ನೂತನ ‘ಕೃಷಿ ವಿಸ್ತಾರ’ ಯೋಜನೆ ಜಾರಿ, ₹236 ಕೋಟಿ ಬಡ್ಡಿ ಮನ್ನಾ! ಸಚಿವ ಸಂಪುಟ ಸಭೆಯ ಮಹತ್ವದ ನಿರ್ಧಾರಗಳ ಪಟ್ಟಿ..

mirrortvkannada.com
Date : 20 November 2026, 10:56 pm Posted By : MIRROR TV KANNADA

ನೂತನ ‘ಕೃಷಿ ವಿಸ್ತಾರ’ ಯೋಜನೆ ಜಾರಿ, ₹236 ಕೋಟಿ ಬಡ್ಡಿ ಮನ್ನಾ! ಸಚಿವ ಸಂಪುಟ ಸಭೆಯ ಮಹತ್ವದ ನಿರ್ಧಾರಗಳ ಪಟ್ಟಿ..

ರಾಜ್ಯದ ರೈತರ ಆದಾಯ ಹೆಚ್ಚಿಸಲು, ಕೃಷಿ ಲಾಭದಾಯಕ ಉದ್ಯಮವಾಗಿಸುವ 'ಮುಖ್ಯಮಂತ್ರಿ ಕೃಷಿ ವಿಸ್ತಾರ' ಯೋಜನೆ, ಹಾಸನ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ಅನುದಾನ ಮತ್ತು ಭೂಸ್ವಾಧೀನ, ಹಿಂದುಳಿದ ವರ್ಗಗಳ ಇಲಾಖೆಯ ಯೋಜನೆಗಳ ಸಾಲದ ಮೇಲಿನ ನೂರಾರು ಕೋಟಿ ರೂ.ಬಡ್ಡಿ ಮನ್ನಾ ಸೇರಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರ ಗುರುವಾರ ನಡೆಸಿದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಕೆಲವು ಯೋಜನೆಗಳಿಗೆ ಅನುಮೋದನೆ ಸಹ ಕೊಟ್ಟಿದೆ. ಇದಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಸಂಕ್ಷಪ್ತ ಪಟ್ಟಿ ನೀಡಿದ್ದಾರೆ. ಅದರ ವಿವರ ಮುಂದಿದೆ.

ಸಂಪುಟದಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳ ಪಟ್ಟಿ
* ರೈತರ ಆದಾಯ ಹೆಚ್ಚಿಸಲು, ಕೃಷಿ ಲಾಭದಾಯಕ ಉದ್ಯಮವಾಗಿಸುವ 'ಮುಖ್ಯಮಂತ್ರಿ ಕೃಷಿ ವಿಸ್ತಾರ' ಯೋಜನೆ ಜಾರಿಗೆ ಮುಮದಾಗಿದೆ. ಮುಂದಿನ ವರ್ಷಗಳಲ್ಲಿ ₹75 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಜಿ.ಪರಮೇಶ್ವರ್ ತಿಳಿಸಿದ್ದಾರೆ.

* ಆಯವ್ಯಯದಲ್ಲಿ ಘೋಷಿಸಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ 7 ನಿಗಮಗಳು 2012-14ನೇ ಸಾಲಿನಿಂದ 2020-21ನೇ ಸಾಲಿನಿಂದ ವಿವಿಧ ಯೋಜನೆಗಳಡಿ ನೀಡಿದ ಸಾಲದ ಅಸಲನ್ನು ಪೂರ್ಣ ಮರುಪಾವತಿ ಮಾಡುವ ಫಲಾನುಭವಿಗಳಿಗೆ ಸಾಲಿನ ಮೇಲಿನ ಬಡ್ಡಿ ಮೊತ್ತ ಒಟ್ಟು ₹236.04 ಕೋಟಿ ಮನ್ನಾ ಮಾಡುವ ಒಂದಾವರ್ತಿ ತೀರುವಳಿ ಯೋಜನೆ ಜಾರಿಗೊಳಿಸಲು ಸಜ್ಜು.
ಹಾಸನ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ಅನುದಾನ
* ಹಾಸನ ವಿಮಾನ ನಿಲ್ದಾಣ ಅಭಿವೃದ್ಧಿಯ ಯೋಜನಾ ವೆಚ್ಚವನ್ನು ₹193.65 ಕೋಟಿಗಳಿಂದ ₹542.96 ಕೋಟಿಗಳಿಗೆ ಪರಿಷ್ಕರಿಸಿ ಹೆಚ್ಚುವರಿ ₹349.31 ಕೋಟಿ ಅನುದಾನದ ಅಗತ್ಯ ಹಾಗೂ ಹೆಚ್ಚುವರಿ ಜಮೀನು ಸ್ವಾಧೀನಕ್ಕೆ ಅನುಮೋದನೆ ನೀಡಲಾಗಿದೆ.

* 2025-26ನೇ ಸಾಲಿನ ಬಜೆಟ್ ಘೋಷಣೆಯಂತೆ ಕರ್ನಾಟಕದಲ್ಲಿ ಸುಟ್ಟುಗಾಯಗಳಿಂದ ಬದುಕುಳಿದವರ ತಡೆಗಟ್ಟುವಿಕೆ, ಚಿಕಿತ್ಸೆ, ಪುನರ್ವಸತಿ ಮತ್ತು ಸಾಮಾಜಿಕ ಪುನರ್‌ ಸಂಘಟನೆಯ ನೀತಿ 2025 ಜಾರಿಗೆ ನಿರ್ಧಾರ.

* 2026-27 ನೇ ಸಾಲಿನ ಆಯವ್ಯಯ ಘೋಷಣೆಯಂತೆ ಕರ್ನಾಟಕ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸಬಹುದಾದ ಅಗ್ನಿ ಅನಾಹುತ ಹಾಗೂ ನಷ್ಟವನ್ನು ತಡೆಗೆ ಸರ್ಕಾರ ಚಿಂತಿಸಿದೆ. ಈ ನಿಟ್ಟಿನಲ್ಲಿ 52-54 ಮೀಟರ್‌ ಎತ್ತರಕ್ಕೆ ತಲುಪಬಲ್ಲ ಒಂದು ಏರಿಯಲ್‌ ಲ್ಯಾಡರ್‌ ಪ್ಲಾಟ್‌ಫಾರಂ ವಾಹನ ₹16 ಕೋಟಿ ವೆಚ್ಚದಲ್ಲಿ ಖರೀದಿಗೆ ಸಂಪುಟ ಅಸ್ತು.
ವಿದ್ಯಾರ್ಥಿಗಳಿಗಾಗಿ 5,000 ಲ್ಯಾಪ್ ಟಾಪ್ ಖರೀದಿಗೆ ಪ್ಲ್ಯಾನ್
* ಅಲ್ಪಸಂಖ್ಯಾತ ಬಡ ವಿದ್ಯಾರ್ಥಿಗಳಿಗೆ ತಾಂತ್ರಿಕ ಮತ್ತು ಉನ್ನತ ಶಿಕ್ಷಣ ಪ್ರೋತ್ಸಾಹಿಸಲು 5,000 ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಲ್ಯಾಪ್‌ಟಾಪ್‌ ₹25 ಕೋಟಿಗಳ ಅಂದಾಜು ವೆಚ್ಚದಲ್ಲಿ ಖರೀದಿ.

* ಕಲಬುರಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನಲ್ಲಿ ಪ್ರಜಾಸೌಧ, ತಾಲ್ಲೂಕು ಆಡಳಿತ ಕೇಂದ್ರ ಕಟ್ಟಡದ ಎರಡನೇ ಹಂತದ ಕಾಮಗಾರಿಗೆ ₹5 ಕೋಟಿಗಳ ಅಂದಾಜು ವೆಚ್ಚಕ್ಕೆ ಅನುಮೋದನೆ. ಮೊದಲ ಹಂತದಲ್ಲಿ ₹10 ಕೋಟಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ.

* ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಮತ್ತು ಇತರೆ ಕೆಲವು ಕಾನೂನುಗಳ (ತಿದ್ದುಪಡಿ) ವಿಧೇಯಕ 2026ಕ್ಕೆ ಅನುಮೋದನೆ. ಮುಂಬರುವ ವಿಧಾನ ಮಂಡಲದಲ್ಲಿ ಮಂಡಿಸಲು ಸಿದ್ಧತೆ

* ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ಮೂರನೇ ತಿದ್ದುಪಡಿ) ವಿಧೇಯಕ 2026ಕ್ಕೆ ಅನುಮೋದನೆ ಮತ್ತು ಶಾಸಕಾಂಗದ ಉಭಯ ಸದನಗಳಲ್ಲಿ ವಿಧೇಯಕ ಮಂಡಿಸಲು ನಿರ್ಧಾರ.
1.39 ಲಕ್ಷ ಅಂಗನವಾಡಿ ಸಿಬ್ಬಂದಿಗೆ ಗುಡ್‌ನ್ಯೂಸ್
* 2026-27ನೇ ಸಾಲಿಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಸಮವಸ್ತ್ರ ಒದಗಿಸಲು ₹27.97 ಕೋಟಿ ಅನುದಾನ ನೀಡಲಾಗುವುದು. ಇದರಿಂದ ಒಟ್ಟು 1.39 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಅನುಕೂಲ.

* ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ಕ್ಕೆ ಎರಡನೇ ತಿದ್ದುಪಡಿ ವಿಧೇಯಕ 2026ಕ್ಕೆ ಅನುಮೋದನೆ

* ಬೆಂಗಳೂರಿನ ಯಶವಂತಪುರದಿಂದ ಹಳೆ ಮದ್ರಾಸ್‌ ರಸ್ತೆ ಮತ್ತು ಮಾರೇನಹಳ್ಳಿ ಮುಖ್ಯರಸ್ತೆಯಿಂದ ಕನಕಪುರ ಮುಖ್ಯರಸ್ತೆವರೆಗೆ ʼಸಿʼ ವರ್ಗದ ಅಡಿಯಲ್ಲಿ ಬರುವ ಎರಡು ಎಲೆವೇಟೆಡ್‌ ಕಾರಿಡಾರ್‌ಗಳ ನಿರ್ಮಾಣಕ್ಕೆ ನಿಧಿ ರಚನೆಯ ಸಂಬಂಧ ಆದೇಶ ಮಾರ್ಪಾಡು.

* ಬಜೆಟ್ ಘೋಷಣೆಯಂತೆ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ವಾರ್ಡ್‌ ಸಂಖ್ಯೆ 71ರಲ್ಲಿರುವ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶ್ರೀ ಜಯದೇವ ಹೃದ್ರೋಗ ಸಂಸ್ಥೆಯ ಶಾಖೆ ಪ್ರಾರಂಭಿಸಲು ಒಪ್ಪಿಗೆ ನೀಡಲಾಗಿದೆ.

* ಬೆಂಗಳೂರು ಸ್ಮಾರ್ಟ್‌ ಇನ್‌ಫ್ರಾಸ್ಟ್ರಕ್ಚರ್‌ ಲಿಮಿಟೆಡ್‌ (ಬಿ-ಸ್ಮೈಲ್‌) ಸಂಸ್ಥೆಯಿಂದ ಹೊಸ ವೈಟ್‌ ಟಾಪಿಂಗ್‌ ಕಾಮಗಾರಿ 2026-27 ಯೋಜನೆಯ ಮೊದಲ ಹಂತದ ಕಾಮಗಾರಿ ನಡೆಸಲು ತೀರ್ಮಾನ.

* ಜಿಬಿಎ ವ್ಯಾಪ್ತಿಯಲ್ಲಿ ಹಸಿ ತ್ಯಾಜ್ಯ, ಒಣ ತ್ಯಾಜ್ಯ, ನೈರ್ಮಲ್ಯ ತ್ಯಾಜ್ಯ ಮತ್ತು ರಸ್ತೆ ಗುಡಿಸುವಿಕೆ ತ್ಯಾಜ್ಯದ ಸಂಗ್ರಹಣೆ, ಪ್ರಾಥಮಿಕ ಸಾಗಾಣಿಕೆ ಮತ್ತು ದ್ವಿತೀಯ ಹಂತದ ಸಾಗಾಣಿಕೆ ಸೇವೆಯನ್ನು ಸಮರ್ಪಕವಾಗಿ ನಿರ್ವಹಿಸುವ ಈಗಾಗಲೇ ಅನುಮೋದನೆಯಾಗಿರುವ 10 ಪ್ಯಾಕೇಜ್‌ಗಳ ₹1,379.62 ಕೋಟಿಗಳ ಪರಿಷ್ಕೃತ ಅಂದಾಜಿಗೆ ಅನುಮೋದನೆ.

* ಬಿ-ಸ್ಮೈಲ್‌ ವತಿಯಿಂದ ಸಿಲ್ಕ್‌ಬೋರ್ಡ್‌ ಜಂಕ್ಷನ್‌ನಿಂದ ಕೆ.ಆರ್‌.ಪುರಂ ಮೆಟ್ರೋ ನಿಲ್ದಾಣದವರೆಗೂ ಹೊರವರ್ತುಲ ರಸ್ತೆಯನ್ನು ಜಾಗತಿಕ ರೂಪದಲ್ಲಿ ವಿನ್ಯಾಸಗೊಳಿಸುವ ಬಹುಕೋಟಿ ಯೋಜನೆಗೆ (₹486.79) ಒಪ್ಪಿಗೆ.

* ನೊಣವಿನಕೆರೆಯನ್ನು ಮೂಲವಾಗಿಟ್ಟುಕೊಂಡು ತಿಪಟೂರು ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಹೆಚ್ಚುವರಿ ಯೋಜನೆಯ ₹39.35 ಕೋಟಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ

* ಕೇಂದ್ರ ಪುರಸ್ಕೃತ ಪೊಲೀಸ್‌ ಪಡೆಗಳ ಆಧುನೀಕರಣ ಯೋಜನೆಯಡಿ ಪೊಲೀಸ್‌ ಇಲಾಖೆಗೆ ಅಗತ್ಯವಿರುವ 134 ತುರ್ತು ಪ್ರತಿಕ್ರಿಯೆ ಬೆಂಬಲ ವ್ಯವಸ್ಥೆ ವಾಹನಗಳನ್ನು ಒಟ್ಟು ₹11 ಕೋಟಿ ವೆಚ್ಚದಲ್ಲಿ ಖರೀದಿಸಲಾಗುವುದು.

