ಮಲ್ಲೇಶ್ವರದ 18ನೇ ಅಡ್ಡರಸ್ತೆ ಪ್ರದೇಶದಲ್ಲಿ ಸ್ಕೈವಾಕ್ ನಿರ್ಮಾಣ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್.

mirrortvkannada.com
Date : 20 November 2026, 10:54 pm Posted By : MIRROR TV KANNADA

ಮಲ್ಲೇಶ್ವರದ 18ನೇ ಅಡ್ಡರಸ್ತೆ ಪ್ರದೇಶದಲ್ಲಿ ಸ್ಕೈವಾಕ್ ನಿರ್ಮಾಣ: ಜಿಬಿಎ ಮುಖ್ಯ ಆಯುಕ್ತ ಮಹೇಶ್ವರ್ ರಾವ್.

ಮಲ್ಲೇಶ್ವರದ 18ನೇ ಅಡ್ಡರಸ್ತೆ ಪ್ರದೇಶದಲ್ಲಿ ಸ್ಕೈವಾಕ್ ನಿರ್ಮಾಣ ಮಾಡುವುದಕ್ಕೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರವು ಮುಂದಾಗಿದೆ. ಮಲ್ಲೇಶ್ವರದಲ್ಲಿ ಸ್ಕೈವಾಕ್ ನಿರ್ಮಾಣ ಸೇರಿದಂತೆ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಸಂಬಂಧಿಸಿದಂತೆ ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಆಯುಕ್ತ ಮಹೇಶ್ವರ್ ರಾವ್ ಅವರು ಮಹತ್ವದ ಮಾಹಿತಿ ಹಂಚಿಕೊಂಡಿದ್ದಾರೆ.
ಸಾರ್ವಜನಿಕರಿಗೆ ಉತ್ತಮ ಮೂಲಸೌಕರ್ಯ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಬೇಕು ಎಂದು ಗ್ರೇಟರ್ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಮುಖ್ಯ ಆಯುಕ್ತರಾದ ಮಹೇಶ್ವರ್ ರಾವ್ ಅವರು ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.

ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಸಾರ್ವಜನಿಕರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳು, ಮೂಲಸೌಕರ್ಯ ಅಭಿವೃದ್ಧಿ ಹಾಗೂ ಆದ್ಯತೆಯ ಮೇರೆಗೆ ಕೈಗೊಳ್ಳಬೇಕಿರುವ ಕಾಮಗಾರಿಗಳ ಕುರಿತು ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಸಭಾಂಗಣದಲ್ಲಿ ನವೆಂಬರ್ 20ರ ಶುಕ್ರವಾರ ಮಲ್ಲೇಶ್ವರ ಕ್ಷೇತ್ರದ ಶಾಸಕರಾದ ಡಾ. ಸಿ.ಎನ್. ಅಶ್ವತ್ಥನಾರಾಯಣ ಅವರು ಹಾಗೂ ಬೆಂಗಳೂರು ಪಶ್ಚಿಮ ನಗರ ಪಾಲಿಕೆ ಆಯುಕ್ತರಾದ ಶಿಲ್ಪಾ ನಾಗ್ ಅವರ ಉಪಸ್ಥಿತಿಯಲ್ಲಿ ನಡೆದ ಸಮಗ್ರ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಸಭೆಯಲ್ಲಿ ಮಲ್ಲೇಶ್ವರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಪ್ರಸ್ತುತ ಪ್ರಗತಿಯಲ್ಲಿರುವ ವಿವಿಧ ಅಭಿವೃದ್ಧಿ ಕಾಮಗಾರಿಗಳ ಸ್ಥಿತಿಗತಿ, ಸಾರ್ವಜನಿಕರಿಂದ ಸ್ವೀಕೃತವಾಗಿರುವ ದೂರುಗಳು, ಬಾಕಿ ಉಳಿದಿರುವ ಸಮಸ್ಯೆಗಳು ಹಾಗೂ ಮುಂದಿನ ದಿನಗಳಲ್ಲಿ ಆದ್ಯತೆಯ ಮೇರೆಗೆ ಕೈಗೊಳ್ಳಬೇಕಿರುವ ಅಭಿವೃದ್ಧಿ ಕಾರ್ಯಗಳ ಕುರಿತು ವಿವರವಾಗಿ ಚರ್ಚಿಸಲಾಯಿತು. ಸಾರ್ವಜನಿಕರಿಗೆ ಉತ್ತಮ ಮೂಲಸೌಕರ್ಯ ಹಾಗೂ ಸುಗಮ ಸಂಚಾರ ವ್ಯವಸ್ಥೆ ಕಲ್ಪಿಸುವ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯದಿಂದ ಕಾರ್ಯನಿರ್ವಹಿಸಿ, ಕಾಮಗಾರಿಗಳನ್ನು ನಿಗದಿತ ಕಾಲಮಿತಿಯಲ್ಲಿ ಪೂರ್ಣಗೊಳಿಸುವಂತೆ ಸೂಚಿಸಲಾಗಿದೆ.
ಅಧಿಕಾರಿಗಳಿಗೆ ನೀಡಿದ ಪ್ರಮುಖ ಸೂಚನೆಗಳು
1. ಸ್ಕೈವಾಕ್ ನಿರ್ಮಾಣ: ಮಲ್ಲೇಶ್ವರದ 18ನೇ ಅಡ್ಡರಸ್ತೆಯ ಸ್ಯಾಂಕಿ ಟ್ಯಾಂಕ್ ಪ್ರವೇಶದ್ವಾರದ ಬಳಿ ಸಾರ್ವಜನಿಕರ ಸುರಕ್ಷಿತ ಸಂಚಾರಕ್ಕೆ ಅನುಕೂಲವಾಗುವಂತೆ ಸ್ಕೈವಾಕ್ ನಿರ್ಮಾಣ ಮಾಡುವ ಕುರಿತು ಅಗತ್ಯ ಪರಿಶೀಲನೆ ನಡೆಸಿ, ಪ್ರಸ್ತಾವನೆ ಸಲ್ಲಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.
2. ಬಹುಮಹಡಿ ವಾಹನ ನಿಲುಗಡೆ ವ್ಯವಸ್ಥೆ: ಶ್ರೀರಾಮಪುರ ಮೆಟ್ರೋ ನಿಲ್ದಾಣದ ಬಳಿ ಹೆಚ್ಚುತ್ತಿರುವ ವಾಹನ ದಟ್ಟಣೆ ಹಾಗೂ ಪಾರ್ಕಿಂಗ್ ಸಮಸ್ಯೆಗೆ ಪರಿಹಾರ ಕಲ್ಪಿಸುವ ಉದ್ದೇಶದಿಂದ ಸಾರ್ವಜನಿಕ-ಖಾಸಗಿ ಸಹಭಾಗಿತ್ವದ (PPP) ಮಾದರಿಯಲ್ಲಿ ಬಹುಮಹಡಿ ವಾಹನ ನಿಲುಗಡೆ ವ್ಯವಸ್ಥೆ ಕಲ್ಪಿಸಲು ಅಗತ್ಯ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಲಾಗಿದೆ.
3. ಸರ್ಕಾರಿ ಶಾಲಾ-ಕಾಲೇಜುಗಳ ಖಾತಾ ವರ್ಗಾವಣೆ: ಕ್ಷೇತ್ರದ ವ್ಯಾಪ್ತಿಯಲ್ಲಿರುವ ಸರ್ಕಾರಿ ಶಾಲೆಗಳು ಮತ್ತು ಕಾಲೇಜುಗಳಿಗೆ ಸಂಬಂಧಿಸಿದ ಆಸ್ತಿ ಖಾತಾ ವರ್ಗಾವಣೆ ಪ್ರಕ್ರಿಯೆಯನ್ನು ಪರಿಶೀಲಿಸಿ, ಬಾಕಿ ಇರುವ ಪ್ರಕ್ರಿಯೆಗಳನ್ನು ತ್ವರಿತವಾಗಿ ಪೂರ್ಣಗೊಳಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.
4. ರೈಲ್ವೆ ಸಂಬಂಧಿತ ಕಾಮಗಾರಿಗಳು: ರೈಲ್ವೆ ಇಲಾಖೆಯ ಸಹಯೋಗದಲ್ಲಿ ಕೈಗೊಳ್ಳಬೇಕಿರುವ ಹಾಗೂ ಪ್ರಗತಿಯಲ್ಲಿರುವ ಕಾಮಗಾರಿಗಳ ಕುರಿತು ಸಂಬಂಧಪಟ್ಟ ಅಧಿಕಾರಿಗಳು ಸಮನ್ವಯ ಸಾಧಿಸಿ, ಕಾಮಗಾರಿಗಳನ್ನು ವಿಳಂಬವಿಲ್ಲದೆ ತ್ವರಿತವಾಗಿ ಪೂರ್ಣಗೊಳಿಸುವಂತೆ ಸೂಚಿಸಲಾಯಿತು.

