ಕತಾರ್‌ನ ನೈಸರ್ಗಿಕ ಅನಿಲ ಘಟಕದಲ್ಲಿ ಭೀಕರ ಸ್ಫೋಟ: 54 ಜನರಿಗೆ ಗಾಯ, 18 ಮಂದಿ ನಾಪತ್ತೆ

mirrortvkannada.com
Date : 22 June 2026, 11:00 am Posted By : MIRROR TV KANNADA

ಕತಾರ್‌ನ ನೈಸರ್ಗಿಕ ಅನಿಲ ಘಟಕದಲ್ಲಿ ಭೀಕರ ಸ್ಫೋಟ: 54 ಜನರಿಗೆ ಗಾಯ, 18 ಮಂದಿ ನಾಪತ್ತೆ

ಕತಾರ್‌ನ ಪ್ರಮುಖ ನೈಸರ್ಗಿಕ ಅನಿಲ ಸಂಸ್ಕರಣಾ ಘಟಕವೊಂದರಲ್ಲಿ ಭೀಕರ ಸ್ಫೋಟ ಸಂಭವಿಸಿದ್ದು, ಭಾರೀ ಅನಾಹುತ ಸೃಷ್ಟಿಯಾಗಿದೆ. ಈ ದಿಢೀರ್ ದುರಂತದಲ್ಲಿ ಕನಿಷ್ಠ 54 ಮಂದಿ ಕಾರ್ಮಿಕರು ಗಂಭೀರವಾಗಿ ಗಾಯಗೊಂಡಿದ್ದು, ಅವರನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸ್ಫೋಟದ ತೀವ್ರತೆಗೆ ಘಟಕದ ಬಹುಪಾಲು ಹಾನಿಗೀಡಾಗಿದ್ದು, ಸುತ್ತಮುತ್ತಲಿನ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ.
ಸ್ಫೋಟದ ಬೆನ್ನಲ್ಲೇ ಘಟನಾ ಸ್ಥಳದಲ್ಲಿ ದಟ್ಟ ಹೊಗೆ ಮತ್ತು ಬೆಂಕಿ ಆವರಿಸಿಕೊಂಡಿದ್ದು, ರಕ್ಷಣಾ ಕಾರ್ಯಾಚರಣೆಯನ್ನು ತೀವ್ರಗೊಳಿಸಲಾಗಿದೆ. ದುರಂತ ಸಂಭವಿಸಿದ ವೇಳೆ ಕೆಲಸ ಮಾಡುತ್ತಿದ್ದ 18 ಮಂದಿ ಕಾರ್ಮಿಕರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಅವರಿಗಾಗಿ ಭವಾರಿ ಶೋಧ ಕಾರ್ಯ ನಡೆಯುತ್ತಿದ್ದು, ಅಗ್ನಿಶಾಮಕ ದಳ, ಆಂಬ್ಯುಲೆನ್ಸ್ ಮತ್ತು ರಕ್ಷಣಾ ಪಡೆಗಳು ಸ್ಥಳದಲ್ಲೇ ಮೊಕ್ಕಾಂ ಹೂಡಿ ರಕ್ಷಣಾ ಕಾರ್ಯದಲ್ಲಿ ತೊಡಗಿವೆ.
ಈ ಭಾರಿ ಸ್ಫೋಟಕ್ಕೆ ನಿಖರವಾದ ಕಾರಣವೇನೆಂಬುದು ಇನ್ನೂ ತಿಳಿದುಬಂದಿಲ್ಲ. ತಾಂತ್ರಿಕ ದೋಷ ಅಥವಾ ಅನಿಲ ಸೋರಿಕೆಯಿಂದ ಈ ಅನಾಹುತ ಸಂಭವಿಸಿರಬಹುದು ಎಂದು ಶಂಕಿಸಲಾಗಿದ್ದು, ಅಧಿಕಾರಿಗಳು ಉನ್ನತ ಮಟ್ಟದ ತನಿಖೆಗೆ ಆದೇಶಿಸಿದ್ದಾರೆ. ವಿಶ್ವದ ಅತಿ ದೊಡ್ಡ ನೈಸರ್ಗಿಕ ಅನಿಲ ಪೂರೈಕೆ ರಾಷ್ಟ್ರಗಳಲ್ಲಿ ಒಂದಾಗಿರುವ ಕತಾರ್‌ನಲ್ಲಿ ನಡೆದಿರುವ ಈ ಘಟನೆಯು, ಇಂಧನ ಮತ್ತು ಕೈಗಾರಿಕಾ ವಲಯದಲ್ಲಿ ತೀವ್ರ ಕಳವಳ ಮೂಡಿಸಿದೆ.

⬇ DOWNLOAD
×

Editor Reporter

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్