* ಕರ್ನಾಟಕ ಗೃಹ ಮಂಡಳಿ ವತಿಯಿಂದ ಬೆಂಗಳೂರು ನಗರದ ಕೆಂಗೇರಿ ಬಳಿ ನಿರ್ಮಿಸಲಾಗುತ್ತಿರುವ ವಾಣಿಜ್ಯ ಸಂಕೀರ್ಣ/ಮಲ್ಟಿಫ್ಲೆಕ್ಸ್‌ ಕಟ್ಟಡದ ಎರಡನೇ ಹಂತದ ಕಾಮಗಾರಿಗಳನ್ನು ₹68.50 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುವುದು.
ಒಂದು ಲಕ್ಷ ಹೊಸ ಮನೆ ನಿರ್ಮಾಣ ಗುರಿ
* ರಾಜ್ಯದ ವಿವಿಧ ವಸತಿ ಯೋಜನೆಗಳಡಿ ಫಲಾನುಭವಿ ಆಧಾರಿತವಾಗಿ ಒಂದು ಲಕ್ಷ ಹೊಸ ಮನೆಗಳ ನಿರ್ಮಾಣದ ಗುರಿ ಹಾಕಿಕೊಳ್ಳಲಾಗಿದೆ. ಆಯ್ಕೆಯಾಗುವ ಸಾಮಾನ್ಯ ವರ್ಗದ ಫಲಾನುಭವಿಗಳ ಸಹಾಯಧನ ₹1.20 ಲಕ್ಷಗಳಿಂದ ₹2 ಲಕ್ಷಗಳಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ₹2 ಲಕ್ಷಗಳಿಂದ ₹3 ಲಕ್ಷಗಳಿಗೆ ಹೆಚ್ಚಿಸಲು ಸರ್ಕಾರ ತೀರ್ಮಾನಿಸಿದೆ.

* ಮುಖ್ಯಮಂತ್ರಿಯವರ 'ನಮ್ಮ ಮನೆ' ಯೋಜನೆಯಡಿ ರಾಜ್ಯಾದ್ಯಂತ ಸಮುದಾಯದ ಶ್ರಮಿಕರಿಗೆ ಶೇ.50ರ ರಿಯಾಯಿತಿ ದರದಲ್ಲಿ 50 ಸಾವಿರ ನಿವೇಶನ (30x40 ಅಳತೆ).

* ಭಾರತ್‌ ಜೋಡೋ ಯುವಸಂಘ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯಮಟ್ಟದ ಯುವ ಸಮಿತಿ ರಚಿಸಲು ಹಾಗೂ ಪೂರ್ಣಾವಧಿ ಸಂಯೋಜಕರು ಮತ್ತು ಪ್ರೇರಕರನ್ನು ನೇಮಿಸಲು ಅನುಮೋದನೆ..

* ವಿಶ್ವಬ್ಯಾಂಕಿನ ಸಹಯೋಗದೊಂದಿಗೆ ₹1,700 ಕೋಟಿಗಳ ಅಂದಾಜು ವೆಚ್ಚದಲ್ಲಿ ಕರ್ನಾಟಕ ವಿದ್ಯುತ್‌ ಬಸ್‌ ಕಾರ್ಯಕ್ರಮ ಯೋಜನೆ ಜಾರಿ ಶೀಘ್ರ.

* ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಹುಬ್ಬಳ್ಳಿಯ ಹೃದ್ರೋಗ ಕೇಂದ್ರಕ್ಕೆ ಅಗತ್ಯವಿರುವ ಹೆಚ್ಚುವರಿ ಉಪಕರಣಗಳನ್ನು ಖರೀದಿಸಲು ₹36.597 ಕೋಟಿಗಳ ಅಂದಾಜು ಮೊತ್ತಕ್ಕೆ ಅನುಮೋದನೆ ನೀಡಲಾಗಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

⬇ DOWNLOAD
×

ರಾಜ್ಯದ ರೈತರ ಆದಾಯ ಹೆಚ್ಚಿಸಲು, ಕೃಷಿ ಲಾಭದಾಯಕ ಉದ್ಯಮವಾಗಿಸುವ ‘ಮುಖ್ಯಮಂತ್ರಿ ಕೃಷಿ ವಿಸ್ತಾರ’ ಯೋಜನೆ, ಹಾಸನ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ಅನುದಾನ ಮತ್ತು ಭೂಸ್ವಾಧೀನ, ಹಿಂದುಳಿದ ವರ್ಗಗಳ ಇಲಾಖೆಯ ಯೋಜನೆಗಳ ಸಾಲದ ಮೇಲಿನ ನೂರಾರು ಕೋಟಿ ರೂ.ಬಡ್ಡಿ ಮನ್ನಾ ಸೇರಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.

ಕರ್ನಾಟಕ ರಾಜ್ಯ ಸರ್ಕಾರ ಗುರುವಾರ ನಡೆಸಿದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಕೆಲವು ಯೋಜನೆಗಳಿಗೆ ಅನುಮೋದನೆ ಸಹ ಕೊಟ್ಟಿದೆ. ಇದಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಸಂಕ್ಷಪ್ತ ಪಟ್ಟಿ ನೀಡಿದ್ದಾರೆ. ಅದರ ವಿವರ ಮುಂದಿದೆ.

ಸಂಪುಟದಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳ ಪಟ್ಟಿ

* ರೈತರ ಆದಾಯ ಹೆಚ್ಚಿಸಲು, ಕೃಷಿ ಲಾಭದಾಯಕ ಉದ್ಯಮವಾಗಿಸುವ ‘ಮುಖ್ಯಮಂತ್ರಿ ಕೃಷಿ ವಿಸ್ತಾರ’ ಯೋಜನೆ ಜಾರಿಗೆ ಮುಮದಾಗಿದೆ. ಮುಂದಿನ ವರ್ಷಗಳಲ್ಲಿ ₹75 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಜಿ.ಪರಮೇಶ್ವರ್ ತಿಳಿಸಿದ್ದಾರೆ.

* ಆಯವ್ಯಯದಲ್ಲಿ ಘೋಷಿಸಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ 7 ನಿಗಮಗಳು 2012-14ನೇ ಸಾಲಿನಿಂದ 2020-21ನೇ ಸಾಲಿನಿಂದ ವಿವಿಧ ಯೋಜನೆಗಳಡಿ ನೀಡಿದ ಸಾಲದ ಅಸಲನ್ನು ಪೂರ್ಣ ಮರುಪಾವತಿ ಮಾಡುವ ಫಲಾನುಭವಿಗಳಿಗೆ ಸಾಲಿನ ಮೇಲಿನ ಬಡ್ಡಿ ಮೊತ್ತ ಒಟ್ಟು ₹236.04 ಕೋಟಿ ಮನ್ನಾ ಮಾಡುವ ಒಂದಾವರ್ತಿ ತೀರುವಳಿ ಯೋಜನೆ ಜಾರಿಗೊಳಿಸಲು ಸಜ್ಜು.