ಸಭೆಯಲ್ಲಿ ಚರ್ಚಿಸಲಾದ ಪ್ರಮುಖ ವಿಷಯಗಳು
* ಸ್ಯಾಂಕಿ ಬಂಡ್ ರಸ್ತೆ: ರಸ್ತೆಯ ಕುಸಿತಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಪರಿಶೀಲಿಸಿ, ರಸ್ತೆಯ ದಂಡೆಯನ್ನು ಸದೃಢಗೊಳಿಸುವುದು ಹಾಗೂ ಅಗತ್ಯ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳುವ ಕುರಿತು ಚರ್ಚಿಸಲಾಯಿತು.
* ಯಶವಂತಪುರ ರೈಲ್ವೆ ಮೇಲ್ಸೇತುವೆ: ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಪ್ರಗತಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಸಂಚಾರ ದಟ್ಟಣೆ ನಿವಾರಣೆಗೆ ಕೈಗೊಳ್ಳಬೇಕಿರುವ ಸುಧಾರಣಾ ಕ್ರಮಗಳ ಕುರಿತು ಚರ್ಚಿಸಲಾಯಿತು.
* ಸುರಕ್ಷ 75 ಜಂಕ್ಷನ್ ಅಭಿವೃದ್ಧಿ: ಜಂಕ್ಷನ್ ಅಭಿವೃದ್ಧಿ ಉಪಕ್ರಮದಡಿ ಸಂಚಾರ ಸುರಕ್ಷತೆ, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚಿಸಲಾಯಿತು.
* ಆರೋಗ್ಯ ಇಲಾಖೆಯ ಕಾರ್ಯಕ್ರಮಗಳು: ಕ್ಷೇತ್ರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಮ್ಮ ಕ್ಲಿನಿಕ್ ಸೇರಿದಂತೆ ವಿವಿಧ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಸಾರ್ವಜನಿಕರಿಗೆ ಆರೋಗ್ಯ ಸೇವೆಗಳನ್ನು ಉತ್ತಮವಾಗಿ ಒದಗಿಸುವ ಕುರಿತು ಚರ್ಚಿಸಲಾಯಿತು.
* ಕಲ್ಯಾಣ ಕಾರ್ಯಕ್ರಮಗಳು: ಒಂಟಿಮನೆ ಯೋಜನೆ ಸೇರಿದಂತೆ ವಿವಿಧ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವ ಕುರಿತು ಚರ್ಚಿಸಲಾಯಿತು.
* ತ್ಯಾಜ್ಯ ನಿರ್ವಹಣೆ: ಕ್ಷೇತ್ರದ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹಣೆ, ವೈಜ್ಞಾನಿಕ ವಿಲೇವಾರಿ ಹಾಗೂ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚಿಸಲಾಯಿತು.
ಕ್ಷೇತ್ರದ ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದರ ಜೊತೆಗೆ, ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ, ಆದ್ಯತೆಯ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಯಿತು.

