ಸಿಂಧೂ ಜಲ ಒಪ್ಪಂದ ಅಮಾನತು ರಾಷ್ಟ್ರೀಯ ಹಿತಾಸಕ್ತಿಯ ನಿರ್ಣಾಯಕ ಹೆಜ್ಜೆ: ರಾಷ್ಟ್ರಪತಿ ಮುರ್ಮು

mirrortvkannada.com
Date : 14 August 2026, 11:53 pm Posted By : MIRROR TV KANNADA

ಸಿಂಧೂ ಜಲ ಒಪ್ಪಂದ ಅಮಾನತು ರಾಷ್ಟ್ರೀಯ ಹಿತಾಸಕ್ತಿಯ ನಿರ್ಣಾಯಕ ಹೆಜ್ಜೆ: ರಾಷ್ಟ್ರಪತಿ ಮುರ್ಮು

ನವದೆಹಲಿ: ಉಗ್ರವಾದಕ್ಕೆ ಆಶ್ರಯ ನೀಡುವ ರಾಷ್ಟ್ರದೊಂದಿಗೆ ಮಾಡಿಕೊಂಡಿದ್ದ ಸಿಂಧೂ ಜಲ ಒಪ್ಪಂದವನ್ನು ಅಮಾನತುಗೊಳಿಸಿರುವುದು ರಾಷ್ಟ್ರೀಯ ಹಿತಾಸಕ್ತಿಯ ದೃಷ್ಟಿಯಿಂದ ಕೈಗೊಂಡ ನಿರ್ಣಾಯಕ ಹೆಜ್ಜೆಯಾಗಿದೆ ಎಂದು ರಾಷ್ಟ್ರಪತಿ ದ್ರೌಪದಿ ಮುರ್ಮು ಹೇಳಿದ್ದಾರೆ. ವಿಶೇಷವಾಗಿ ದೇಶದ ರೈತರ ಹಿತಾಸಕ್ತಿಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.

80ನೇ ಸ್ವಾತಂತ್ರ್ಯ ದಿನಾಚರಣೆಯ ಮುನ್ನಾದಿನವಾದ ಶುಕ್ರವಾರ ದೇಶವನ್ನುದ್ದೇಶಿಸಿ ಮಾತನಾಡಿದ ರಾಷ್ಟ್ರಪತಿ ಮುರ್ಮು, ಭಾರತದ ರಾಷ್ಟ್ರೀಯ ಭದ್ರತೆ ಹಾಗೂ ಉಗ್ರವಾದದ ವಿರುದ್ಧದ ಹೋರಾಟಕ್ಕೆ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಹೇಳಿದರು. ದೇಶದ ಹಿತಾಸಕ್ತಿಯನ್ನು ರಕ್ಷಿಸುವ ನಿಟ್ಟಿನಲ್ಲಿ ಅಗತ್ಯವಿರುವ ಕಠಿಣ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಅವರು ಅಭಿಪ್ರಾಯಪಟ್ಟರು.

ಇದೇ ವೇಳೆ ಭಾರತದ ಆರ್ಥಿಕ ಪ್ರಗತಿ, ಬಡತನ ನಿರ್ಮೂಲನೆ, ಆಹಾರ ಭದ್ರತೆ ಹಾಗೂ ನಕ್ಸಲ್‌ಮುಕ್ತ ಭಾರತದತ್ತ ಸಾಗುತ್ತಿರುವ ಪ್ರಯತ್ನಗಳ ಬಗ್ಗೆಯೂ ರಾಷ್ಟ್ರಪತಿಗಳು ಮಾತನಾಡಿದರು. ದೇಶದ ಅಭಿವೃದ್ಧಿಯಲ್ಲಿ ಪ್ರತಿಯೊಬ್ಬ ನಾಗರಿಕನ ಪಾತ್ರ ಮಹತ್ವದ್ದಾಗಿದ್ದು, ಒಗ್ಗಟ್ಟಿನಿಂದ ಭಾರತವನ್ನು ಮತ್ತಷ್ಟು ಬಲಿಷ್ಠ ರಾಷ್ಟ್ರವನ್ನಾಗಿ ರೂಪಿಸಬೇಕು ಎಂದು ಅವರು ಕರೆ ನೀಡಿದರು.

⬇ DOWNLOAD
×

Editor Reporter

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్