ಸಿದ್ದರಾಮಯ್ಯ ಎದುರು ಕಣ್ಣೀರಿಟ್ಟ ಶಾಸಕ ಪ್ರದೀಪ್ ಈಶ್ವರ್..

ಕೆಂಪೇಗೌಡ ಜಯಂತಿ(Kempegowda Jayanti) ಆಚರಣೆ ವೇಳೆ ನಡೆದ ಅಹಿತಕರ ಘಟನೆಯ ಬೆನ್ನಲ್ಲೇ, ಚಿಕ್ಕಬಳ್ಳಾಪುರ (Chikkaballapura) ಶಾಸಕ ಪ್ರದೀಪ್ ಈಶ್ವರ್ ಅವರು ಇಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರನ್ನು ಭೇಟಿ ಮಾಡಿ ತಮಗಾದ ಅವಮಾನವನ್ನು ವಿವರಿಸಿ ಕಣ್ಣೀರು ಹಾಕಿದ್ದಾರೆ.

 

ನಡೆದ ಗಲಾಟೆಯನ್ನು ಸಿದ್ದರಾಮಯ್ಯ ಅವರಿಗೆ ವಿವರಿಸಿದ ಶಾಸಕ ಪ್ರದೀಪ್ ಈಶ್ವರ್ (Pradeep Eshwar) ತೀವ್ರ ಭಾವುಕರಾದರು. ವಿರೋಧ ಪಕ್ಷಗಳಾದ ಜೆಡಿಎಸ್ (JDS) ಮತ್ತು ಬಿಜೆಪಿ (BJP) ಕಾರ್ಯಕರ್ತರು ನನ್ನ ಮೇಲೆ ಚಪ್ಪಲಿ ಎಸೆದಿದ್ದಲ್ಲದೆ, ನನ್ನ ಹಾಗೂ ನನ್ನ ಕುಟುಂಬದವರನ್ನು ಅತ್ಯಂತ ನಿಂದನೀಯ ಪದಗಳಿಂದ ನಿಂದಿಸಿದ್ದಾರೆ ಎಂದು ಹೇಳುತ್ತಾ ಸಿದ್ದರಾಮಯ್ಯ ಅವರ ಎದುರೇ ಕಣ್ಣೀರು ಸುರಿಸಿದರು.

 

ಶಾಸಕರಿಗೆ ಧೈರ್ಯ ತುಂಬಿದ ಸಿದ್ದರಾಮಯ್ಯ ಅವರು, ರಾಜಕಾರಣದಲ್ಲಿ ಇಂತಹ ಘಟನೆಗಳು ಸಾಮಾನ್ಯ. ಇವೆಲ್ಲವನ್ನೂ ಧೈರ್ಯದಿಂದ ಎದುರಿಸಬೇಕು. ಯಾವುದೇ ಕಾರಣಕ್ಕೂ ಧೃತಿಗೆಡಬೇಡಿ, ಇಡೀ ಪಕ್ಷ ಮತ್ತು ನಾವೆಲ್ಲರೂ ನಿಮ್ಮೊಂದಿಗೆ ಇದ್ದೇವೆ ಎಂದು ಸಾಂತ್ವನ ಹೇಳಿದರು.

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్