇಕು. ಸುಮಾರು 100ರಿಂದ 200 ಕಿ.ಮೀ. ರಸ್ತೆ ಕಾಮಗಾರಿಗಳ ಟೆಂಡರ್ ಪ್ರಕ್ರಿಯೆ ಅಂತಿಮ ಹಂತದಲ್ಲಿದ್ದು, ಇನ್ನೂ ಕಾಮಗಾರಿ ಆರಂಭವಾಗದ ಕಡೆಗಳಲ್ಲಿ ಕೂಡಲೇ ಕೆಲಸ ಪ್ರಾರಂಭಿಸಬೇಕು. ಫೆಬ್ರವರಿ ವೇಳೆಗೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಗುರಿ ಹೊಂದಬೇಕು. ಗುತ್ತಿಗೆದಾರರೊಂದಿಗೆ ಚರ್ಚಿಸಿ, ಹೆಚ್ಚುವರಿ ಸಿಬ್ಬಂದಿಯನ್ನು ನಿಯೋಜಿಸುವ ಮೂಲಕ ಕಾಮಗಾರಿಗಳಿಗೆ ವೇಗ ನೀಡಬೇಕು ಎಂದು ಸೂಚಿಸಿದರು.
ಕಾಮಗಾರಿಗಳ ಪ್ರಗತಿಗೆ ಹೈಟೆಕ್ ತಂತ್ರಜ್ಞಾನ ಮತ್ತು ಆನ್ಲೈನ್ ನಿಗಾ
ಕಾಮಗಾರಿಗಳಲ್ಲಿ ಪಾರದರ್ಶಕತೆ ತರಲು ಹಾಗೂ ವೇಗ ಹೆಚ್ಚಿಸಲು ತಂತ್ರಜ್ಞಾನವನ್ನು ಸಮರ್ಪಕವಾಗಿ ಬಳಸಿಕೊಳ್ಳುವಂತೆ ಸಚಿವರು ಅಧಿಕಾರಿಗಳಿಗೆ ಮಹತ್ವದ ನಿರ್ದೇಶನಗಳನ್ನು ನೀಡಿದರು:
ಏಕೀಕೃತ ಡ್ಯಾಶ್ಬೋರ್ಡ್ ಮತ್ತು ರಿಮ್ಸ್ (RIMS): ಜಿಬಿಎ ವ್ಯಾಪ್ತಿಯ 5 ನಗರ ಪಾಲಿಕೆಗಳಲ್ಲಿ ನಡೆಯುತ್ತಿರುವ ಎಲ್ಲಾ ರಸ್ತೆ ಅಭಿವೃದ್ಧಿ ಕಾಮಗಾರಿಗಳನ್ನು ರಿಮ್ಸ್ ವ್ಯವಸ್ಥೆಯಲ್ಲಿ ಅಳವಡಿಸಿ, ಲೈವ್ ಡೇಟಾ ಲಭ್ಯವಾಗುವಂತೆ ಮಾಡಬೇಕು. ಎಲ್ಲಾ ಮಾಹಿತಿಯನ್ನು ಒಂದೇ ಕಡೆ ವೀಕ್ಷಿಸಲು ಏಕೀಕೃತ ಡ್ಯಾಶ್ಬೋರ್ಡ್ (ಯುನಿಫೈಡ್ ಡ್ಯಾಶ್ಬೋರ್ಡ್) ರೂಪಿಸಬೇಕು. ಮುಂದಿನ ಸಭೆಯ ವೇಳೆಗೆ ಎಲ್ಲಾ ಕಾಮಗಾರಿಗಳ ಮಾಹಿತಿಯನ್ನು ಈ ವ್ಯವಸ್ಥೆಯಡಿ ತರಬೇಕು.
ಜಿಐಎಸ್ (GIS) ಇಂಟಿಗ್ರೇಷನ್ ಮತ್ತು ಆಟೋ ಬಿಲ್ಲಿಂಗ್: ಜಿಐಎಸ್ ವ್ಯವಸ್ಥೆಯಲ್ಲಿ ಎಲ್ಲಾ ಇಲಾಖೆಗಳ ಮಾಹಿತಿಯನ್ನು ಸಂಯೋಜಿಸಬೇಕು (Integrated). ಕಾಮಗಾರಿ ಯಾವಾಗ ತೆಗೆದುಕೊಳ್ಳಲಾಗಿದೆ ಎಂಬ ಸಂಪೂರ್ಣ ವಿವರ ಅಲ್ಲಿ ಲಭ್ಯವಿರಬೇಕು. ಕಾಮಗಾರಿಯ ಭೌತಿಕ (Physical) ಮತ್ತು ಆರ್ಥಿಕ (Financial) ಪ್ರಗತಿಗೆ ಅನುಗುಣವಾಗಿ ಜಿಐಎಸ್ ಆಧಾರದ ಮೇಲೆ ಸ್ವಯಂಚಾಲಿತವಾಗಿ ಬಿಲ್ ಲೆಕ್ಕಾಚಾರ (Auto Bill Calculation) ಆಗುವ ವ್ಯವಸ್ಥೆ ಜಾರಿಯಾಗಬೇಕು. ಇದಕ್ಕೆ ಪೂರಕವಾಗಿ ಐಎಫ್ಎಂಎಸ್ (IFMS) ತಂತ್ರಾಂಶವನ್ನು ಸಹ ಮೇಲ್ದರ್ಜೆಗೇರಿಸಬೇಕು.
ಡ್ಯಾಶ್ ಕ್ಯಾಮ್ ಡೇಟಾ ಬಳಕೆ: ರಸ್ತೆಗಳ ಸ್ಥಿತಿಗತಿ ಮತ್ತು ರಸ್ತೆ ದುರಸ್ತಿ ಕಾರ್ಯಗಳನ್ನು ನಿಖರವಾಗಿ ತಿಳಿಯಲು 'ಡ್ಯಾಶ್ ಕ್ಯಾಮ್ ಡೇಟಾ'ವನ್ನು (Dash Cam Data) ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು.
ಸಾರ್ವಜನಿಕರಿಗೆ ಮಾಹಿತಿ ಲಭ್ಯತೆ: ರಸ್ತೆ ಅಭಿವೃದ್ಧಿಯ ಎಲ್ಲಾ ಕಾಮಗಾರಿಗಳ ಸಂಪೂರ್ಣ ಮಾಹಿತಿಯು ಆನ್ಲೈನ್ನಲ್ಲಿ ಲಭ್ಯವಿರಬೇಕು ಮತ್ತು ನಾಗರಿಕರಿಗೆ ಸುಲಭವಾಗಿ ಸಿಗುವಂತೆ ಪಾರದರ್ಶಕ ವ್ಯವಸ್ಥೆ ಕಲ್ಪಿಸಬೇಕು.
ರಸ್ತೆ ಅಭಿವೃದ್ಧಿ ಎಂದರೆ ಕೇವಲ ಡಾಂಬರೀಕರಣಕ್ಕೆ ಸೀಮಿತವಾಗಬಾರದು. ಪಾದಚಾರಿ ಮಾರ್ಗಗಳ ಅಭಿವೃದ್ಧಿ, ಚರಂಡಿಗಳ ಹೂಳು ತೆಗೆಯುವುದು ಸೇರಿದಂತೆ ರಸ್ತೆಗೆ ಸಂಬಂಧಿಸಿದ ಎಲ್ಲಾ ಮೂಲಸೌಕರ್ಯ ಕಾಮಗಾರಿಗಳನ್ನು ಸಮಗ್ರವಾಗಿ ಕೈಗೆತ್ತಿಕೊಳ್ಳಬೇಕು ಎಂದರು.
ರಾಜಕಾಲುವೆ ಅಭಿವೃದ್ಧಿ ಮತ್ತು ಬಫರ್ ರಸ್ತೆಗಳ ನಿರ್ಮಾಣ
ಭೂಮಾಪಕರ ನೆರವಿನೊಂದಿಗೆ ಸಮೀಕ್ಷೆ ನಡೆಸಿ, 200 ಕಿ.ಮೀ. ಉದ್ದದ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ವಿಶೇಷವಾಗಿ ನಗರದ ಹೊರವಲಯದಲ್ಲಿ ಸಮೀಕ್ಷೆ ನಡೆಸಿ, ಈವರೆಗೆ ಅಭಿವೃದ್ಧಿಯಾಗದ ಜಾಗಗಳಲ್ಲಿ ಮಾತ್ರ ರಾಜಕಾಲುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೆ, ಸುಮಾರು 20 ಎಕರೆವರೆಗೆ ಒತ್ತುವರಿಯಾಗಿದ್ದ ಜಾಗವನ್ನು ಪಾಲಿಕೆ ವಶಕ್ಕೆ ಪಡೆದು ರಾಜಕಾಲುವೆ ಅಭಿವೃದ್ಧಿಪಡಿಸಲಾಗುತ್ತಿದೆ.