ಹಾಸನ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ಅನುದಾನ

* ಹಾಸನ ವಿಮಾನ ನಿಲ್ದಾಣ ಅಭಿವೃದ್ಧಿಯ ಯೋಜನಾ ವೆಚ್ಚವನ್ನು ₹193.65 ಕೋಟಿಗಳಿಂದ ₹542.96 ಕೋಟಿಗಳಿಗೆ ಪರಿಷ್ಕರಿಸಿ ಹೆಚ್ಚುವರಿ ₹349.31 ಕೋಟಿ ಅನುದಾನದ ಅಗತ್ಯ ಹಾಗೂ ಹೆಚ್ಚುವರಿ ಜಮೀನು ಸ್ವಾಧೀನಕ್ಕೆ ಅನುಮೋದನೆ ನೀಡಲಾಗಿದೆ.

* 2025-26ನೇ ಸಾಲಿನ ಬಜೆಟ್ ಘೋಷಣೆಯಂತೆ ಕರ್ನಾಟಕದಲ್ಲಿ ಸುಟ್ಟುಗಾಯಗಳಿಂದ ಬದುಕುಳಿದವರ ತಡೆಗಟ್ಟುವಿಕೆ, ಚಿಕಿತ್ಸೆ, ಪುನರ್ವಸತಿ ಮತ್ತು ಸಾಮಾಜಿಕ ಪುನರ್‌ ಸಂಘಟನೆಯ ನೀತಿ 2025 ಜಾರಿಗೆ ನಿರ್ಧಾರ.

* 2026-27 ನೇ ಸಾಲಿನ ಆಯವ್ಯಯ ಘೋಷಣೆಯಂತೆ ಕರ್ನಾಟಕ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸಬಹುದಾದ ಅಗ್ನಿ ಅನಾಹುತ ಹಾಗೂ ನಷ್ಟವನ್ನು ತಡೆಗೆ ಸರ್ಕಾರ ಚಿಂತಿಸಿದೆ. ಈ ನಿಟ್ಟಿನಲ್ಲಿ 52-54 ಮೀಟರ್‌ ಎತ್ತರಕ್ಕೆ ತಲುಪಬಲ್ಲ ಒಂದು ಏರಿಯಲ್‌ ಲ್ಯಾಡರ್‌ ಪ್ಲಾಟ್‌ಫಾರಂ ವಾಹನ ₹16 ಕೋಟಿ ವೆಚ್ಚದಲ್ಲಿ ಖರೀದಿಗೆ ಸಂಪುಟ ಅಸ್ತು.

ವಿದ್ಯಾರ್ಥಿಗಳಿಗಾಗಿ 5,000 ಲ್ಯಾಪ್ ಟಾಪ್ ಖರೀದಿಗೆ ಪ್ಲ್ಯಾನ್

* ಅಲ್ಪಸಂಖ್ಯಾತ ಬಡ ವಿದ್ಯಾರ್ಥಿಗಳಿಗೆ ತಾಂತ್ರಿಕ ಮತ್ತು ಉನ್ನತ ಶಿಕ್ಷಣ ಪ್ರೋತ್ಸಾಹಿಸಲು 5,000 ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಲ್ಯಾಪ್‌ಟಾಪ್‌ ₹25 ಕೋಟಿಗಳ ಅಂದಾಜು ವೆಚ್ಚದಲ್ಲಿ ಖರೀದಿ.

* ಕಲಬುರಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನಲ್ಲಿ ಪ್ರಜಾಸೌಧ, ತಾಲ್ಲೂಕು ಆಡಳಿತ ಕೇಂದ್ರ ಕಟ್ಟಡದ ಎರಡನೇ ಹಂತದ ಕಾಮಗಾರಿಗೆ ₹5 ಕೋಟಿಗಳ ಅಂದಾಜು ವೆಚ್ಚಕ್ಕೆ ಅನುಮೋದನೆ. ಮೊದಲ ಹಂತದಲ್ಲಿ ₹10 ಕೋಟಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ.

* ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಮತ್ತು ಇತರೆ ಕೆಲವು ಕಾನೂನುಗಳ (ತಿದ್ದುಪಡಿ) ವಿಧೇಯಕ 2026ಕ್ಕೆ ಅನುಮೋದನೆ. ಮುಂಬರುವ ವಿಧಾನ ಮಂಡಲದಲ್ಲಿ ಮಂಡಿಸಲು ಸಿದ್ಧತೆ

* ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ಮೂರನೇ ತಿದ್ದುಪಡಿ) ವಿಧೇಯಕ 2026ಕ್ಕೆ ಅನುಮೋದನೆ ಮತ್ತು ಶಾಸಕಾಂಗದ ಉಭಯ ಸದನಗಳಲ್ಲಿ ವಿಧೇಯಕ ಮಂಡಿಸಲು ನಿರ್ಧಾರ.

1.39 ಲಕ್ಷ ಅಂಗನವಾಡಿ ಸಿಬ್ಬಂದಿಗೆ ಗುಡ್‌ನ್ಯೂಸ್

* 2026-27ನೇ ಸಾಲಿಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಸಮವಸ್ತ್ರ ಒದಗಿಸಲು ₹27.97 ಕೋಟಿ ಅನುದಾನ ನೀಡಲಾಗುವುದು. ಇದರಿಂದ ಒಟ್ಟು 1.39 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಅನುಕೂಲ.

* ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ಕ್ಕೆ ಎರಡನೇ ತಿದ್ದುಪಡಿ ವಿಧೇಯಕ 2026ಕ್ಕೆ ಅನುಮೋದನೆ

* ಬೆಂಗಳೂರಿನ ಯಶವಂತಪುರದಿಂದ ಹಳೆ ಮದ್ರಾಸ್‌ ರಸ್ತೆ ಮತ್ತು ಮಾರೇನಹಳ್ಳಿ ಮುಖ್ಯರಸ್ತೆಯಿಂದ ಕನಕಪುರ ಮುಖ್ಯರಸ್ತೆವರೆಗೆ ʼಸಿʼ ವರ್ಗದ ಅಡಿಯಲ್ಲಿ ಬರುವ ಎರಡು ಎಲೆವೇಟೆಡ್‌ ಕಾರಿಡಾರ್‌ಗಳ ನಿರ್ಮಾಣಕ್ಕೆ ನಿಧಿ ರಚನೆಯ ಸಂಬಂಧ ಆದೇಶ ಮಾರ್ಪಾಡು.

