ಅಸ್ಸಾಂನಲ್ಲಿ ಭಾರೀ ಮಳೆಯ ಪರಿಣಾಮ ಪ್ರವಾಹ ಪರಿಸ್ಥಿತಿ ಮತ್ತಷ್ಟು ಗಂಭೀರಗೊಂಡಿದ್ದು, ಏಳು ಜಿಲ್ಲೆಗಳ 3 ಲಕ್ಷಕ್ಕೂ ಹೆಚ್ಚು ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಅಧಿಕೃತ ಮಾಹಿತಿಯ ಪ್ರಕಾರ ಪ್ರವಾಹ ಮತ್ತು ಸಂಬಂಧಿತ ಘಟನೆಗಳಿಂದ ಈವರೆಗೆ ಮೃತಪಟ್ಟವರ ಸಂಖ್ಯೆ 78ಕ್ಕೆ ಏರಿಕೆಯಾಗಿದೆ. ನೂರಾರು ಗ್ರಾಮಗಳು ಜಲಾವೃತವಾಗಿದ್ದು, ಸಾವಿರಾರು ಕುಟುಂಬಗಳು ಸುರಕ್ಷಿತ ಸ್ಥಳಗಳಿಗೆ ಸ್ಥಳಾಂತರಗೊಂಡಿವೆ.
ಶಿವಸಾಗರ, ಚರೈಡಿಯೊ, ಗೋಲಾಘಾಟ್, ಜೋರ್ಹತ್, ನಾಗಾಂವ್, ವಿಶ್ವನಾಥ್ ಹಾಗೂ ಕಾಮರೂಪ್ ಜಿಲ್ಲೆಗಳು ಪ್ರವಾಹದಿಂದ ತೀವ್ರವಾಗಿ ಬಾಧಿತವಾಗಿವೆ. ಒಟ್ಟು 21 ಕಂದಾಯ ವೃತ್ತಗಳು ಹಾಗೂ 551 ಗ್ರಾಮಗಳು ನೀರಿನಲ್ಲಿ ಮುಳುಗಿದ್ದು, ಸುಮಾರು 3,00,031 ಜನರು ಪ್ರವಾಹದ ಸಂಕಷ್ಟವನ್ನು ಎದುರಿಸುತ್ತಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಪ್ರವಾಹದಿಂದ 21,500 ಹೆಕ್ಟೇರ್‌ಗೂ ಹೆಚ್ಚು ಕೃಷಿ ಭೂಮಿ ಹಾನಿಗೊಳಗಾಗಿದ್ದು, ರೈತರಿಗೆ ಭಾರೀ ನಷ್ಟ ಉಂಟಾಗಿದೆ. ರಕ್ಷಣಾ ಮತ್ತು ಪರಿಹಾರ ಕಾರ್ಯಾಚರಣೆಗಳು ಮುಂದುವರಿದಿದ್ದು, ಪರಿಸ್ಥಿತಿಯನ್ನು ಸರ್ಕಾರ ನಿರಂತರವಾಗಿ ಪರಿಶೀಲಿಸುತ್ತಿದೆ.









