ಆನೆಕಲ್ ತಾಲೂಕಿನ ಬನ್ನೇರುಘಟ್ಟ ಸಮೀಪದ ದೊಡ್ಡಕಮ್ಮಮಹಳ್ಳಿಯಲ್ಲಿ ಗ್ಯಾಸ್ ಸೋರಿಕೆಯಿಂದ ಹಾಸಿಗೆ ಗೋಡೌನ್‌ಗೆ ಬೆಂಕಿ ಹೊತ್ತಿಕೊಂಡ ಘಟನೆ ನಡೆದಿದೆ. ಈ ಅವಘಡದಲ್ಲಿ ಗೋಡೌನ್‌ನಲ್ಲಿದ್ದ ಹಾಸಿಗೆ ಸಾಮಗ್ರಿಗಳು ಬೆಂಕಿಗೆ ಆಹುತಿಯಾಗಿವೆ.
ಕಟ್ಟಡದ ಕೆಳಮಹಡಿಯಲ್ಲಿ ಹಾಸಿಗೆ ಅಂಗಡಿ ನಡೆಸಲಾಗುತ್ತಿತ್ತು. ಮೇಲಿನ ಮಹಡಿಯನ್ನು ಗೋಡೌನ್ ಆಗಿ ಬಳಸಲಾಗುತ್ತಿತ್ತು. ಕೆಲಸಗಾರರು ಅಡುಗೆ ಮಾಡಿಕೊಳ್ಳಲು ಅಲ್ಲಿಯೇ ಗ್ಯಾಸ್ ಸಿಲಿಂಡರ್ ಇಡಲಾಗಿದ್ದು, ಅದರಿಂದ ಗ್ಯಾಸ್ ಸೋರಿಕೆಯಾಗಿದ್ದೇ ಅಗ್ನಿ ಅವಘಡಕ್ಕೆ ಕಾರಣ ಎಂದು ತಿಳಿದುಬಂದಿದೆ.
ಬೆಂಕಿ ಕಾಣಿಸಿಕೊಂಡ ತಕ್ಷಣ ಕೆಲಸಗಾರರು ಹೊರಗೆ ಓಡಿ ಪಾರಾಗಿದ್ದಾರೆ. ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸಲು ಹರಸಾಹಸ ಪಟ್ಟರು. ಅದೃಷ್ಟವಶಾತ್ ಯಾವುದೇ ಸಾವುನೋವುಗಳು ಸಂಭವಿಸಿಲ್ಲ. ಈ ಘಟನೆ ಹುಳಿಮಾವು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.









