ಪ್ಯಾನ್ ಇಂಡಿಯಾ 'ದುರಂಧರ್' ಖ್ಯಾತಿಯ ನಟಿ ಆಯಿಷಾ ಖಾನ್ ಅವರನ್ನು ನೀಟ್ (NEET) ಪರೀಕ್ಷೆಯಲ್ಲಿನ ಅಕ್ರಮಗಳನ್ನು ವಿರೋಧಿಸಿ ನಡೆದ ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ವೇಳೆ ಮುಂಬೈ ಪೊಲೀಸರು ಬುಧವಾರ ವಶಕ್ಕೆ ಪಡೆದಿದ್ದಾರೆ. ಈ ಘಟನೆ ಕುರಿತು ಆಯಿಷಾ ಖಾನ್ ಬಳಿಕ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಹಂಚಿಕೊಂಡಿದ್ದು, ಅದು ವೈರಲ್ ಆಗಿದೆ.
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೇಶಾದ್ಯಂತ ವಿದ್ಯಾರ್ಥಿಗಳ ಪ್ರತಿಭಟನೆ ತೀವ್ರಗೊಂಡಿದೆ. ಸಿಜೆಪಿ ಸೇರಿದಂತೆ ಹಲವು ರಾಜಕೀಯ ಪಕ್ಷಗಳು ಹಾಗೂ ಚಿತ್ರರಂಗದ ಗಣ್ಯರು ವಿದ್ಯಾರ್ಥಿಗಳ ಹೋರಾಟಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ಪರೀಕ್ಷಾ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಮತ್ತು ಹೊಣೆಗಾರಿಕೆ ಇರಬೇಕೆಂದು ಪ್ರತಿಭಟನಾಕಾರರು ಆಗ್ರಹಿಸುತ್ತಿದ್ದಾರೆ.
ದೆಹಲಿ, ಮುಂಬೈ, ಕರ್ನಾಟಕ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ಪ್ರತಿಭಟನೆಗಳು ಮುಂದುವರಿದಿವೆ. ಇದೇ ವೇಳೆ ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಒತ್ತಾಯ ಕೂಡ ಹೆಚ್ಚಾಗಿದ್ದು, ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಬಗ್ಗೆ ಸಮಗ್ರ ತನಿಖೆ ನಡೆಸಿ ವಿದ್ಯಾರ್ಥಿಗಳಿಗೆ ನ್ಯಾಯ ಒದಗಿಸಬೇಕೆಂದು ಪ್ರತಿಭಟನಾಕಾರರು ಸರ್ಕಾರವನ್ನು ಆಗ್ರಹಿಸಿದ್ದಾರೆ.









