ಮುಂಬೈ: ಹಿರಿಯ ಕಾಂಗ್ರೆಸ್ ನಾಯಕ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಹಾಗೂ ಮಾಜಿ ರಾಜ್ಯಪಾಲ ಡಿ.ವೈ. ಪಾಟೀಲ್ ಅವರು ಇಂದು (ಆ.4) ನಿಧನರಾಗಿದ್ದಾರೆ. ದೀರ್ಘಕಾಲದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಹಾರಾಷ್ಟ್ರದ ಕೊಲ್ಹಾಪುರದಲ್ಲಿರುವ ತಮ್ಮ ನಿವಾಸದಲ್ಲಿ ಕೊನೆಯುಸಿರೆಳೆದರು. ಅವರಿಗೆ 90 ವರ್ಷ ವಯಸ್ಸಾಗಿತ್ತು.
ರಾಜಕೀಯ ಕ್ಷೇತ್ರದಲ್ಲಿ ಹಲವು ದಶಕಗಳ ಕಾಲ ಸಕ್ರಿಯರಾಗಿದ್ದ ಡಿ.ವೈ. ಪಾಟೀಲ್ ಅವರು ಕಾಂಗ್ರೆಸ್‌ನ ಹಿರಿಯ ನಾಯಕರಾಗಿ ಗುರುತಿಸಿಕೊಂಡಿದ್ದರು. ರಾಜ್ಯಪಾಲರಾಗಿಯೂ ಸೇವೆ ಸಲ್ಲಿಸಿದ್ದ ಅವರು ಸಮಾಜ ಸೇವೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿಯೂ ಮಹತ್ವದ ಕೊಡುಗೆ ನೀಡಿದ್ದಾರೆ. ಅವರ ಸೇವೆಯನ್ನು ಗುರುತಿಸಿ ಪದ್ಮಶ್ರೀ ಪ್ರಶಸ್ತಿಯನ್ನೂ ನೀಡಿ ಗೌರವಿಸಲಾಗಿತ್ತು.
ಡಿ.ವೈ. ಪಾಟೀಲ್ ಅವರು ಮಾಜಿ ಸಚಿವ ಹಾಗೂ ಕಾಂಗ್ರೆಸ್ ನಾಯಕ ಸತೇಜ್ ಪಾಟೀಲ್, ಸಂಜಯ್ ಪಾಟೀಲ್ ಮತ್ತು ಅಜಿಂಕ್ಯ ಪಾಟೀಲ್ ಸೇರಿದಂತೆ ಮೂವರು ಪುತ್ರರನ್ನು ಅಗಲಿದ್ದಾರೆ. ಅವರ ನಿಧನಕ್ಕೆ ರಾಜಕೀಯ ಗಣ್ಯರು ಹಾಗೂ ವಿವಿಧ ಕ್ಷೇತ್ರಗಳ ಗಣ್ಯರು ಸಂತಾಪ ಸೂಚಿಸಿದ್ದಾರೆ.