* ಬಜೆಟ್ ಘೋಷಣೆಯಂತೆ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ವಾರ್ಡ್‌ ಸಂಖ್ಯೆ 71ರಲ್ಲಿರುವ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶ್ರೀ ಜಯದೇವ ಹೃದ್ರೋಗ ಸಂಸ್ಥೆಯ ಶಾಖೆ ಪ್ರಾರಂಭಿಸಲು ಒಪ್ಪಿಗೆ ನೀಡಲಾಗಿದೆ.

* ಬೆಂಗಳೂರು ಸ್ಮಾರ್ಟ್‌ ಇನ್‌ಫ್ರಾಸ್ಟ್ರಕ್ಚರ್‌ ಲಿಮಿಟೆಡ್‌ (ಬಿ-ಸ್ಮೈಲ್‌) ಸಂಸ್ಥೆಯಿಂದ ಹೊಸ ವೈಟ್‌ ಟಾಪಿಂಗ್‌ ಕಾಮಗಾರಿ 2026-27 ಯೋಜನೆಯ ಮೊದಲ ಹಂತದ ಕಾಮಗಾರಿ ನಡೆಸಲು ತೀರ್ಮಾನ.

* ಜಿಬಿಎ ವ್ಯಾಪ್ತಿಯಲ್ಲಿ ಹಸಿ ತ್ಯಾಜ್ಯ, ಒಣ ತ್ಯಾಜ್ಯ, ನೈರ್ಮಲ್ಯ ತ್ಯಾಜ್ಯ ಮತ್ತು ರಸ್ತೆ ಗುಡಿಸುವಿಕೆ ತ್ಯಾಜ್ಯದ ಸಂಗ್ರಹಣೆ, ಪ್ರಾಥಮಿಕ ಸಾಗಾಣಿಕೆ ಮತ್ತು ದ್ವಿತೀಯ ಹಂತದ ಸಾಗಾಣಿಕೆ ಸೇವೆಯನ್ನು ಸಮರ್ಪಕವಾಗಿ ನಿರ್ವಹಿಸುವ ಈಗಾಗಲೇ ಅನುಮೋದನೆಯಾಗಿರುವ 10 ಪ್ಯಾಕೇಜ್‌ಗಳ ₹1,379.62 ಕೋಟಿಗಳ ಪರಿಷ್ಕೃತ ಅಂದಾಜಿಗೆ ಅನುಮೋದನೆ.

* ಬಿ-ಸ್ಮೈಲ್‌ ವತಿಯಿಂದ ಸಿಲ್ಕ್‌ಬೋರ್ಡ್‌ ಜಂಕ್ಷನ್‌ನಿಂದ ಕೆ.ಆರ್‌.ಪುರಂ ಮೆಟ್ರೋ ನಿಲ್ದಾಣದವರೆಗೂ ಹೊರವರ್ತುಲ ರಸ್ತೆಯನ್ನು ಜಾಗತಿಕ ರೂಪದಲ್ಲಿ ವಿನ್ಯಾಸಗೊಳಿಸುವ ಬಹುಕೋಟಿ ಯೋಜನೆಗೆ (₹486.79) ಒಪ್ಪಿಗೆ.

* ನೊಣವಿನಕೆರೆಯನ್ನು ಮೂಲವಾಗಿಟ್ಟುಕೊಂಡು ತಿಪಟೂರು ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಹೆಚ್ಚುವರಿ ಯೋಜನೆಯ ₹39.35 ಕೋಟಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ

* ಕೇಂದ್ರ ಪುರಸ್ಕೃತ ಪೊಲೀಸ್‌ ಪಡೆಗಳ ಆಧುನೀಕರಣ ಯೋಜನೆಯಡಿ ಪೊಲೀಸ್‌ ಇಲಾಖೆಗೆ ಅಗತ್ಯವಿರುವ 134 ತುರ್ತು ಪ್ರತಿಕ್ರಿಯೆ ಬೆಂಬಲ ವ್ಯವಸ್ಥೆ ವಾಹನಗಳನ್ನು ಒಟ್ಟು ₹11 ಕೋಟಿ ವೆಚ್ಚದಲ್ಲಿ ಖರೀದಿಸಲಾಗುವುದು.

* ಕರ್ನಾಟಕ ಗೃಹ ಮಂಡಳಿ ವತಿಯಿಂದ ಬೆಂಗಳೂರು ನಗರದ ಕೆಂಗೇರಿ ಬಳಿ ನಿರ್ಮಿಸಲಾಗುತ್ತಿರುವ ವಾಣಿಜ್ಯ ಸಂಕೀರ್ಣ/ಮಲ್ಟಿಫ್ಲೆಕ್ಸ್‌ ಕಟ್ಟಡದ ಎರಡನೇ ಹಂತದ ಕಾಮಗಾರಿಗಳನ್ನು ₹68.50 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುವುದು.

ಒಂದು ಲಕ್ಷ ಹೊಸ ಮನೆ ನಿರ್ಮಾಣ ಗುರಿ

* ರಾಜ್ಯದ ವಿವಿಧ ವಸತಿ ಯೋಜನೆಗಳಡಿ ಫಲಾನುಭವಿ ಆಧಾರಿತವಾಗಿ ಒಂದು ಲಕ್ಷ ಹೊಸ ಮನೆಗಳ ನಿರ್ಮಾಣದ ಗುರಿ ಹಾಕಿಕೊಳ್ಳಲಾಗಿದೆ. ಆಯ್ಕೆಯಾಗುವ ಸಾಮಾನ್ಯ ವರ್ಗದ ಫಲಾನುಭವಿಗಳ ಸಹಾಯಧನ ₹1.20 ಲಕ್ಷಗಳಿಂದ ₹2 ಲಕ್ಷಗಳಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ₹2 ಲಕ್ಷಗಳಿಂದ ₹3 ಲಕ್ಷಗಳಿಗೆ ಹೆಚ್ಚಿಸಲು ಸರ್ಕಾರ ತೀರ್ಮಾನಿಸಿದೆ.

* ಮುಖ್ಯಮಂತ್ರಿಯವರ ‘ನಮ್ಮ ಮನೆ’ ಯೋಜನೆಯಡಿ ರಾಜ್ಯಾದ್ಯಂತ ಸಮುದಾಯದ ಶ್ರಮಿಕರಿಗೆ ಶೇ.50ರ ರಿಯಾಯಿತಿ ದರದಲ್ಲಿ 50 ಸಾವಿರ ನಿವೇಶನ (30×40 ಅಳತೆ).

* ಭಾರತ್‌ ಜೋಡೋ ಯುವಸಂಘ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯಮಟ್ಟದ ಯುವ ಸಮಿತಿ ರಚಿಸಲು ಹಾಗೂ ಪೂರ್ಣಾವಧಿ ಸಂಯೋಜಕರು ಮತ್ತು ಪ್ರೇರಕರನ್ನು ನೇಮಿಸಲು ಅನುಮೋದನೆ..

* ವಿಶ್ವಬ್ಯಾಂಕಿನ ಸಹಯೋಗದೊಂದಿಗೆ ₹1,700 ಕೋಟಿಗಳ ಅಂದಾಜು ವೆಚ್ಚದಲ್ಲಿ ಕರ್ನಾಟಕ ವಿದ್ಯುತ್‌ ಬಸ್‌ ಕಾರ್ಯಕ್ರಮ ಯೋಜನೆ ಜಾರಿ ಶೀಘ್ರ.

* ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಹುಬ್ಬಳ್ಳಿಯ ಹೃದ್ರೋಗ ಕೇಂದ್ರಕ್ಕೆ ಅಗತ್ಯವಿರುವ ಹೆಚ್ಚುವರಿ ಉಪಕರಣಗಳನ್ನು ಖರೀದಿಸಲು ₹36.597 ಕೋಟಿಗಳ ಅಂದಾಜು ಮೊತ್ತಕ್ಕೆ ಅನುಮೋದನೆ ನೀಡಲಾಗಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

Editor Reporter
mirrortvkannada.com

ನೂತನ ‘ಕೃಷಿ ವಿಸ್ತಾರ’ ಯೋಜನೆ ಜಾರಿ, ₹236 ಕೋಟಿ ಬಡ್ಡಿ ಮನ್ನಾ! ಸಚಿವ ಸಂಪುಟ ಸಭೆಯ ಮಹತ್ವದ ನಿರ್ಧಾರಗಳ ಪಟ್ಟಿ..

ರಾಜ್ಯದ ರೈತರ ಆದಾಯ ಹೆಚ್ಚಿಸಲು, ಕೃಷಿ ಲಾಭದಾಯಕ ಉದ್ಯಮವಾಗಿಸುವ 'ಮುಖ್ಯಮಂತ್ರಿ ಕೃಷಿ ವಿಸ್ತಾರ' ಯೋಜನೆ, ಹಾಸನ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ಅನುದಾನ ಮತ್ತು ಭೂಸ್ವಾಧೀನ, ಹಿಂದುಳಿದ ವರ್ಗಗಳ ಇಲಾಖೆಯ ಯೋಜನೆಗಳ ಸಾಲದ ಮೇಲಿನ ನೂರಾರು ಕೋಟಿ ರೂ.ಬಡ್ಡಿ ಮನ್ನಾ ಸೇರಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರ ಗುರುವಾರ ನಡೆಸಿದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಂಡಿದ್ದು, ಕೆಲವು ಯೋಜನೆಗಳಿಗೆ ಅನುಮೋದನೆ ಸಹ ಕೊಟ್ಟಿದೆ. ಇದಕ್ಕೆ ಸಂಬಂಧಿಸಿದಂತೆ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಅವರು ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಸಂಕ್ಷಪ್ತ ಪಟ್ಟಿ ನೀಡಿದ್ದಾರೆ. ಅದರ ವಿವರ ಮುಂದಿದೆ.

ಸಂಪುಟದಲ್ಲಿ ಕೈಗೊಂಡ ಪ್ರಮುಖ ನಿರ್ಧಾರಗಳ ಪಟ್ಟಿ
ರೈತರ ಆದಾಯ ಹೆಚ್ಚಿಸಲು, ಕೃಷಿ ಲಾಭದಾಯಕ ಉದ್ಯಮವಾಗಿಸುವ 'ಮುಖ್ಯಮಂತ್ರಿ ಕೃಷಿ ವಿಸ್ತಾರ' ಯೋಜನೆ ಜಾರಿಗೆ ಮುಮದಾಗಿದೆ. ಮುಂದಿನ ವರ್ಷಗಳಲ್ಲಿ ₹75 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಆಯವ್ಯಯದಲ್ಲಿ ಘೋಷಿಸಿದಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವ್ಯಾಪ್ತಿಯಲ್ಲಿ 7 ನಿಗಮಗಳು 2012-14ನೇ ಸಾಲಿನಿಂದ 2020-21ನೇ ಸಾಲಿನಿಂದ ವಿವಿಧ ಯೋಜನೆಗಳಡಿ ನೀಡಿದ ಸಾಲದ ಅಸಲನ್ನು ಪೂರ್ಣ ಮರುಪಾವತಿ ಮಾಡುವ ಫಲಾನುಭವಿಗಳಿಗೆ ಸಾಲಿನ ಮೇಲಿನ ಬಡ್ಡಿ ಮೊತ್ತ ಒಟ್ಟು ₹236.04 ಕೋಟಿ ಮನ್ನಾ ಮಾಡುವ ಒಂದಾವರ್ತಿ ತೀರುವಳಿ ಯೋಜನೆ ಜಾರಿಗೊಳಿಸಲು ಸಜ್ಜು.
ಹಾಸನ ವಿಮಾನ ನಿಲ್ದಾಣಕ್ಕೆ ಹೆಚ್ಚುವರಿ ಅನುದಾನ
ಹಾಸನ ವಿಮಾನ ನಿಲ್ದಾಣ ಅಭಿವೃದ್ಧಿಯ ಯೋಜನಾ ವೆಚ್ಚವನ್ನು ₹193.65 ಕೋಟಿಗಳಿಂದ ₹542.96 ಕೋಟಿಗಳಿಗೆ ಪರಿಷ್ಕರಿಸಿ ಹೆಚ್ಚುವರಿ ₹349.31 ಕೋಟಿ ಅನುದಾನದ ಅಗತ್ಯ ಹಾಗೂ ಹೆಚ್ಚುವರಿ ಜಮೀನು ಸ್ವಾಧೀನಕ್ಕೆ ಅನುಮೋದನೆ ನೀಡಲಾಗಿದೆ.

2025-26ನೇ ಸಾಲಿನ ಬಜೆಟ್ ಘೋಷಣೆಯಂತೆ ಕರ್ನಾಟಕದಲ್ಲಿ ಸುಟ್ಟುಗಾಯಗಳಿಂದ ಬದುಕುಳಿದವರ ತಡೆಗಟ್ಟುವಿಕೆ, ಚಿಕಿತ್ಸೆ, ಪುನರ್ವಸತಿ ಮತ್ತು ಸಾಮಾಜಿಕ ಪುನರ್‌ ಸಂಘಟನೆಯ ನೀತಿ 2025 ಜಾರಿಗೆ ನಿರ್ಧಾರ.

