ನವದೆಹಲಿ: ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿ ನಡೆಸಲು ಆದೇಶ ನೀಡಿದವರು ಯಾರು ಎಂಬುದನ್ನು ಸ್ಪಷ್ಟಪಡಿಸಬೇಕು ಎಂದು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಆಗ್ರಹಿಸಿದ್ದಾರೆ. ಈ ವಿಚಾರದಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಹೊಣೆಗಾರಿಕೆಯನ್ನು ಪ್ರಶ್ನಿಸಿರುವ ಅವರು, ಆದೇಶ ನೀಡಿದ್ದರೆ ರಾಜೀನಾಮೆ ನೀಡಬೇಕು ಎಂದು ಹೇಳಿದ್ದಾರೆ.
“ಬಲೂನ್ ಒಡೆದುಹೋಗಿದೆ. ಈಗ ಕೊನೆಯ ಕ್ಷಣದಲ್ಲಿ ಮತ್ತೆ ಗಾಳಿ ತುಂಬಲು ಪ್ರಯತ್ನಿಸುತ್ತಿದ್ದಾರೆ” ಎಂದು ರಾಹುಲ್ ಗಾಂಧಿ ವ್ಯಂಗ್ಯವಾಡಿದರು. ವಿದ್ಯಾರ್ಥಿಗಳ ಮೇಲೆ ಗುಂಡಿನ ದಾಳಿಗೆ ಅಮಿತ್ ಶಾ ಆದೇಶ ನೀಡಿದ್ದರೆ, ಅದರ ಹೊಣೆ ಹೊತ್ತು ಅವರು ರಾಜೀನಾಮೆ ನೀಡಬೇಕು ಎಂದು ಅವರು ಹೇಳಿದರು.
ಒಂದು ವೇಳೆ ಈ ಘಟನೆ ತಮ್ಮ ಗಮನಕ್ಕೆ ಬಂದಿಲ್ಲ ಎಂದು ಅಮಿತ್ ಶಾ ಹೇಳಿದರೂ, ಆಗಲೂ ಅವರು ರಾಜೀನಾಮೆ ನೀಡಬೇಕು ಎಂದು ರಾಹುಲ್ ಗಾಂಧಿ ಟೀಕಿಸಿದರು. ದೇಶದ ಪ್ರಮುಖ ಆಂತರಿಕ ಭದ್ರತಾ ಹೊಣೆಗಾರಿಕೆಯನ್ನು ಹೊಂದಿರುವ ಗೃಹ ಸಚಿವರಿಗೆ ಇಂತಹ ಘಟನೆ ಗಮನಕ್ಕೆ ಬರದಿರುವುದು ಅವರ ಅಸಮರ್ಥತೆಯನ್ನು ತೋರಿಸುತ್ತದೆ ಎಂದು ಅವರು ಆರೋಪಿಸಿದರು.