ಇದರ ಜೊತೆಗೆ, ರಾಜಕಾಲುವೆಗಳ ಪಕ್ಕದಲ್ಲಿ ಬಫರ್ ರಸ್ತೆಗಳನ್ನು ನಿರ್ಮಿಸುವ ಕಾರ್ಯವೂ ಪ್ರಗತಿಯಲ್ಲಿದ್ದು, ಇದಕ್ಕಾಗಿ 200 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಟಿಡಿಆರ್ (TDR) ನೀಡುವ ಮೂಲಕ ರಾಜಕಾಲುವೆಗಳ ಪಕ್ಕದಲ್ಲಿ ಹೊಸ ರಸ್ತೆಗಳನ್ನು ನಿರ್ಮಿಸಲು ಯೋಜಿಸಲಾಗಿದ್ದು, ಇದರಿಂದ ನಗರದ ರಸ್ತೆ ಜಾಲ ವಿಸ್ತರಣೆಯಾಗಿ ಸಂಚಾರ ದಟ್ಟಣೆ ಕಡಿಮೆಯಾಗಲಿದೆ ಎಂದು ತಿಳಿಸಿದರು.

ಮುಂದಿನ 3 ತಿಂಗಳೊಳಗೆ ಡಾಂಬರೀಕರಣ ಹಾಗೂ ವೈಟ್ ಟಾಪಿಂಗ್ ಹೊರತುಪಡಿಸಿ ಕೈಗೆತ್ತಿಕೊಳ್ಳಲಾಗಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಮಾಹಿತಿ ನೀಡಿದರು.

ವಾರ್ಡ್ ಒನ್ ಅಭಿಯಾನದಡಿ ರಸ್ತೆ ಗುಂಡಿಗಳನ್ನು ಮುಚ್ಚುವ ಜೊತೆಗೆ ವಾರ್ಡ್ಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ರಸ್ತೆ ದುರಸ್ತಿ, ಸ್ವಚ್ಛತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಡಿಸೆಂಬರ್ ಅಂತ್ಯದೊಳಗೆ ಅಭಿಯಾನವನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುತ್ತಿದೆ ಎಂದಿದ್ದಾರೆ.

⬇ DOWNLOAD
×

ಡ್ಯಾಶ್ ಕ್ಯಾಮ್ ಡೇಟಾ ಬಳಕೆ: ರಸ್ತೆಗಳ ಸ್ಥಿತಿಗತಿ ಮತ್ತು ರಸ್ತೆ ದುರಸ್ತಿ ಕಾರ್ಯಗಳನ್ನು ನಿಖರವಾಗಿ ತಿಳಿಯಲು ‘ಡ್ಯಾಶ್ ಕ್ಯಾಮ್ ಡೇಟಾ’ವನ್ನು (Dash Cam Data) ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು.

ಸಾರ್ವಜನಿಕರಿಗೆ ಮಾಹಿತಿ ಲಭ್ಯತೆ: ರಸ್ತೆ ಅಭಿವೃದ್ಧಿಯ ಎಲ್ಲಾ ಕಾಮಗಾರಿಗಳ ಸಂಪೂರ್ಣ ಮಾಹಿತಿಯು ಆನ್ಲೈನ್ನಲ್ಲಿ ಲಭ್ಯವಿರಬೇಕು ಮತ್ತು ನಾಗರಿಕರಿಗೆ ಸುಲಭವಾಗಿ ಸಿಗುವಂತೆ ಪಾರದರ್ಶಕ ವ್ಯವಸ್ಥೆ ಕಲ್ಪಿಸಬೇಕು.

ರಸ್ತೆ ಅಭಿವೃದ್ಧಿ ಎಂದರೆ ಕೇವಲ ಡಾಂಬರೀಕರಣಕ್ಕೆ ಸೀಮಿತವಾಗಬಾರದು. ಪಾದಚಾರಿ ಮಾರ್ಗಗಳ ಅಭಿವೃದ್ಧಿ, ಚರಂಡಿಗಳ ಹೂಳು ತೆಗೆಯುವುದು ಸೇರಿದಂತೆ ರಸ್ತೆಗೆ ಸಂಬಂಧಿಸಿದ ಎಲ್ಲಾ ಮೂಲಸೌಕರ್ಯ ಕಾಮಗಾರಿಗಳನ್ನು ಸಮಗ್ರವಾಗಿ ಕೈಗೆತ್ತಿಕೊಳ್ಳಬೇಕು ಎಂದರು.