2026-27 ನೇ ಸಾಲಿನ ಆಯವ್ಯಯ ಘೋಷಣೆಯಂತೆ ಕರ್ನಾಟಕ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಗೆ ಬಹುಮಹಡಿ ಕಟ್ಟಡಗಳಲ್ಲಿ ಸಂಭವಿಸಬಹುದಾದ ಅಗ್ನಿ ಅನಾಹುತ ಹಾಗೂ ನಷ್ಟವನ್ನು ತಡೆಗೆ ಸರ್ಕಾರ ಚಿಂತಿಸಿದೆ. ಈ ನಿಟ್ಟಿನಲ್ಲಿ 52-54 ಮೀಟರ್‌ ಎತ್ತರಕ್ಕೆ ತಲುಪಬಲ್ಲ ಒಂದು ಏರಿಯಲ್‌ ಲ್ಯಾಡರ್‌ ಪ್ಲಾಟ್‌ಫಾರಂ ವಾಹನ ₹16 ಕೋಟಿ ವೆಚ್ಚದಲ್ಲಿ ಖರೀದಿಗೆ ಸಂಪುಟ ಅಸ್ತು.
ವಿದ್ಯಾರ್ಥಿಗಳಿಗಾಗಿ 5,000 ಲ್ಯಾಪ್ ಟಾಪ್ ಖರೀದಿಗೆ ಪ್ಲ್ಯಾನ್
ಅಲ್ಪಸಂಖ್ಯಾತ ಬಡ ವಿದ್ಯಾರ್ಥಿಗಳಿಗೆ ತಾಂತ್ರಿಕ ಮತ್ತು ಉನ್ನತ ಶಿಕ್ಷಣ ಪ್ರೋತ್ಸಾಹಿಸಲು 5,000 ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಲ್ಯಾಪ್‌ಟಾಪ್‌ ₹25 ಕೋಟಿಗಳ ಅಂದಾಜು ವೆಚ್ಚದಲ್ಲಿ ಖರೀದಿ.

ಕಲಬುರಗಿ ಜಿಲ್ಲೆ ಅಫಜಲಪುರ ತಾಲ್ಲೂಕಿನಲ್ಲಿ ಪ್ರಜಾಸೌಧ, ತಾಲ್ಲೂಕು ಆಡಳಿತ ಕೇಂದ್ರ ಕಟ್ಟಡದ ಎರಡನೇ ಹಂತದ ಕಾಮಗಾರಿಗೆ ₹5 ಕೋಟಿಗಳ ಅಂದಾಜು ವೆಚ್ಚಕ್ಕೆ ಅನುಮೋದನೆ. ಮೊದಲ ಹಂತದಲ್ಲಿ ₹10 ಕೋಟಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ.

ಕಾಗಿನೆಲೆ ಅಭಿವೃದ್ಧಿ ಪ್ರಾಧಿಕಾರ ಮತ್ತು ಇತರೆ ಕೆಲವು ಕಾನೂನುಗಳ (ತಿದ್ದುಪಡಿ) ವಿಧೇಯಕ 2026ಕ್ಕೆ ಅನುಮೋದನೆ. ಮುಂಬರುವ ವಿಧಾನ ಮಂಡಲದಲ್ಲಿ ಮಂಡಿಸಲು ಸಿದ್ಧತೆ

ಕರ್ನಾಟಕ ಗ್ರಾಮ ಸ್ವರಾಜ್‌ ಮತ್ತು ಪಂಚಾಯತ್‌ ರಾಜ್‌ (ಮೂರನೇ ತಿದ್ದುಪಡಿ) ವಿಧೇಯಕ 2026ಕ್ಕೆ ಅನುಮೋದನೆ ಮತ್ತು ಶಾಸಕಾಂಗದ ಉಭಯ ಸದನಗಳಲ್ಲಿ ವಿಧೇಯಕ ಮಂಡಿಸಲು ನಿರ್ಧಾರ.
1.39 ಲಕ್ಷ ಅಂಗನವಾಡಿ ಸಿಬ್ಬಂದಿಗೆ ಗುಡ್‌ನ್ಯೂಸ್
2026-27ನೇ ಸಾಲಿಗೆ ಅಂಗನವಾಡಿ ಕಾರ್ಯಕರ್ತೆಯರಿಗೆ ಮತ್ತು ಸಹಾಯಕಿಯರಿಗೆ ಸಮವಸ್ತ್ರ ಒದಗಿಸಲು ₹27.97 ಕೋಟಿ ಅನುದಾನ ನೀಡಲಾಗುವುದು. ಇದರಿಂದ ಒಟ್ಟು 1.39 ಲಕ್ಷ ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸಹಾಯಕಿಯರಿಗೆ ಅನುಕೂಲ.

ಕರ್ನಾಟಕ ನಗರ ಮತ್ತು ಗ್ರಾಮಾಂತರ ಯೋಜನಾ ಕಾಯ್ದೆ 1961ಕ್ಕೆ ಎರಡನೇ ತಿದ್ದುಪಡಿ ವಿಧೇಯಕ 2026ಕ್ಕೆ ಅನುಮೋದನೆ

ಬೆಂಗಳೂರಿನ ಯಶವಂತಪುರದಿಂದ ಹಳೆ ಮದ್ರಾಸ್‌ ರಸ್ತೆ ಮತ್ತು ಮಾರೇನಹಳ್ಳಿ ಮುಖ್ಯರಸ್ತೆಯಿಂದ ಕನಕಪುರ ಮುಖ್ಯರಸ್ತೆವರೆಗೆ ʼಸಿʼ ವರ್ಗದ ಅಡಿಯಲ್ಲಿ ಬರುವ ಎರಡು ಎಲೆವೇಟೆಡ್‌ ಕಾರಿಡಾರ್‌ಗಳ ನಿರ್ಮಾಣಕ್ಕೆ ನಿಧಿ ರಚನೆಯ ಸಂಬಂಧ ಆದೇಶ ಮಾರ್ಪಾಡು.

ಬಜೆಟ್ ಘೋಷಣೆಯಂತೆ ಬೆಂಗಳೂರು ಪಶ್ಚಿಮ ನಗರ ಪಾಲಿಕೆಯ ವಾರ್ಡ್‌ ಸಂಖ್ಯೆ 71ರಲ್ಲಿರುವ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಶ್ರೀ ಜಯದೇವ ಹೃದ್ರೋಗ ಸಂಸ್ಥೆಯ ಶಾಖೆ ಪ್ರಾರಂಭಿಸಲು ಒಪ್ಪಿಗೆ ನೀಡಲಾಗಿದೆ.

ಬೆಂಗಳೂರು ಸ್ಮಾರ್ಟ್‌ ಇನ್‌ಫ್ರಾಸ್ಟ್ರಕ್ಚರ್‌ ಲಿಮಿಟೆಡ್‌ (ಬಿ-ಸ್ಮೈಲ್‌) ಸಂಸ್ಥೆಯಿಂದ ಹೊಸ ವೈಟ್‌ ಟಾಪಿಂಗ್‌ ಕಾಮಗಾರಿ 2026-27 ಯೋಜನೆಯ ಮೊದಲ ಹಂತದ ಕಾಮಗಾರಿ ನಡೆಸಲು ತೀರ್ಮಾನ.

ಜಿಬಿಎ ವ್ಯಾಪ್ತಿಯಲ್ಲಿ ಹಸಿ ತ್ಯಾಜ್ಯ, ಒಣ ತ್ಯಾಜ್ಯ, ನೈರ್ಮಲ್ಯ ತ್ಯಾಜ್ಯ ಮತ್ತು ರಸ್ತೆ ಗುಡಿಸುವಿಕೆ ತ್ಯಾಜ್ಯದ ಸಂಗ್ರಹಣೆ, ಪ್ರಾಥಮಿಕ ಸಾಗಾಣಿಕೆ ಮತ್ತು ದ್ವಿತೀಯ ಹಂತದ ಸಾಗಾಣಿಕೆ ಸೇವೆಯನ್ನು ಸಮರ್ಪಕವಾಗಿ ನಿರ್ವಹಿಸುವ ಈಗಾಗಲೇ ಅನುಮೋದನೆಯಾಗಿರುವ 10 ಪ್ಯಾಕೇಜ್‌ಗಳ ₹1,379.62 ಕೋಟಿಗಳ ಪರಿಷ್ಕೃತ ಅಂದಾಜಿಗೆ ಅನುಮೋದನೆ.

