ಹೆಚ್ಚು ಶುಲ್ಕ ವಸೂಲಿ ಮಾಡುವ ಖಾಸಗಿ ಶಾಲೆಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ

mirrortvkannada.com
Date : 24 July 2026, 5:43 pm Posted By : MIRROR TV KANNADA

ಹೆಚ್ಚು ಶುಲ್ಕ ವಸೂಲಿ ಮಾಡುವ ಖಾಸಗಿ ಶಾಲೆಗಳಿಗೆ ಡಿಕೆ ಶಿವಕುಮಾರ್ ಖಡಕ್ ಎಚ್ಚರಿಕೆ

ನಗರ ಪ್ರದೇಶಗಳಲ್ಲಿ ವಿದ್ಯಾರ್ಥಿಗಳಿಂದ ವಾರ್ಷಿಕ ₹50,000ಕ್ಕಿಂತ ಹೆಚ್ಚು ಶುಲ್ಕ ವಸೂಲಿ ಮಾಡುವ ಖಾಸಗಿ ಶಾಲೆಗಳು ಕಡ್ಡಾಯವಾಗಿ ಗ್ರಾಮೀಣ ಭಾಗದ ಸರ್ಕಾರಿ ಶಾಲೆಗಳನ್ನು ದತ್ತು ಪಡೆಯಬೇಕು ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಸೂಚನೆ ನೀಡಿದ್ದಾರೆ. ಗ್ರಾಮೀಣ ಶಾಲೆಗಳ ಮೂಲಸೌಕರ್ಯ ಹಾಗೂ ಶಿಕ್ಷಣದ ಗುಣಮಟ್ಟವನ್ನು ಹೆಚ್ಚಿಸುವ ಉದ್ದೇಶದಿಂದ ಈ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಖಾಸಗಿ ಶಿಕ್ಷಣ ಸಂಸ್ಥೆಗಳು ಸಾಮಾಜಿಕ ಹೊಣೆಗಾರಿಕೆಯನ್ನು ಅರಿತು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಕೈಜೋಡಿಸಬೇಕು ಎಂದು ಡಿಕೆ ಶಿವಕುಮಾರ್ ಹೇಳಿದ್ದಾರೆ. ಗ್ರಾಮೀಣ ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ಸೌಲಭ್ಯಗಳನ್ನು ಕಲ್ಪಿಸುವ ನಿಟ್ಟಿನಲ್ಲಿ ಖಾಸಗಿ ಶಾಲೆಗಳ ಸಹಕಾರ ಅಗತ್ಯವಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಸರ್ಕಾರದ ಈ ನಿರ್ದೇಶನವನ್ನು ಪಾಲಿಸದ ಖಾಸಗಿ ಶಾಲೆಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವುದಾಗಿ ಡಿಕೆ ಶಿವಕುಮಾರ್ ಎಚ್ಚರಿಕೆ ನೀಡಿದ್ದಾರೆ. ಸರ್ಕಾರದ ಸೂಚನೆಯನ್ನು ನಿರ್ಲಕ್ಷಿಸಿದರೆ, ಅಂತಹ ಶಾಲೆಗಳು ವಿದ್ಯಾರ್ಥಿಗಳಿಂದ ವಸೂಲಿ ಮಾಡುವ ಶುಲ್ಕಕ್ಕೆ ಕಟ್ಟುನಿಟ್ಟಿನ ಮಿತಿ ವಿಧಿಸುವ ಬಗ್ಗೆ ಸರ್ಕಾರ ಚಿಂತನೆ ನಡೆಸಲಿದೆ ಎಂದು ಸ್ಪಷ್ಟಪಡಿಸಿದರು.

⬇ DOWNLOAD
×

Editor Reporter

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్