⬇ DOWNLOAD
×

Editor Reporter

ಸ್ಯಾಂಕಿ ಬಂಡ್ ರಸ್ತೆ: ರಸ್ತೆಯ ಕುಸಿತಕ್ಕೆ ಸಂಬಂಧಿಸಿದ ಸಮಸ್ಯೆಯನ್ನು ಪರಿಶೀಲಿಸಿ, ರಸ್ತೆಯ ದಂಡೆಯನ್ನು ಸದೃಢಗೊಳಿಸುವುದು ಹಾಗೂ ಅಗತ್ಯ ದುರಸ್ತಿ ಕಾಮಗಾರಿಗಳನ್ನು ಕೈಗೊಳ್ಳುವ ಕುರಿತು ಚರ್ಚಿಸಲಾಯಿತು.
ಯಶವಂತಪುರ ರೈಲ್ವೆ ಮೇಲ್ಸೇತುವೆ: ರೈಲ್ವೆ ಮೇಲ್ಸೇತುವೆ ಕಾಮಗಾರಿಯ ಪ್ರಗತಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಸಂಚಾರ ದಟ್ಟಣೆ ನಿವಾರಣೆಗೆ ಕೈಗೊಳ್ಳಬೇಕಿರುವ ಸುಧಾರಣಾ ಕ್ರಮಗಳ ಕುರಿತು ಚರ್ಚಿಸಲಾಯಿತು.
ಸುರಕ್ಷ 75 ಜಂಕ್ಷನ್ ಅಭಿವೃದ್ಧಿ: ಜಂಕ್ಷನ್ ಅಭಿವೃದ್ಧಿ ಉಪಕ್ರಮದಡಿ ಸಂಚಾರ ಸುರಕ್ಷತೆ, ವಾಹನಗಳ ಸುಗಮ ಸಂಚಾರ ಹಾಗೂ ಸಾರ್ವಜನಿಕರ ಅನುಕೂಲಕ್ಕಾಗಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚಿಸಲಾಯಿತು.
ಆರೋಗ್ಯ ಇಲಾಖೆಯ ಕಾರ್ಯಕ್ರಮಗಳು: ಕ್ಷೇತ್ರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ನಮ್ಮ ಕ್ಲಿನಿಕ್ ಸೇರಿದಂತೆ ವಿವಿಧ ಆರೋಗ್ಯ ಕಾರ್ಯಕ್ರಮಗಳ ಅನುಷ್ಠಾನ ಮತ್ತು ಸಾರ್ವಜನಿಕರಿಗೆ ಆರೋಗ್ಯ ಸೇವೆಗಳನ್ನು ಉತ್ತಮವಾಗಿ ಒದಗಿಸುವ ಕುರಿತು ಚರ್ಚಿಸಲಾಯಿತು.
ಕಲ್ಯಾಣ ಕಾರ್ಯಕ್ರಮಗಳು: ಒಂಟಿಮನೆ ಯೋಜನೆ ಸೇರಿದಂತೆ ವಿವಿಧ ಕಲ್ಯಾಣ ಕಾರ್ಯಕ್ರಮಗಳ ಅನುಷ್ಠಾನ ಹಾಗೂ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ತಲುಪಿಸುವ ಕುರಿತು ಚರ್ಚಿಸಲಾಯಿತು.
ತ್ಯಾಜ್ಯ ನಿರ್ವಹಣೆ: ಕ್ಷೇತ್ರದ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹಣೆ, ವೈಜ್ಞಾನಿಕ ವಿಲೇವಾರಿ ಹಾಗೂ ಸ್ವಚ್ಛತೆ ಕಾಪಾಡುವ ನಿಟ್ಟಿನಲ್ಲಿ ಕೈಗೊಳ್ಳಬೇಕಿರುವ ಕ್ರಮಗಳ ಕುರಿತು ಚರ್ಚಿಸಲಾಯಿತು.
ಕ್ಷೇತ್ರದ ಸಾರ್ವಜನಿಕ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸುವುದರ ಜೊತೆಗೆ, ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನದಲ್ಲಿ ಇಲಾಖೆಗಳ ನಡುವೆ ಸಮನ್ವಯ ಸಾಧಿಸಿ, ಆದ್ಯತೆಯ ಕಾಮಗಾರಿಗಳನ್ನು ಕಾಲಮಿತಿಯೊಳಗೆ ಪೂರ್ಣಗೊಳಿಸುವಂತೆ ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಲಾಯಿತು.

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్