ಬಿ-ಸ್ಮೈಲ್‌ ವತಿಯಿಂದ ಸಿಲ್ಕ್‌ಬೋರ್ಡ್‌ ಜಂಕ್ಷನ್‌ನಿಂದ ಕೆ.ಆರ್‌.ಪುರಂ ಮೆಟ್ರೋ ನಿಲ್ದಾಣದವರೆಗೂ ಹೊರವರ್ತುಲ ರಸ್ತೆಯನ್ನು ಜಾಗತಿಕ ರೂಪದಲ್ಲಿ ವಿನ್ಯಾಸಗೊಳಿಸುವ ಬಹುಕೋಟಿ ಯೋಜನೆಗೆ (₹486.79) ಒಪ್ಪಿಗೆ.

ನೊಣವಿನಕೆರೆಯನ್ನು ಮೂಲವಾಗಿಟ್ಟುಕೊಂಡು ತಿಪಟೂರು ನಗರಕ್ಕೆ ಕುಡಿಯುವ ನೀರು ಸರಬರಾಜು ಮಾಡುವ ಹೆಚ್ಚುವರಿ ಯೋಜನೆಯ ₹39.35 ಕೋಟಿಗಳ ಅಂದಾಜು ಪಟ್ಟಿಗೆ ಆಡಳಿತಾತ್ಮಕ ಅನುಮೋದನೆ

ಕೇಂದ್ರ ಪುರಸ್ಕೃತ ಪೊಲೀಸ್‌ ಪಡೆಗಳ ಆಧುನೀಕರಣ ಯೋಜನೆಯಡಿ ಪೊಲೀಸ್‌ ಇಲಾಖೆಗೆ ಅಗತ್ಯವಿರುವ 134 ತುರ್ತು ಪ್ರತಿಕ್ರಿಯೆ ಬೆಂಬಲ ವ್ಯವಸ್ಥೆ ವಾಹನಗಳನ್ನು ಒಟ್ಟು ₹11 ಕೋಟಿ ವೆಚ್ಚದಲ್ಲಿ ಖರೀದಿಸಲಾಗುವುದು.

ಕರ್ನಾಟಕ ಗೃಹ ಮಂಡಳಿ ವತಿಯಿಂದ ಬೆಂಗಳೂರು ನಗರದ ಕೆಂಗೇರಿ ಬಳಿ ನಿರ್ಮಿಸಲಾಗುತ್ತಿರುವ ವಾಣಿಜ್ಯ ಸಂಕೀರ್ಣ/ಮಲ್ಟಿಫ್ಲೆಕ್ಸ್‌ ಕಟ್ಟಡದ ಎರಡನೇ ಹಂತದ ಕಾಮಗಾರಿಗಳನ್ನು ₹68.50 ಕೋಟಿ ವೆಚ್ಚದಲ್ಲಿ ಕೈಗೊಳ್ಳಲಾಗುವುದು.
ಒಂದು ಲಕ್ಷ ಹೊಸ ಮನೆ ನಿರ್ಮಾಣ ಗುರಿ
ರಾಜ್ಯದ ವಿವಿಧ ವಸತಿ ಯೋಜನೆಗಳಡಿ ಫಲಾನುಭವಿ ಆಧಾರಿತವಾಗಿ ಒಂದು ಲಕ್ಷ ಹೊಸ ಮನೆಗಳ ನಿರ್ಮಾಣದ ಗುರಿ ಹಾಕಿಕೊಳ್ಳಲಾಗಿದೆ. ಆಯ್ಕೆಯಾಗುವ ಸಾಮಾನ್ಯ ವರ್ಗದ ಫಲಾನುಭವಿಗಳ ಸಹಾಯಧನ ₹1.20 ಲಕ್ಷಗಳಿಂದ ₹2 ಲಕ್ಷಗಳಿಗೆ ಹಾಗೂ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ₹2 ಲಕ್ಷಗಳಿಂದ ₹3 ಲಕ್ಷಗಳಿಗೆ ಹೆಚ್ಚಿಸಲು ಸರ್ಕಾರ ತೀರ್ಮಾನಿಸಿದೆ.

ಮುಖ್ಯಮಂತ್ರಿಯವರ 'ನಮ್ಮ ಮನೆ' ಯೋಜನೆಯಡಿ ರಾಜ್ಯಾದ್ಯಂತ ಸಮುದಾಯದ ಶ್ರಮಿಕರಿಗೆ ಶೇ.50ರ ರಿಯಾಯಿತಿ ದರದಲ್ಲಿ 50 ಸಾವಿರ ನಿವೇಶನ (30x40 ಅಳತೆ).

ಭಾರತ್‌ ಜೋಡೋ ಯುವಸಂಘ ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕಾಗಿ ರಾಜ್ಯಮಟ್ಟದ ಯುವ ಸಮಿತಿ ರಚಿಸಲು ಹಾಗೂ ಪೂರ್ಣಾವಧಿ ಸಂಯೋಜಕರು ಮತ್ತು ಪ್ರೇರಕರನ್ನು ನೇಮಿಸಲು ಅನುಮೋದನೆ..

ವಿಶ್ವಬ್ಯಾಂಕಿನ ಸಹಯೋಗದೊಂದಿಗೆ ₹1,700 ಕೋಟಿಗಳ ಅಂದಾಜು ವೆಚ್ಚದಲ್ಲಿ ಕರ್ನಾಟಕ ವಿದ್ಯುತ್‌ ಬಸ್‌ ಕಾರ್ಯಕ್ರಮ ಯೋಜನೆ ಜಾರಿ ಶೀಘ್ರ.

ಶ್ರೀ ಜಯದೇವ ಹೃದ್ರೋಗ ವಿಜ್ಞಾನ ಮತ್ತು ಸಂಶೋಧನಾ ಸಂಸ್ಥೆಯ ಹುಬ್ಬಳ್ಳಿಯ ಹೃದ್ರೋಗ ಕೇಂದ್ರಕ್ಕೆ ಅಗತ್ಯವಿರುವ ಹೆಚ್ಚುವರಿ ಉಪಕರಣಗಳನ್ನು ಖರೀದಿಸಲು ₹36.597 ಕೋಟಿಗಳ ಅಂದಾಜು ಮೊತ್ತಕ್ಕೆ ಅನುಮೋದನೆ ನೀಡಲಾಗಿದೆ ಎಂದು ಡಿಸಿಎಂ ತಿಳಿಸಿದ್ದಾರೆ.

Share ePaper Clip

Preparing image...

Share

Facebook
Twitter 
WhatsApp
Telegram
Email  

Share

 మరిన్ని వార్తలు

Share :

 నోటిఫికేషన్స్