ರಾಜಕಾಲುವೆ ಅಭಿವೃದ್ಧಿ ಮತ್ತು ಬಫರ್ ರಸ್ತೆಗಳ ನಿರ್ಮಾಣ

ಭೂಮಾಪಕರ ನೆರವಿನೊಂದಿಗೆ ಸಮೀಕ್ಷೆ ನಡೆಸಿ, 200 ಕಿ.ಮೀ. ಉದ್ದದ ರಾಜಕಾಲುವೆ ಅಭಿವೃದ್ಧಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗಿದೆ. ವಿಶೇಷವಾಗಿ ನಗರದ ಹೊರವಲಯದಲ್ಲಿ ಸಮೀಕ್ಷೆ ನಡೆಸಿ, ಈವರೆಗೆ ಅಭಿವೃದ್ಧಿಯಾಗದ ಜಾಗಗಳಲ್ಲಿ ಮಾತ್ರ ರಾಜಕಾಲುವೆ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ಅಲ್ಲದೆ, ಸುಮಾರು 20 ಎಕರೆವರೆಗೆ ಒತ್ತುವರಿಯಾಗಿದ್ದ ಜಾಗವನ್ನು ಪಾಲಿಕೆ ವಶಕ್ಕೆ ಪಡೆದು ರಾಜಕಾಲುವೆ ಅಭಿವೃದ್ಧಿಪಡಿಸಲಾಗುತ್ತಿದೆ.

ಇದರ ಜೊತೆಗೆ, ರಾಜಕಾಲುವೆಗಳ ಪಕ್ಕದಲ್ಲಿ ಬಫರ್ ರಸ್ತೆಗಳನ್ನು ನಿರ್ಮಿಸುವ ಕಾರ್ಯವೂ ಪ್ರಗತಿಯಲ್ಲಿದ್ದು, ಇದಕ್ಕಾಗಿ 200 ಕೋಟಿ ರೂ. ಅನುದಾನ ಮೀಸಲಿಡಲಾಗಿದೆ. ಟಿಡಿಆರ್ (TDR) ನೀಡುವ ಮೂಲಕ ರಾಜಕಾಲುವೆಗಳ ಪಕ್ಕದಲ್ಲಿ ಹೊಸ ರಸ್ತೆಗಳನ್ನು ನಿರ್ಮಿಸಲು ಯೋಜಿಸಲಾಗಿದ್ದು, ಇದರಿಂದ ನಗರದ ರಸ್ತೆ ಜಾಲ ವಿಸ್ತರಣೆಯಾಗಿ ಸಂಚಾರ ದಟ್ಟಣೆ ಕಡಿಮೆಯಾಗಲಿದೆ ಎಂದು ತಿಳಿಸಿದರು.

ಮುಂದಿನ 3 ತಿಂಗಳೊಳಗೆ ಡಾಂಬರೀಕರಣ ಹಾಗೂ ವೈಟ್ ಟಾಪಿಂಗ್ ಹೊರತುಪಡಿಸಿ ಕೈಗೆತ್ತಿಕೊಳ್ಳಲಾಗಿರುವ ಕಾಂಕ್ರೀಟ್ ರಸ್ತೆ ಕಾಮಗಾರಿಗಳನ್ನು ಪೂರ್ಣಗೊಳಿಸುವ ಗುರಿ ಹೊಂದಲಾಗಿದೆ ಎಂದು ಮಾಹಿತಿ ನೀಡಿದರು.

ವಾರ್ಡ್ ಒನ್ ಅಭಿಯಾನದಡಿ ರಸ್ತೆ ಗುಂಡಿಗಳನ್ನು ಮುಚ್ಚುವ ಜೊತೆಗೆ ವಾರ್ಡ್ಗಳ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗಿದೆ. ರಸ್ತೆ ದುರಸ್ತಿ, ಸ್ವಚ್ಛತೆ ಸೇರಿದಂತೆ ಅಗತ್ಯ ಮೂಲಸೌಕರ್ಯ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಡಿಸೆಂಬರ್ ಅಂತ್ಯದೊಳಗೆ ಅಭಿಯಾನವನ್ನು ಪೂರ್ಣಗೊಳಿಸಲು ಕ್ರಮ ವಹಿಸಲಾಗುತ್ತಿದೆ ಎಂದಿದ್ದಾರೆ.

Editor Reporter

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్